ತ್ರಿಪುರಾ ಮಾಜಿ ಸಿಎಂ ಬಿಪ್ಲಬ್ ದೇಬ್ ಕಾರು ಅಪಘಾತ
Team Udayavani, Feb 20, 2023, 9:12 PM IST
ಹರಿಯಾಣ: ತ್ರಿಪುರಾ ಮಾಜಿ ಮುಖ್ಯಮಂತ್ರಿ ಮತ್ತು ರಾಜ್ಯಸಭಾ ಸಂಸದ ಬಿಪ್ಲಬ್ ಕುಮಾರ್ ದೇಬ್ ಅವರ ಕಾರು ಸೋಮವಾರ ಹರಿಯಾಣದ ಪಾಣಿಪತ್‌ನ ಜಿಟಿ ರಸ್ತೆಯಲ್ಲಿ ಅಪಘಾತಕ್ಕೀಡಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಹರಿಯಾಣದ ಬಿಜೆಪಿ ರಾಜ್ಯ ಉಸ್ತುವಾರಿಯೂ ಆಗಿರುವ ದೇಬ್ ಅವರು ದೆಹಲಿಯಿಂದ ಚಂಡೀಗಢಕ್ಕೆ ಹೋಗುತ್ತಿದ್ದಾಗ ಸಮ್ಲಾಖಾ ಮತ್ತು ಪಾಣಿಪತ್ ನಡುವಿನ ಜಿಟಿ ರಸ್ತೆಯಲ್ಲಿ ನಿಂತಿದ್ದ ವಾಹನಕ್ಕೆ ಅವರ ಕಾರು ಡಿಕ್ಕಿ ಹೊಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಮಾಧ್ಯಮದ ಜೊತೆ ಮಾತನಾಡಿದ ಉಪ ಪೊಲೀಸ್ ವರಿಷ್ಠಾಧಿಕಾರಿ ಓಂ ಪ್ರಕಾಶ್, ತ್ರಿಪುರ ಮಾಜಿ ಮುಖ್ಯಮಂತ್ರಿ ಅವರ ಕಾರು ಅಪಘಾತವಾಗಿದ್ದು ಯಾರಿಗೂ ಗಾಯಗಳಾಗಿಲ್ಲ ಎಂದು ತಿಳಿಸಿದ್ದಾರೆ. “ಟೈರ್ ಪಂಕ್ಚರ್ ಆದ ಕಾರೊಂದು ಜಿಟಿ ರಸ್ತೆಯಲ್ಲಿ ನಿಂತಿತ್ತು ಈ ವೇಳೆ ಹಿಂದಿನಿಂದ ಬಂದ ದೇಬ್ ಅವರ ವಾಹನವು ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಅಧಿಕಾರಿಗಳು ತಪಾಸಣೆಗೆ ಬಂದರೆಂದು ಜೈಲಿನೊಳಗೆ ಮೊಬೈಲ್ ನುಂಗಿದ ಕೈದಿ…
Former Tripura CM and Rajya Sabha MP Biplab Deb had a narrow escape after his car met with an accident on GT Road in Haryana's Panipat today: Office of Biplab Deb pic.twitter.com/c7FElT0cdi
— ANI (@ANI) February 20, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.