102 ರನ್‌ ಜಯಭೇರಿ: ಲಂಕೆಯನ್ನು ಹೊರದಬ್ಬಿದ ನ್ಯೂಜಿಲ್ಯಾಂಡ್‌


Team Udayavani, Feb 21, 2023, 5:40 AM IST

102 ರನ್‌ ಜಯಭೇರಿ: ಲಂಕೆಯನ್ನು ಹೊರದಬ್ಬಿದ ನ್ಯೂಜಿಲ್ಯಾಂಡ್‌

ಪಾರ್ಲ್: “ಎ’ ವಿಭಾಗದಲ್ಲಿ ಅಚ್ಚರಿಯ ಫ‌ಲಿತಾಂಶ ದಾಖಲಾಗಿದೆ. ಮೊದಲೆರಡೂ ಪಂದ್ಯಗಳನ್ನು ಗೆದ್ದು ನಾಕೌಟ್‌ ಸಾಧ್ಯತೆಯನ್ನು ತೆರೆದಿರಿಸಿದ ಶ್ರೀಲಂಕಾ ಕೂಟದಿಂದ ಹೊರಬಿದ್ದಿದೆ. ಮೊದಲ ಎರಡೂ ಪಂದ್ಯಗಳಲ್ಲಿ ಮುಗ್ಗರಿಸಿ ಹೊರಬೀಳುವ ಅಪಾಯದಲ್ಲಿದ್ದ ನ್ಯೂಜಿಲ್ಯಾಂಡ್‌ ಉಳಿದೆರಡು ಸ್ಪರ್ಧೆಗಳಲ್ಲಿ ಮೇಲುಗೈ ಸಾಧಿಸಿ ನಾಕೌಟ್‌ ಸಾಧ್ಯತೆಯನ್ನು ತೆರೆದಿರಿಸಿದೆ!

ಇದಕ್ಕೆ ಕಾರಣವಾದದ್ದು ರವಿವಾರದ ದ್ವಿತೀಯ ಮುಖಾಮುಖಿ. ಶ್ರೀಲಂಕಾ ಎದುರಿನ ಈ ಮುಖಾಮುಖಿಯನ್ನು ನ್ಯೂಜಿಲ್ಯಾಂಡ್‌ 102 ರನ್ನುಗಳಿಂದ ಭರ್ಜರಿಯಾಗಿ ಗೆದ್ದು ತನ್ನ ರನ್‌ರೇಟ್‌ ಹೆಚ್ಚಿಸಿಕೊಂಡು ದ್ವಿತೀಯ ಸ್ಥಾನಿಯಾಯಿತು. ನಾಲ್ಕೂ ಪಂದ್ಯಗಳನ್ನು ಗೆದ್ದಿರುವ ಆಸ್ಟ್ರೇಲಿಯ ಈಗಾಗಲೇ ಸೆಮಿಫೈನಲ್‌ಗೆ ಲಗ್ಗೆ ಹಾಕಿದೆ.

ನ್ಯೂಜಿಲ್ಯಾಂಡ್‌ 4 ಪಂದ್ಯಗಳಿಂದ 4 ಅಂಕ ಸಂಪಾದಿಸಿದ್ದು +0.138 ರನ್‌ರೇಟ್‌ ಹೊಂದಿದೆ. ಶ್ರೀಲಂಕಾ ಕೂಡ 4 ಪಂದ್ಯಗಳಿಂದ 4 ಅಂಕ ಗಳಿಸಿದೆಯಾದರೂ ಮೈನಸ್‌ ರನ್‌ರೇಟ್‌ ಹೊಂದಿದೆ (-1.460).

ರೇಸ್‌ನಲ್ಲಿ ದಕ್ಷಿಣ ಆಫ್ರಿಕಾ
ನ್ಯೂಜಿಲ್ಯಾಂಡ್‌ ಜತೆ ದ್ವಿತೀಯ ಸ್ಥಾನದ ರೇಸ್‌ನಲ್ಲಿರುವ ತಂಡ ಆತಿಥೇಯ ದಕ್ಷಿಣ ಆಫ್ರಿಕಾ. ಅದು ಮೂರರಲ್ಲಿ ಒಂದು ಪಂದ್ಯವನ್ನಷ್ಟೇ ಗೆದ್ದು 2 ಅಂಕ ಹೊಂದಿದೆ. ರನ್‌ರೇಟ್‌ +0.685. ಅಂದರೆ, ನ್ಯೂಜಿಲ್ಯಾಂಡ್‌ಗಿಂತ ಹೆಚ್ಚು. ದಕ್ಷಿಣ ಆಫ್ರಿಕಾ ತನ್ನ ಕೊನೆಯ ಪಂದ್ಯದಲ್ಲಿ ಬಾಂಗ್ಲಾದೇಶವನ್ನು ಎದುರಿಸಲಿದೆ. ಇಲ್ಲಿ ಗೆದ್ದರೆ ದ್ವಿತೀಯ ಸ್ಥಾನಿಯಾಗಿ ಸೆಮಿಫೈನಲ್‌ ಪ್ರವೇಶಿಸಲಿದೆ. ಮೂರನ್ನೂ ಸೋತಿರುವ ಬಾಂಗ್ಲಾ ಈಗಾಗಲೇ ಕೂಟದಿಂದ ಹೊರಬಿದ್ದಿದೆ. ಅಕಸ್ಮಾತ್‌ ಬಾಂಗ್ಲಾ ಗೆದ್ದರಷ್ಟೇ ನ್ಯೂಜಿಲ್ಯಾಂಡ್‌ಗೆ ಚಾನ್ಸ್‌ ಎಂಬುದು ಈಗಿನ ಲೆಕ್ಕಾಚಾರ. ಆಗ ದಕ್ಷಿಣ ಆಫ್ರಿಕಾ ನಿರ್ಗಮಿಸುತ್ತದೆ.

ಕೆರ್‌ ಆಲ್‌ರೌಂಡ್‌ ಆಟ
ಶ್ರೀಲಂಕಾ ವಿರುದ್ಧ ಮೊದಲು ಬ್ಯಾಟಿಂಗ್‌ ನಡೆಸಿದ ನ್ಯೂಜಿಲ್ಯಾಂಡ್‌ ಮೂರೇ ವಿಕೆಟಿಗೆ 162 ರನ್‌ ಬಾರಿಸಿತು. ಬಳಿಕ ಲಂಕೆಯನ್ನು 15.5 ಓವರ್‌ಗಳಲ್ಲಿ 60 ರನ್ನಿಗೆ ಉರುಳಿಸಿತು.

ಕಿವೀಸ್‌ ಪರ ಓಪನರ್‌ ಸುಝೀ ಬೇಟ್ಸ್‌ 56, ವನ್‌ಡೌನ್‌ ಆಟಗಾರ್ತಿ ಅಮೇಲಿಯಾ ಕೆರ್‌ 66 ರನ್‌ ಬಾರಿಸಿದರು. ಬೌಲಿಂಗ್‌ನಲ್ಲಿ ಎಲ್ಲ 6 ಮಂದಿ ವಿಕೆಟ್‌ ಉಡಾಯಿಸಿದರು. ಇವರಲ್ಲಿ ಅಮೇಲಿಯಾ ಕೆರ್‌ 7ಕ್ಕೆ 2, ಲೀ ಟಹುಹು 12ಕ್ಕೆ 2 ವಿಕೆಟ್‌ ಕಿತ್ತು ಹೆಚ್ಚಿನ ಯಶಸ್ಸು ಸಾಧಿಸಿದರು. ಆಲ್‌ರೌಂಡ್‌ ಪ್ರದರ್ಶನವಿತ್ತ ಅಮೇಲಿಯಾ ಕೆರ್‌ ಪಂದ್ಯಶ್ರೇಷ್ಠ ಗೌರವ ಒಲಿಸಿಕೊಂಡರು.

ಟಾಪ್ ನ್ಯೂಸ್

1-deee

Udupi; ಪೊಲೀಸ್‌ ಇಲಾಖೆ ವಿರುದ್ಧ ಹಿಂದೂ ಸಂಘಟನೆಗಳ ಪ್ರತಿಭಟನೆ

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-deee

Udupi; ಪೊಲೀಸ್‌ ಇಲಾಖೆ ವಿರುದ್ಧ ಹಿಂದೂ ಸಂಘಟನೆಗಳ ಪ್ರತಿಭಟನೆ

Shikaripur: ಊಟ ಮಾಡುತ್ತಿದ್ದ ತಂದೆಯ ಕೊಂದ ಮಗ

Shikaripur: ಊಟ ಮಾಡುತ್ತಿದ್ದ ತಂದೆಯ ಕೊಂದ ಮಗ

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.