ಕುಣಿಗಲ್: ಕೊಲೆ ಆರೋಪಿಗಳ ಬಂಧನ: ಗ್ರಾಮಸ್ಥರಿಂದ ಪೊಲೀಸರಿಗೆ ಸನ್ಮಾನ
ಪೊಲೀಸ್ ಸಿಬ್ಬಂದಿಗಳೇ ನಿಜವಾದ ಹೀರೋ: ಎಸ್ಪಿ ರಾಹುಲ್ ಕುಮಾರ್
Team Udayavani, Feb 22, 2023, 3:26 PM IST
ಕುಣಿಗಲ್: ಕೊಲೆ ಮಾಡಿದ ಆರೋಪಿಗಳನ್ನು ಬಂಧಿಸಿದ ಕುಣಿಗಲ್ ಪೊಲೀಸರ ಕಾರ್ಯದಕ್ಷತೆ ಮೆಚ್ಚಿ ಗ್ರಾಮಸ್ಥರು ಪೊಲೀಸರನ್ನು ಸನ್ಮಾನಿಸಿ, ಗೌರವಿಸಿದ ಅಪರೂಪದ ಪ್ರಸಂಗ ಬುಧವಾರ ಪಟ್ಟಣದಲ್ಲಿ ನಡೆಯಿತು.
ತಾಲೂಕಿನ ಸೀನಪ್ಪನಹಳ್ಳಿ ಗ್ರಾಮದ ಮಂಜುನಾಥ್ ಎಂಬವನನ್ನು ಫೆ 3 ರಂದು ಆತನ ಪತ್ನಿ ಹರ್ಷಿತಾ ತನ್ನ ಸಹಚರರೊಂದಿಗೆ ಸೇರಿ ಬರ್ಬರವಾಗಿ ಹತ್ಯೆಗೈದು ಯಾರಿಗೂ ಅನುಮಾನ ಬರಬಾರದೆಂಬ ಕಾರಣಕ್ಕೆ ಶವ ಹಾಗೂ ಬೈಕ್ ಅನ್ನು ಕೆರೆಯಲ್ಲಿ ಎಸೆದಿದ್ದರು.
ಪ್ರಕರಣ ಬೇಧಿಸಿದ ಕುಣಿಗಲ್ ಪೊಲೀಸರು ಎಂಟು ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು.
ಈ ಹಿನ್ನಲೆ ತಾಲೂಕಿನ ಸೀನಪ್ಪನಹಳ್ಳಿ ಹೊಸಕೆರೆ ಮೊದಲಾದ ಊರಿನ ಗ್ರಾಮಸ್ಥರು ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ರಾಹುಲ್ ಕುಮಾರ್ ಶಹಪುರ್‌ವಾದ್, ಡಿವೈಎಸ್‌ಪಿ ಲಕ್ಷ್ಮಿಕಾಂತ್, ಸಿಪಿಐಗಳಾದ ಗುರುಪ್ರಸಾದ್, ಅರುಣ್‌ಸಾಲಂಕಿ, ಪಿಎಸ್‌ಐ ಜಮಲ್‌ಅಹಮದ್ ಹಾಗೂ ಸಿಬ್ಬಂದಿಗಳನ್ನು ಸನ್ಮಾನಿಸಿ ಗೌರವಿಸಿದರು.
ಪೊಲೀಸ್ ಸಿಬ್ಬಂದಿ ಹೀರೋ: ಎಸ್ಪಿ ರಾಹುಲ್ ಕುಮಾರ್ ಶಹಪುರ್‌ವಾದ್ ಮಾತನಾಡಿ, ಕೊಲೆ ಪ್ರಕರಣ ಪತ್ತೆ ಹಚ್ಚುವಲ್ಲಿ ಪೊಲೀಸ್ ಸಿಬ್ಬಂದಿಗಳ ಪಾತ್ರ ಅತ್ಯಮೂಲ್ಯವಾಗಿದೆ. ಹಾಗಾಗಿ ಇದರ ಶ್ರೇಯಸ್ಸು ಪೊಲೀಸ್ ಸಿಬ್ಬಂದಿಗೆ ಸಲ್ಲಬೇಕು. ಕೊಲೆ ಪ್ರಕರಣ ಭೇದಿಸಿದ ಪೊಲೀಸ್ ಸಿಬ್ಬಂದಿಗಳೇ ಹೀರೋ ಆಗಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಆರೋಪಿಗಳಿಗೆ ಶಿಕ್ಷೆಯಾಗಲು ಸಾಕ್ಷಿ ಮುಖ್ಯ: ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚಿ ನ್ಯಾಯಾಲಯಕ್ಕೆ ದೋಷರೋಪಣ ಪಟ್ಟಿ ಸಲ್ಲಿಸಲಿದ್ದಾರೆ. ಆದರೆ ಆರೋಪಿಗಳಿಗೆ ಶಿಕ್ಷೆಯಾಗಬೇಕಾದರೆ ಸಾಕ್ಷಿಗಳ ಮುಖ್ಯ. ಹಾಗಾಗಿ ಯಾರು ಸಾಕ್ಷಿಗಳಿಗೆ ಸಹಿ ಹಾಕಿದ್ದೀರ ಅವರು ಯಾವುದೇ ಆಸೆ ಆಮಿಷ ಹಾಗೂ ಬೆದರಿಕೆಗೆ ಅಂಜದೇ ನ್ಯಾಯಾಲಯಕ್ಕೆ ಹಾಜರಾಗಿ ಸಾಕ್ಷಿ ಹೇಳಿದರೇ ನೂರಕ್ಕೆ ನೂರರಷ್ಟು ಆರೋಪಿಗಳಿಗೆ ಶಿಕ್ಷೆಯಾಗಲಿದೆ ಎಂದು ಹೇಳಿದರು.
ಇದೇ ವೇಳೆ ಅನಾಥ ಶವಗಳ ಶವ ಸಂಸ್ಕಾರಕ್ಕೆ ಸೇವೆ ಸಲ್ಲಿಸುತ್ತಿರುವ ಅಂಬ್ಯುಲೆನ್ಸ್ ಚಾಲಕರು, ಆಸ್ಪತ್ರೆ ಸಿಬ್ಬಂದಿಗಳನ್ನು ಪೊಲೀಸ್ ಇಲಾಖೆಯಿಂದ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಗ್ರಾ.ಪಂ. ಸದಸ್ಯರಾದ ಬಿಳಿಲಿಂಗೇಗೌಡ, ಸ್ವಾಮಿ ಹಾಲುವಾಗಿಲು, ಮಾಜಿ ಸದಸ್ಯ ಬೈರಪ್ಪ, ವಿಎಸ್‌ಎಸ್‌ಎನ್ ಅಧ್ಯಕ್ಷ ಬೋರೇಗೌಡ ಹಾಗೂ ಇತರ ಗ್ರಾಮಸ್ಥರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tumakuru: ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ 50ಎಕರೆ ಭೂಮಿ ಮಂಜೂರು: ಸಿಎಂ
Tumkur: ಬಸ್ ಪಲ್ಟಿಯಾಗಿ ಮೂವರು ಸಾವು
ಇಸ್ಪೀಟ್ ಅಡ್ಡೆಯ ಮೇಲೆ ಡಿವೈಎಸ್ಪಿ ದಾಳಿ; ಮಾಜಿ ಅಧ್ಯಕ್ಷ-ಹಾಲಿ ಉಪಾಧ್ಯಕ್ಷ ಸೇರಿ 8 ಜನರ ಬಂಧನ
Koratagere: ಕಂದಾಯ ಇಲಾಖೆ ಸಿಬ್ಬಂದಿ ಸೇರಿ ನಾಲ್ವರ ಮೇಲೆ ಹೆಜ್ಜೇನು ದಾಳಿ
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
MUST WATCH
ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಹೊಸ ಸೇರ್ಪಡೆ
Tragedy: ವಾಕಿಂಗ್ ಮುಗಿಸಿ ಬರುವಷ್ಟರಲ್ಲಿ ತಂದೆ, ತಾಯಿ, ಸಹೋದರಿಯ ಬರ್ಬರ ಹತ್ಯೆ
Ballari: ದೌರ್ಜನ್ಯ, ಹಿಂಸಾಚಾರ ಖಂಡಿಸಿ ಬಳ್ಳಾರಿ ಬಂದ್ ಕರೆಗೆ ಮಿಶ್ರ ಪ್ರತಿಕ್ರಿಯೆ
Ali Khan Tughlaq: ಮಾದಕ ವಸ್ತು ಕಳ್ಳಸಾಗಣೆ ಪ್ರಕರಣ; ಖ್ಯಾತ ನಟ ಮನ್ಸೂರ್ ಅಲಿ ಪುತ್ರ ಬಂಧನ
Kalaburagi: ಕಾಂಗ್ರೆಸ್‌ನ ಒಳ ಜಗಳ ಸಾಬೀತುಪಡಿಸಿದ ಸಮಾವೇಶ: ವಿಜಯೇಂದ್ರ
Waqf ವಿರುದ್ಧ ವಿಜಯೇಂದ್ರ ನೇತೃತ್ವದ ಹೋರಾಟಕ್ಕೆ ಚಾಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.