ಮತದಾನ ಸಮಯ ಕಾಯ್ದಿರಿಸಿ!- ಮೊಬೈಲ್ ಆ್ಯಪ್ ಅಭಿವೃದ್ಧಿಪಡಿಸಿದ ಚು. ಆಯೋಗ
Team Udayavani, Feb 22, 2023, 7:00 AM IST
ಬೆಂಗಳೂರು: ಸಿನೆಮಾ, ರೈಲ್ವೇ ಟಿಕೆಟ್ಗಳನ್ನು ಮುಂಚಿತವಾಗಿಯೇ ಕಾಯ್ದಿರಿಸುವಂತೆ ಈಗ ನೀವು ಮತದಾನ ಮಾಡುವ ಸಮಯವನ್ನೂ ಮೊದಲೇ ನಿಗದಿ ಮಾಡಿಕೊಳ್ಳಬಹುದು!
ಮತಗಟ್ಟೆಯಲ್ಲಿ ಸರತಿ ಸಾಲಿನಲ್ಲಿ ನಿಲ್ಲುವುದನ್ನು ತಪ್ಪಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಚುನಾವಣ ವಿಭಾಗ ನೂತನ ಮೊಬೈಲ್ ಅಪ್ಲಿಕೇಷನ್ ಸಿದ್ಧಪಡಿಸುತ್ತಿದೆ. ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿಯಿದ್ದು, ಆಯೋಗ ಈಗಿನಿಂದಲೇ ಸಿದ್ಧತೆ ನಡೆಸಿದೆ.
ಇದು ಯಶಸ್ವಿಯಾದರೆ ಮುಂದಿನ ಹಂತಗಳಲ್ಲಿ ರಾಜ್ಯದೆಲ್ಲೆಡೆ ವಿಸ್ತರಿಸುವ ಆಲೋಚನೆ ಆಯೋಗಕ್ಕಿದೆ.
ಮತದಾನ ಮಾಡಲು ಮತಗಟ್ಟೆಗಳಲ್ಲಿ ಸರತಿ ಸಾಲಿನಲ್ಲಿ ನಿಂತು ಸಮಯ ವ್ಯರ್ಥ ಮಾಡುವ ಬದಲು, ಯಾವ ಸಮಯದಲ್ಲಿ ಮತದಾನ ಮಾಡಲು ಬರುತ್ತೇವೆ ಎಂಬುದನ್ನು ತಿಳಿಸಿ ಆ ಸಮಯದಲ್ಲಿ ಯಾವುದೇ ಅಡೆತಡೆಯಿಲ್ಲದೆ ನೇರವಾಗಿ ಹೋಗಿ ಮತದಾನ ಮಾಡಲು ಅವಕಾಶವಿರುವ ವ್ಯವಸ್ಥೆ ಮಾಡಲಾಗುತ್ತಿದೆ. ಈ ಕುರಿತಂತೆ ಚುನಾವಣ ಆಯೋಗದೊಂದಿಗೆ ಬಿಬಿಎಂಪಿ ಚುನಾವಣ ವಿಭಾಗ ಚರ್ಚೆ ನಡೆಸಿ, ಸಮಯ ನಿಗದಿಗೆ ಮೊಬೈಲ್ ಆ್ಯಪ್ ಸಿದ್ಧಪಡಿಸುತ್ತಿದೆ.
ಎಸ್ಎಂಎಸ್ ಮೂಲಕ ಖಾತ್ರಿ
ಈ ಮೊಬೈಲ್ ಆ್ಯಪ್ನಲ್ಲಿ ಚುನಾವಣೆ, ಮತದಾನಕ್ಕೆ ಸಂಬಂಧಿಸಿದ ವಿಷಯಗಳ ಮಾಹಿತಿ ಇರುತ್ತದೆ. ಅದರಲ್ಲಿ ಮತದಾರರು ತಮ್ಮ ಮತದಾರರ ಗುರುತಿನ ಚೀಟಿಯ ಸಂಖ್ಯೆ ನಮೂದಿಸಿದರೆ, ಯಾವ ಮತಗಟ್ಟೆಯಲ್ಲಿ ಮತದಾನ ಮಾಡಬೇಕು ಎಂಬ ಮಾಹಿತಿ ದೊರೆಯಲಿದೆ. ಜತೆಗೆ ತಾವು ಯಾವ ಸಮಯದಲ್ಲಿ ಮತದಾನ ಮಾಡಲು ಬರುತ್ತೇವೆ ಎಂಬುದನ್ನು ಮತದಾರರು ನಮೂದಿಸಿದರೆ, ಅದನ್ನು ನೋಂದಣಿ ಮಾಡಿಕೊಂಡು, ಅವರ ಮೊಬೈಲ್ಗೆ ಎಸ್ಎಂಎಸ್ ಮೂಲಕ ಖಾತ್ರಿಯ ಸಂದೇಶ ಬರಲಿದೆ. ಜತೆಗೆ ಸಂದೇಶದಲ್ಲಿ ಯುನೀಕ್ ಸಂಖ್ಯೆಯೂ ಇರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
MUST WATCH
ಹೊಸ ಸೇರ್ಪಡೆ
Maharstra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್
Aaram Aravinda Swamy Movie Review: ಪಕ್ಕದ್ಮನೆ ಹುಡುಗನ ಫನ್ರೈಡ್
Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.