ತುಳು ಅಕಾಡೆಮಿ ಭವನದ ಕಾಮಗಾರಿಗೆ ವೇಗ: ಡಾ|ಸಿ. ಸೋಮಶೇಖರ್ ಸೂಚನೆ
ಗಡಿ ಪ್ರದೇಶ ಅಭಿವೃದ್ಧಿ ಕಾರ್ಯಕ್ರಮ - ಮಂಗಳೂರಿನಲ್ಲಿ ಸಭೆ
Team Udayavani, Feb 22, 2023, 6:20 AM IST
ಮಂಗಳೂರು: ಮಂಗಳೂರಿನ ತುಳು ಸಾಹಿತ್ಯ ಅಕಾಡೆಮಿ ಭವನದಲ್ಲಿ ನಡೆಯುತ್ತಿ ರುವ ಕಾಮಗಾರಿಗಳಿಗೆ ವೇಗ ನೀಡುವಂತೆ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ| ಸಿ. ಸೋಮಶೇಖರ್ ಅಧಿಕಾರಿಗಳಿಗೆ ನಿರ್ದೇಶಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಗಡಿ ಪ್ರದೇಶ ಅಭಿವೃದ್ಧಿ ಕಾರ್ಯಕ್ರಮ ಕುರಿತು ಮಂಗಳವಾರ ಹಮ್ಮಿ ಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಂಗಳೂರಿನಲ್ಲಿ ನಿರ್ಮಾಣವಾ ಗುತ್ತಿರುವ ತುಳು ಸಾಹಿತ್ಯ ಅಕಾಡೆಮಿ ಭವನಕ್ಕೆ 3.60 ಕೋ.ರೂ. ಮಂಜೂರು ಮಾಡಲಾಗಿದೆ. ಕಾಮಗಾರಿ ನಿರ್ವಹಿಸುತ್ತಿರುವ ಲೋಕೋಪಯೋಗಿ ಇಲಾಖೆ
ಮಾರ್ಚ್‌ನೊಳಗೆ ಪೂರ್ಣಗೊಳಿಸಬೇಕು. ನಿಗದಿ ಪಡಿಸಿದ ಕಾಲಮಿತಿ ಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಲೋಕೋಪ ಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಚಂದ್ರಶೇಖರಯ್ಯ ಅವರಿಗೆ ಸೂಚನೆ ನೀಡಿದರು.
ಶೇ. 75ರಷ್ಟು ಪೂರ್ಣ
ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಮಾತನಾಡಿ, ತುಳು ಭವನದಲ್ಲಿ ಈಗಾಗಲೇ ಶೇ. 75ರಿಂದ 80ರಷ್ಟು ಕಾಮಗಾರಿಗಳು ಪೂರ್ಣಗೊಂಡಿದ್ದು, ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣ ಗೊಳ್ಳುವ ವಿಶ್ವಾಸವಿದೆ ಎಂದರು.
ನಗರದಲ್ಲಿ ನಿರ್ಮಾಣ ವಾಗುತ್ತಿರುವ ಕೊಂಕಣಿ ಸಾಹಿತ್ಯ ಅಕಾಡೆಮಿ ಭವನಕ್ಕೆ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದಿಂದ 3 ಕೋಟಿ ರೂ. ಅನುದಾನ ನೀಡಲಾಗಿದೆ. ಆ ಕಟ್ಟಡದ ಮೂಲಸೌಕರ್ಯಗಳಿಗೆ ಅಗತ್ಯವಿರುವ ಹಣವನ್ನು ಸಿಎಸ್‌ಆರ್ ಫಂಡ್‌ನಡಿಯೂ ಪಡೆಯಲು ಅವಕಾಶವಿದೆ. ಬ್ಯಾರಿ ಅಕಾಡೆಮಿ ಕಟ್ಟಡ ನಿರ್ಮಿಸಲು ಸೂಕ್ತ ನಿವೇಶನ ಹುಡುಕುವಂತೆ ಸೂಚಿಸಿದರು. ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ| ಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಉಪಸ್ಥಿತರಿದ್ದರು.
ಜಿಲ್ಲಾ ರಂಗಮಂದಿರ: 5 ಕೋ.ರೂ ಬಿಡುಗಡೆ
ಜಿಲ್ಲಾ ರಂಗಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದಿಂದ 5 ಕೋ.ರೂ. ಬಿಡುಗಡೆಯಾಗಿದೆ. ಸರಕಾರದಿಂದ ಪರಿಷ್ಕೃತ ಆಡಳಿತಾತ್ಮಕ ಮಂಜೂರಾತಿಯನ್ನು ಮಂಗಳೂರು ಪಾಲಿಕೆ ಪಡೆದುಕೊಳ್ಳಬೇಕು. ಕಾಸರಗೋಡಿನಲ್ಲಿ ನಾಡೋಜ ಕಯ್ನಾರ ಕಿಞ್ಞಣ್ಣ ರೈ ಹೆಸರಿನಲ್ಲಿ ಕನ್ನಡ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಂಬಂಧಿಸಿದಂತೆ 9 ಸದಸ್ಯರನ್ನೊಳಗೊಂಡ ಸಮಿತಿಯನ್ನು ಈಗಾಗಲೇ ರಚಿಸಲಾಗಿದೆ. ಅವರೊಂದಿಗೆ ಚರ್ಚಿಸಿ ಕಾರ್ಯಪ್ರವೃತ್ತರಾಗುವಂತೆ ಅಧಿಕಾರಿಗಳಿಗೆ ಡಾ| ಸಿ. ಸೋಮಶೇಖರ್ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Tollywood: ಒಂದೇ ದಿನ ವಿವಾಹವಾಗಲಿದ್ದಾರಾ ಅಕ್ಕಿನೇನಿ ಸಹೋದರರು? ನಾಗಾರ್ಜುನ್ ಹೇಳಿದ್ದೇನು?
Video: ಜೈಲಿನಿಂದ ಬಿಡುಗಡೆಯಾದ ಖುಷಿ… ಜೈಲು ಅಧಿಕಾರಿಗಳ ಎದುರೇ ಯುವಕನ ಬ್ರೇಕ್ ಡ್ಯಾನ್ಸ್
Mangaluru: 7 ಕೆರೆ, ಪಾರ್ಕ್ ಅಭಿವೃದ್ಧಿಗೆ ಅಮೃತ 2.0
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.