ರಾಮನಗರದಲ್ಲಿ ರಾಮಮಂದಿರ ನಿರ್ಮಾಣಕ್ಕೆ ತಯಾರಿ

19 ಎಕರೆಗೆ ನೀಲನಕ್ಷೆ, ಸದ್ಯಕ್ಕೆ 50 ಕೋಟಿ ಮಾರ್ಚ್‌ನಲ್ಲಿ ಶಂಕುಸ್ಥಾಪನೆ ಮೋದಿ, ಆದಿತ್ಯನಾಥ್‌ಗೆ ಆಹ್ವಾನ

Team Udayavani, Feb 23, 2023, 6:20 AM IST

ರಾಮನಗರದಲ್ಲಿ ರಾಮಮಂದಿರ ನಿರ್ಮಾಣಕ್ಕೆ ತಯಾರಿ

ಬೆಂಗಳೂರು: ರಾಜ್ಯ ಸರಕಾರ ಬಜೆಟ್‌ನಲ್ಲಿ ಘೋಷಿಸಿರುವ ರಾಮನಗರದ ರಾಮದೇವರ ಬೆಟ್ಟದಲ್ಲಿ ಭವ್ಯವಾದ ರಾಮಮಂದಿರ ನಿರ್ಮಾಣಕ್ಕೆ ಸಮಗ್ರ ಯೋಜನ ವರದಿ ಸಿದ್ಧವಾಗುತ್ತಿದೆ.

ಅಯೋಧ್ಯೆಯ ಮಾದರಿಯಲ್ಲೇ 19 ಎಕರೆ ಪ್ರದೇಶದಲ್ಲಿ ರಾಮಮಂದಿರ ನಿರ್ಮಾಣಕ್ಕೆ ನೀಲನಕ್ಷೆ ರೂಪಿಸಲಾಗಿದ್ದು ಮೊದಲ ಹಂತದಲ್ಲಿ 50 ಕೋಟಿ ರೂ. ವೆಚ್ಚ ಮಾಡಲು ತೀರ್ಮಾನಿಸಲಾಗಿದೆ.

ರಾಮದೇವರ ಬೆಟ್ಟ ವ್ಯಾಪ್ತಿಯಲ್ಲಿ 19 ಎಕರೆ ಪ್ರದೇಶದಲ್ಲಿ ನಿರ್ಮಾಣ ಕಾಮಗಾರಿಗೆ ಅವಕಾಶವಿದ್ದು ಅದರಂತೆ ಎಸ್ತೆಟಿಕ್‌ ಆರ್ಕಿಟೆಕ್ಸ್‌ನ ಖ್ಯಾತ ವಾಸ್ತುಶಿಲ್ಪಿ ಯಶಸ್ವಿನಿ ಶರ್ಮಾ ನೇತೃತ್ವದ ತಂಡ ರಾಮಮಂದಿರದ ವಿನ್ಯಾಸ ಸಿದ್ಧಪಡಿಸುತ್ತಿದೆ. ರಾಮಮಂದಿರ ನಿರ್ಮಾಣಕ್ಕೆ 50 ಕೋಟಿ ರೂ. ಅನುದಾನ ಸಂಬಂಧ ಹಣಕಾಸು ಇಲಾಖೆಗೆ ಪ್ರಸ್ತಾವನೆಯೂ ಸಿದ್ಧಗೊಂಡಿದ್ದು, ಮುಖ್ಯಮಂತ್ರಿಯವರ ಅನುಮತಿಯಷ್ಟೇ ಬಾಕಿಯಿದೆ ಎಂದು ಮೂಲಗಳು ತಿಳಿಸಿವೆ.

ಮೂರು ಸುತ್ತಿನ ಸಭೆ
ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಾಡಪ್ರಭು ಕೆಂಪೇಗೌಡರ ಪ್ರತಿಮೆ ನಿರ್ಮಾಣ ಮಾಡಿದಂತೆ ತೀವ್ರಗತಿಯಲ್ಲಿ ರಾಮದೇವರ ಬೆಟ್ಟದಲ್ಲಿ ರಾಮಮಂದಿರ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಡಾ| ಸಿ.ಎನ್‌.ಅಶ್ವತ್ಥನಾರಾಯಣ ಈ ಸಂಬಂಧ ಅಧಿಕಾರಿಗಳೊಂದಿಗೆ ಮೂರು ಸುತ್ತಿನ ಸಭೆ ನಡೆಸಿದ್ದಾರೆ. ರಾಮಮಂದಿರ ನಿರ್ಮಾಣಕ್ಕೆ ಸಾರ್ವಜನಿಕರಿಂದಲೂ ದೇಣಿಗೆ ಅಥವಾ ಅಗತ್ಯ ಸಾಮಗ್ರಿ ಸಂಗ್ರಹದ ಬಗ್ಗೆಯೂ ಚರ್ಚೆ ನಡೆದಿದೆ.

ರಾಮದೇವರ ಬೆಟ್ಟದಲ್ಲಿ ಪ್ರಕೃತಿಗೆ ಧಕ್ಕೆಯಾಗದಂತೆ ಮಂದಿರದ ವಿನ್ಯಾಸ ಮಾಡಲಾಗುತ್ತಿದೆ. ಇತಿಹಾಸ ತಜ್ಞರು, ದೇಗುಲ ವಾಸ್ತುಶಿಲ್ಪಿ ಪರಿಣಿತರು, ಪರಿಸರ ಮತ್ತು ವನ್ಯಜೀವಿ ತಜ್ಞರು ಸಹ ವಿನ್ಯಾಸದ ತಂಡದಲ್ಲಿದ್ದಾರೆ. ಸಚಿವ ಅಶ್ವತ್ಥನಾರಾಯಣ ಅವರು ನಮ್ಮ ತಂಡದೊಂದಿಗೆ ನಾಲ್ಕೈದು ಸಭೆ ನಡೆಸಿದ್ದಾರೆ ಎಂದು ಯಶಸ್ವಿನಿ ಶರ್ಮಾ ಹೇಳುತ್ತಾರೆ.

ಬೃಹತ್‌ ಹಿಂದೂ ಸಮಾವೇಶ?
ಹಳೇ ಮೈಸೂರು ಭಾಗದಲ್ಲಿ ಹಿಂದುತ್ವ ಪ್ರತಿಪಾದಿಸಿ ಮತಬ್ಯಾಂಕ್‌ ಸೃಷ್ಟಿಗೆ ರಾಮಮಂದಿರ ಘೋಷಣೆ ಅನುಕೂಲವಾಗಲಿದೆ ಎಂಬ ಹಿನ್ನೆಲೆಯಲ್ಲಿ ವಿಧಾನಸಭೆ ಚುನಾವಣೆಗೆ ವೇಳಾಪಟ್ಟಿ ಪ್ರಕಟಕ್ಕೆ ಮುನ್ನ ಮಾರ್ಚ್‌ ಎರಡನೇ ಅಥವಾ ಮೂರನೇ ವಾರದಲ್ಲಿ ರಾಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸುವ ಬಗ್ಗೆಯೂ ಚರ್ಚೆ ನಡೆದಿದೆ. ರಾಮಮಂದಿರ ನಿರ್ಮಾಣದ ಶಂಕುಸ್ಥಾಪನೆಗೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅಥವಾ ಪ್ರಧಾನಿ ನರೇಂದ್ರ ಮೋದಿ ಕರೆಸುವ ಬಗ್ಗೆಯೂ ಚಿಂತನೆಯಿದ್ದು, ಅದೇ ಸಂದರ್ಭದಲ್ಲಿ ಬೃಹತ್‌ ಹಿಂದೂ ಸಮಾವೇಶಕ್ಕೂ ಯೋಜನೆ ರೂಪಿಸಲಾಗಿದೆ ಎಂದು ತಿಳಿದು ಬಂದಿದೆ.

ರಾಮಮಂದಿರ ನಿರ್ಮಾಣಕ್ಕೆ ವಿರೋಧಿಸುವವರಿಗೆ ತಿರುಗೇಟು ನೀಡಲು ರಾಮದೇವರ ಬೆಟ್ಟದಲ್ಲಿ ಸುಗ್ರೀವ ಪಟ್ಟಾಭಿರಾಮನ ವಿಗ್ರಹ ಸ್ಥಾಪಿಸಿದ್ದು, ನಾಡಪ್ರಭು ಕೆಂಪೇಗೌಡರು ಮಂಟಪ ನಿರ್ಮಿಸಿದ್ದು ಸೇರಿದಂತೆ ಅಲ್ಲಿನ ಸ್ಥಳಪುರಾಣ ಹಾಗೂ ಐತಿಹಾಸಿಕ ಸಂಗತಿಗಳನ್ನೂ ಕಲೆ ಹಾಕಲಾಗುತ್ತಿದ್ದು, ಪುರಾತತ್ವ ಇಲಾಖೆಯಲ್ಲಿ ದಾಖಲಾಗಿರುವ 18 ನೇ ಶತಮಾನದ ಶಿಲಾಶಾಸನದ ಮಾಹಿತಿ ಸಹ ಸಂಗ್ರಹಿಸಲಾಗಿದೆ ಎಂದು ಹೇಳಲಾಗಿದೆ.

ಪ್ರವಾಸಿ ಸರ್ಕಿಟ್‌
ರಾಮದೇವರ ಬೆಟ್ಟದಲ್ಲಿ ರಾಮಮಂದಿರ ನಿರ್ಮಾಣದ ಬಳಿ ಪ್ರವಾಸಿ ಸರ್ಕಿಟ್‌ಗೂ ಯೋಜನೆ ರೂಪಿಸಲಾಗಿದೆ. ಕನಕಪುರ-ರಾಮನಗರ-ಚನ್ನಪಟ್ಟಣ- ಮಾಗಡಿ-ದೇವನಹಳ್ಳಿ-ಚಿಕ್ಕಬಳ್ಳಾಪುರ ಮಾರ್ಗದಲ್ಲಿ ಪ್ರವಾಸಿ ಸರ್ಕಿಟ್‌ ಬರಲಿದೆ. ರಾಮದೇವರ ಬೆಟ್ಟದ ರಾಮಮಂದಿರದಿಂದ ಸಾವನದುರ್ಗದ ಲಕ್ಷ್ಮಿ ನರಸಿಂಹ ದೇವಾಲಯ, ಮಾಗಡಿಯಲ್ಲಿ ಕೆಂಪೇಗೌಡರ ಜನ್ಮಸ್ಥಳ, ಕೆಂಪೇಗೌಡರ ಪ್ರತಿಮೆ, ನಂದಿ ಬೆಟ್ಟ ಪ್ರವಾಸಿ ಸರ್ಕಿಟ್‌ಗೆ ಸೇರ್ಪಡೆಯಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೇಗುಲದ ಜತೆ ರಾಮಪಥ ಮ್ಯೂಸಿಯಂ
ಈಗಿನ ಪ್ರಕಾರ ನಾಡಪ್ರಭು ಕೆಂಪೇಗೌಡರು ನಿರ್ಮಿಸಿದ್ದ ಮಂಟಪ ಸಹಿತ ಈಗಿರುವ ದೇವಾಲಯ ಪುನಶ್ಚೇತನದೊಂದಿಗೆ ಭವ್ಯ ರಾಮಮಂದಿರ ನಿರ್ಮಾಣ ಮಾಡುವುದು. ಇದರ ಜತೆಗೆ ಶ್ರೀರಾಮ ದ್ವಾರಾ, ರಾಮಮಂದಿರ ಪೆವಿಲಿಯನ್‌, ಅಶೋಕವನ, ಶ್ರೀರಾಮ ಪಥ ಮ್ಯೂಸಿಯಂ, ಜಟಾಯು ಗ್ಯಾಲರಿ ನಿರ್ಮಾಣ ಯೋಜನೆಯಲ್ಲಿ ಸೇರಿದೆ.

ಟಾಪ್ ನ್ಯೂಸ್

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Congress-Symbol

Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್‌ನಲ್ಲಿ ಲಾಬಿ ಆರಂಭ

Yatindra

Congress; ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಯತೀಂದ್ರ ಸಿದ್ದರಾಮಯ್ಯ

IMD

Temperature; ಮುಂದಿನ 20 ವರ್ಷ ಮಳೆ ಜಾಸ್ತಿ, ಉಷ್ಣಾಂಶ ಏರಿಕೆ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.