ರಾಶಿ ಫಲ: ಆರೋಗ್ಯ ಗಮನಿಸಿ, ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆ ಸಂಭವ
Team Udayavani, Feb 21, 2023, 7:20 AM IST
ಮೇಷ: ಅನಿರೀಕ್ಷಿತ ಧನಸಂಪತ್ತು ವೃದ್ಧಿ. ಉದ್ಯೋಗ ವ್ಯವಹಾರದಲ್ಲಿ ಸಂದರ್ಭಕ್ಕೆ ಸರಿಯಾಗಿ ಸಹಾಯ ಒದಗಿ ಬರುವುದು. ಆಸ್ತಿ ವಿಚಾರದಲ್ಲಿ ಮುನ್ನಡೆ. ಉತ್ತಮ ಜವಾಬ್ದಾರಿಯುತ ವಾಕ್ ಚತುರತೆ. ಗುರುಹಿರಿಯರಿಂದ ಸಂತೋಷ.
ವೃಷಭ: ದೂರದ ಮಿತ್ರರ ಭೇಟಿ. ಕೆಲಸ ಕಾರ್ಯಗಳಲ್ಲಿ ನಿರೀಕ್ಷಿತ ಗುರಿ ಸಾಧನೆಯಿಂದ ನೆಮ್ಮದಿ. ಉತ್ತಮ ಧನಾರ್ಜನೆ. ಬಂಧು ಮಿತ್ರರ ಸಹಕಾರ. ದಾಂಪತ್ಯದಲ್ಲಿ ಪ್ರೀತಿ ಅನುರಾಗ ವೃದ್ಧಿ. ಆಸ್ತಿ ವಿಚಾರಗಳಲ್ಲಿ ಪರಿಶ್ರಮದಿಂದ ಮುನ್ನಡೆ.
ಮಿಥುನ: ಆರೋಗ್ಯ ಗಮನಿಸಿ. ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆ ಸಂಭವ. ಸ್ಥಟತೆಗೆ ಆದ್ಯತೆ ನೀಡಿ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಪಾಲುದಾರಿಕಾ ವೃತ್ತಿಯಲ್ಲಿ ಪ್ರಗತಿ. ನಿರೀಕ್ಷಿತ ಧನಾಗಮನ. ಸಾಂಸಾರಿಕ ಸುಖ ವೃದ್ಧಿ. ಮಕ್ಕಳ ನಿಮಿತ್ತ ಶ್ರಮ.
ಕರ್ಕ: ಹೆಚ್ಚಿನ ಸ್ಥಾನ ಗೌರವಕ್ಕಾಗಿ ಪರಿಶ್ರಮ. ಅಗತ್ಯಕ್ಕೂ ಮೀರಿದ ಜವಾಬ್ದಾರಿಯಿಂದ ದೈಹಿಕ ಮಾನಸಿಕ ಒತ್ತಡ ಎದುರಾದೀತು. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ. ಗುರು ಸಮಾನರಿಂದ ಲಾಭ. ಭೂಮ್ಯಾದಿ ವ್ಯವಹಾರಗಳಲ್ಲಿ ಅಡೆತಡೆ. ಅನಗತ್ಯ ಖರ್ಚು ವೆಚ್ಚಗಳು ಎದುರಾದೀತು.
ಸಿಂಹ: ನಿರೀಕ್ಷೆಗೂ ಮೀರಿದ ಧನಲಾಭ. ಉತ್ತಮ ವಾಕ್‌ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ವ್ಯವಹಾರಗಳಲ್ಲಿ ಪಾರದರ್ಶಕತೆಗೆ ಆದ್ಯತೆ ನೀಡುವುದರಿಂದ ಗೌರವ ಆದರಗಳು ವೃದ್ಧಿ. ಗುರು ಹಿರಿಯರ ಆರೋಗ್ಯ ಗಮನಿಸಿ. ದಾಂಪತ್ಯ ಸುಖ ಮಧ್ಯಮ.
ಕನ್ಯಾ: ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿಯಾದ ಸಂತೋಷ. ದೇವತಾ ಸ್ಥಳ ಸಂದರ್ಶನ. ಗುರು ಹಿರಿಯರ ಅವಲಂಬನೆ ಮಾರ್ಗದರ್ಶನದ ಲಾಭ. ದಾಂಪತ್ಯ ಸುಖ ತೃಪ್ತಿದಾಯಕ. ಮಿತ್ರರ ಸಹಕಾರದಿಂದ ಕೆಲಸಗಳಲ್ಲಿ ಪ್ರಗತಿ. ಗೃಹೋಪ ವಸ್ತುಗಳ ಸಂಗ್ರಹ.
ತುಲಾ: ಜ್ಞಾನ ವಿವೇಕ ನಿಷ್ಠೆಯಿಂದ ಕೂಡಿದ ಧಾರ್ಮಿಕ ಚಟುವಟಿಕೆಗಳು. ಗುರು ಹಿರಿಯರ ಸೂಕ್ತ ಮಾರ್ಗದರ್ಶನದ ಲಾಭ. ಮಾನಸಿಕ ನೆಮ್ಮದಿ. ತೃಪ್ತಿಯಾಯಕ ದಿನ. ಭೂಮಿ ವಾಹನ ಆಸ್ತಿ ವಿಚಾರದಲ್ಲಿ ಪ್ರಗತಿ. ಗೃಹದಲ್ಲಿ ಸಂಭ್ರಮದ ಪರಿಸ್ಥಿತಿ.
ವೃಶ್ಚಿಕ: ಆರೋಗ್ಯ ಗಮನಿಸಿ. ದೈಹಿಕವಾಗಿ ಹೆಚ್ಚು ಶ್ರಮ ವಹಿಸದೇ ಕಾರ್ಯಪ್ರವೃತ್ತರಾಗಿ. ದೀರ್ಘ ಪ್ರಯಾಣ ಸಂಭವ. ಹಣಕಾಸಿನ ವಿಚಾರದಲ್ಲಿ ಪ್ರಗತಿ. ಅಧಿಕ ಚಿಂತಿಸದಿರಿ. ಪರರಿಗೆ ಜವಾಬ್ದಾರಿ ವಹಿಸುವಾಗಿ ತಿಳಿದು ನಿರ್ಣಯಿಸಿರಿ.
ಧನು: ನಿರೀಕ್ಷಿತ ಸ್ಥಾನಮಾನ ಗೌರವಾದಿ ಸಿಕ್ಕಿದ ಸಂತೋಷ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಪಾಲುದಾರಿಕಾ ಕ್ಷೇತ್ರಗಳಲ್ಲಿ ಪರಸ್ಪರ ಸಹಕಾರ. ದಂಪತಿಗಳಿಂದ ಸಾಮರಸ್ಯ ಕಾಪಾಡಲು ಅಧಿಕ ಪರಿಶ್ರಮ ಎದುರಾದೀತು. ಹಣಕಾಸಿನ ವಿಚಾರದಲ್ಲಿ ಕೊರತೆ ಆಗದು.
ಮಕರ: ಪರರಿಗೆ ಸಹಾಯ ಮಾಡುವಾಗ ಪೂರ್ವಪರ ವಿಚಾರ ತಿಳಿದು ಕಾರ್ಯ ನಿರ್ವಹಿಸಿ. ದೂರ ಪ್ರಯಾಣ ಅನುಕೂಲಕಾರಿಯಾಗಲಾರದು. ಖರ್ಚಿನಲ್ಲಿ ಹಿಡಿತವಿರಲಿ. ವಿದ್ಯಾರ್ಥಿಗಳಿಗೆ ಪರಿಶ್ರಮದಿಂದ ಸಫಲತೆ. ದಾಂಪತ್ಯ ತೃಪ್ತಿಕರ.
ಕುಂಭ: ನಿರೀಕ್ಷಿತ ಧನಾಗಮವಿದ್ದರೂ ಖರ್ಚಿಗೆ ಹಲವಾರು ದಾರಿಗಳು ತೋರೀತು. ನೂತನ ಮಿತ್ರರ ಸಂಪರ್ಕವನ್ನು ಸರಿಯಾಗಿ ಉಪಯೋಗಿಸಿಕೊಳ್ಳುವುದರಿಂದ ಪ್ರಗತಿ. ಪ್ರಯಾಣ ಲಾಭಕರ. ಘರ್ಷಣೆಗೆ ಅವಕಾಶ ನೀಡದಿರಿ.
ಮೀನ: ಮಾನಸಿಕ ಆರೋಗ್ಯ ಸದೃಢವಾಗಿದ್ದರೂ ದೈಹಿಕ ಆರೋಗ್ಯದ ಬಗ್ಗೆ ಗಮನವಿರಲಿ. ದಾಂಪತ್ಯದಲ್ಲಿ ತೃಪ್ತಿ ಸುಖ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ. ನಿರಂತರ ಧನಾರ್ಜನೆ. ಆಲೋಚನೆಗೆ ತಕ್ಕ ಕಾರ್ಯ ನಿರ್ವಹಿಸಿ ಸಫಲತೆ. ಉದ್ಯೋಗ ವ್ಯವಹಾರಗಳಲ್ಲಿ ಸಹೋದ್ಯೋಗಿಗಳ ಸಹಕಾರದಿಂದ ಪ್ರಗತಿ. ಜನಮನ್ನಣೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ
Daily horoscope; ಇಂದಿನದು ಅದೃಷ್ಟದ ದಿನ ಎನ್ನಬಹುದು…
Daily Horoscope: ಮನಸ್ಸು ಚಂಚಲವಾಗಲು ಬಿಡದಿರಿ, ಉದ್ಯೋಗದಲ್ಲಿ ಭಿನ್ನ ರೀತಿಯ ಜವಾಬ್ದಾರಿಗಳು
MUST WATCH
ಹೊಸ ಸೇರ್ಪಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.