ಗೌಳಿ ರಿಲೀಸ್‌ಗೆ ಕೌಂಟ್‌ಡೌನ್
Team Udayavani, Feb 22, 2023, 2:11 PM IST
ನಟ ಶ್ರೀನಗರ ಕಿಟ್ಟಿ ನಾಯಕನಾಗಿ ಅಭಿನಯಿಸಿರುವ “ಗೌಳಿ’ ಸಿನಿಮಾದ ಬಿಡುಗಡೆಗೆ ಕೌಂಟ್‌ಡೌನ್ ಶುರುವಾಗಿದೆ. ಇದೇ ಫೆ. 24ಕ್ಕೆ ಥಿಯೇಟರ್‌ನಲ್ಲಿ “ಗೌಳಿ’ ಅಬ್ಬರ ಶುರುವಾಗಲಿದ್ದು, ಸದ್ಯ ಭರದಿಂದ ಸಿನಿಮಾದ ಪ್ರಚಾರ ಕಾರ್ಯಗಳಲ್ಲಿ ನಿರತವಾಗಿರುವ ಚಿತ್ರತಂಡ ಸಿನಿಮಾವನ್ನು ಪ್ರೇಕ್ಷಕರಿಗೆ ತಲುಪಿಸುವ ಕೊನೆಹಂತದ ಕಸರತ್ತಿನಲ್ಲಿ ಬಿಝಿಯಾಗಿದೆ.
ಸದ್ಯ “ಗೌಳಿ’ ಸಿನಿಮಾದ ಬಿಡುಗಡೆಗೂ ಮುನ್ನ ಮಾಧ್ಯಮಗಳ ಮುಂದೆ ಬಂದಿದ್ದ ಚಿತ್ರತಂಡ, “ಗೌಳಿ’ ಸಿನಿಮಾದ ವಿಶೇಷತೆ, ಬಿಡುಗಡೆಗೂ ಮುನ್ನ ಸಿಗುತ್ತಿರುವ ಪ್ರತಿಕ್ರಿಯೆಗಳ ಬಗ್ಗೆ ಒಂದಷ್ಟು ಮಾತನಾಡಿತು.
“ಈಗಾಗಲೇ ಬಿಡುಗಡೆಯಾಗಿರುವ “ಗೌಳಿ’ ಸಿನಿಮಾದ ಟ್ರೇಲರ್‌ಗೆ ನಮ್ಮ ನಿರೀಕ್ಷೆಗೂ ಮೀರಿದ ರೆಸ್ಪಾನ್ಸ್ ಸಿಗುತ್ತಿದೆ. ಟ್ರೇಲರ್ ನೋಡಿದ ಪ್ರತಿಯೊಬ್ಬರೂ ಸಿನಿಮಾದ ಬಗ್ಗೆ ಸಾಕಷ್ಟು ನಿರೀಕ್ಷೆಯ ಮಾತುಗಳನ್ನಾಡುತ್ತಿದ್ದಾರೆ. ಇಂಡಸ್ಟ್ರಿ ಕಡೆಯಿಂದ ಅನೇಕರು ಟ್ರೇಲರ್‌ಗೆ ಮೆಚ್ಚುಗೆ ಸೂಚಿಸಿದ್ದಾರೆ. ಆಡಿಯನ್ಸ್ ಕೂಡ ದೊಡ್ಡ ಮಟ್ಟದಲ್ಲಿ ಟ್ರೇಲರ್ ಇಷ್ಟಪಟ್ಟಿದ್ದಾರೆ. ಸೋಶಿಯಲ್ ಮೀಡಿಯಾದಲ್ಲೂ ಟ್ರೇಲರ್‌ಗೆ ಒಳ್ಳೆಯ ವೀವ್ಸ್ ಸಿಗುತ್ತಿದೆ. ಟ್ರೇಲರ್‌ಗೆ ಸಿಗುತ್ತಿರುವ ರೆಸ್ಪಾನ್ಸ್ ನಮ್ಮ ಕಾನ್ಫಿಡೆನ್ಸ್ ಹೆಚ್ಚಿಸಿದೆ’ ಎಂಬುದು ನಟ ಶ್ರೀನಗರ ಕಿಟ್ಟಿ ಮಾತು.
ಇನ್ನು ನಾಯಕಿ ಪಾವನಾ ಗೌಡ ಅವರಿಗೂ “ಗೌಳಿ’ ಸಿನಿಮಾದ ಮೇಲೆ ಸಾಕಷ್ಟು ನಂಬಿಕೆಯಿದೆ. “ಬಹಳ ವರ್ಷಗಳಿಂದ ಇಂಥದ್ದೊಂದು ಪಾತ್ರ ಸಿಗಲಿ ಎಂಬ ನಿರೀಕ್ಷೆಯಲ್ಲಿದ್ದೆ. ನಾನು ಬಯಸಿದಂಥ ಪಾತ್ರ “ಗೌಳಿ’ ಸಿನಿಮಾದಲ್ಲಿದೆ. ಟ್ರೇಲರ್‌ಗೆ ಸಿಗುತ್ತಿರುವ ಪ್ರತಿಕ್ರಿಯೆ ನೋಡಿದರೆ, ಸಿನಿಮಾ ಕೂಡ ಅಷ್ಟೇ ದೊಡ್ಡ ಹಿಟ್ ಆಗಲಿದೆ’ ಎಂಬುದು ಪಾವನಾ ಗೌಡ ಅವರ ವಿಶ್ವಾಸದ ಮಾತು.
ನಿರ್ಮಾಪಕ ರಘು ಸಿಂಗಂ, ನಿರ್ದೇಶಕ ಸೂರ ಅವರಿಗೂ “ಗೌಳಿ’ ಸಿನಿಮಾದ ಮೇಲೆ ಸಾಕಷ್ಟು ನಿರೀಕ್ಷೆಯಿದೆ. “ಎಲ್ಲ ಥರದ ಆಡಿಯನ್ಸ್‌ಗೂ ಇಷ್ಟವಾಗುವಂಥ ಸಿನಿಮಾ ಮಾಡಿದ್ದೇವೆ. ಕನ್ನಡದಲ್ಲಿ ಇತ್ತೀಚಿನ ದಿನಗಳಲ್ಲಿ ಇಂಥದ್ದೊಂದು ಕಂಟೆಂಟ್ ಮೇಲೆ ಸಿನಿಮಾಗಳು ಬಂದಿದ್ದು ಕಡಿಮೆ. ಕ್ರೈಂ, ಆ್ಯಕ್ಷನ್, ಥ್ರಿಲ್ಲರ್, ಲವ್, ಎಮೋಶನ್ಸ್ ಎಲ್ಲವೂ ಸಿನಿಮಾದಲ್ಲಿದೆ. ಇಡೀ ಸಿನಿಮಾ ಆಡಿಯನ್ಸ್‌ಗೆ ಹೊಸ ಅನುಭವ ಕೊಡಲಿದೆ’ ಎಂಬುದು ನಿರ್ಮಾಪಕರು ಮತ್ತು ನಿರ್ದೇಶಕರ ಮಾತು.
ಅಂದಹಾಗೆ, “ಗೌಳಿ’ ಸಿನಿಮಾವನ್ನು ರಾಜ್ಯಾದ್ಯಂತ ಸುಮಾರು 150ಕ್ಕೂ ಹೆಚ್ಚಿನ ಕೇಂದ್ರಗಳಲ್ಲಿ ತೆರೆಗೆ ತರಲು ಚಿತ್ರತಂಡ ಪ್ಲಾನ್ ಮಾಡಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.