ಎಂಟಿಎಲ್ -ಎಂಜಿಎಂ ಒಡಂಬಡಿಕೆ: ವಿದ್ಯಾರ್ಥಿಗಳಿಗೆ ಕೌಶಲ ಅಭಿವೃದ್ಧಿಗೆ ಡಿಜಿಟಲ್ ಕೋರ್ಸ್
Team Udayavani, Feb 23, 2023, 6:52 AM IST
ಉಡುಪಿ: ಡಿಜಿಟಲ್ ಕೋರ್ಸ್ಗಳ ಮೂಲಕ ಎಂಜಿಎಂ ಸಂಧ್ಯಾ ಕಾಲೇಜಿನ ವಿದ್ಯಾರ್ಥಿಗಳಿಗೆ ಕೌಶಲಾಭಿವೃದ್ಧಿ ತರಬೇತಿ ಒದಗಿಸುವ ಉದ್ದೇಶದಿಂದ ಮಣಿಪಾಲ ಟೆಕ್ನಾಲಜಿಸ್ ಲಿಮಿಟೆಡ್ನ ಡಿಜಿಟಲ್ ಸೊಲ್ಯೂಶನ್ ವಿಭಾಗವು ಎಂಜಿಎಂ ಸಂಧ್ಯಾ ಕಾಲೇಜಿನೊಂದಿಗೆ ಒಡಂಬಡಿಕೆ ಮಾಡಿಕೊಂಡಿದೆ.
ಬುಧವಾರ “ಉದಯವಾಣಿ’ಯ ಮಣಿಪಾಲದ ಕೇಂದ್ರ ಕಚೇರಿಯಲ್ಲಿ ನಡೆದ ಒಡಂಬಡಿಕೆ ಕರಾರುಪತ್ರಕ್ಕೆ ಎಂಜಿಎಂ ಕಾಲೇಜು ಟ್ರಸ್ಟ್ ಅಧ್ಯಕ್ಷರಾದ ಟಿ. ಸತೀಶ್ ಯು. ಪೈ ಸಮ್ಮುಖದಲ್ಲಿ ಮಣಿಪಾಲ ಟೆಕ್ನಾಲಜಿಸ್ ಸಂಸ್ಥೆಯ ಎಂಡಿ ಹಾಗೂ ಸಿಇಒ ಅಭಯ್ ಗುಪ್ತೆ ಹಾಗೂ ಎಂಜಿಎಂ ಸಂಧ್ಯಾ ಕಾಲೇಜಿನ ಪ್ರಾಂಶುಪಾಲ ಡಾ| ದೇವಿದಾಸ್ ನಾಯ್ಕ ಸಹಿ ಹಾಕಿದರು.
ಪ್ರಾರಂಭಿಕ ಹಂತದಲ್ಲಿ ಎಂಜಿಎಂ ಸಂಧ್ಯಾ ಕಾಲೇಜಿನ ವಿದ್ಯಾರ್ಥಿಗಳಿಗೆ ವಿವಿಧ ಕೋರ್ಸ್ಗಳ ಬಗ್ಗೆ ಪ್ರಸೆಂಟೇಷನ್ ಮೂಲಕ ತಿಳುವಳಿಕೆ ನೀಡುವುದರೊಂದಿಗೆ ಕೌಶಲಾಧಾರಿತ ಆ್ಯನಿಮೇಶನ್, ಕಂಟೆಂಟ್ ಬರವಣಿಗೆ ಸಹಿತ ಸುಮಾರು 16 ವಿವಿಧ ಕೋರ್ಸ್ಗಳ ತರಬೇತಿ ನೀಡಿ ಅವರಿಗೆ ಉದ್ಯೋಗಾವಕಾಶ ಕಲ್ಪಿಸುವ ಪ್ರಯತ್ನವೂ ನಡೆಯಲಿದೆ. ಎರಡನೇ ಹಂತದಲ್ಲಿ ಯುಜಿಸಿ ಮತ್ತು ರಾಷ್ಟ್ರೀಯ ಕೌಶಲಾಭಿವೃದ್ಧಿ ಮಂಡಳಿ(ಎನ್ಎಸ್ಡಿಸಿ)ಯ ಅನುಮೋದನೆಯೊಂದಿಗೆ ಪದವಿ ಕೋರ್ಸ್ಗಳನ್ನು ಪ್ರಾರಂಭಿಸುವ ಉದ್ದೇಶ ಹೊಂದಲಾಗಿದೆ.
ಡಿಜಿಟಲ್ ಸೊಲ್ಯೂಶನ್ಸ್ನ ಬಿಝಿನೆಸ್ ಹೆಡ್ ಹಾಗೂ ಉಪಾಧ್ಯ ಕ್ಷರಾದ ಗುರುಪ್ರಸಾದ್ ಕಾಮತ್, ಲರ್ನಿಂಗ್ ಇನ್ನೋವೇಶನ್ಸ್ ಆ್ಯಂಡ್ ಕಂಟೆಂಟ್ ನಿರ್ದೇಶಕ ದರ್ಶನ್ ಪಾಟೀಲ್, ಸೊಲ್ಯೂಷನ್ ಸ್ಟ್ರಾéಟಜಿಸ್ಟ್ ಕೆ. ವಿಘ್ನೇಶ್ ಕಾಮತ್, ಎಂಜಿಎಂ ಕಾಲೇಜಿನ ಪ್ರಾಂಶುಪಾಲ ಪ್ರೊ| ಲಕ್ಷ್ಮೀ ನಾರಾಯಣ ಕಾರಂತ, ಕಂಪ್ಯೂಟರ್ ವಿಭಾಗದ ಮುಖ್ಯಸ್ಥ ಡಾ| ಎಂ. ವಿಶ್ವನಾಥ ಪೈ, ವಾಣಿಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಿಕೆ ಡಾ| ಮಲ್ಲಿಕಾ ಎ. ಶೆಟ್ಟಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Naveen D. Padil: ನಟ ನವೀನ್ ಡಿ. ಪಡೀಲ್ರವರಿಗೆ ವಿಶ್ವಪ್ರಭಾ ಪುರಸ್ಕಾರ
Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ
Udupi: ಅಂಬಲಪಾಡಿ ಜಂಕ್ಷನ್ ಬಳಿ ಬೃಹತ್ ಹೊಂಡಕ್ಕೆ ಬಿದ್ದ ಕಾರು
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.