ವಿವಾಹ ವಿಚ್ಛೇದನ ದೂರಿನ ವಿಚಾರಣೆ: ಅಧಿಕಾರಿಗಳ ಎದುರೇ ಆತ್ಮಹತ್ಯೆಗೆ ಯತ್ನ
Team Udayavani, Feb 23, 2023, 5:55 AM IST
ಬಂಟ್ವಾಳ: ವಿವಾಹ ವಿಚ್ಛೇದನದ ದೂರಿನ ಹಿನ್ನೆಲೆಯಲ್ಲಿ ವಿಚಾರಣೆಗಾಗಿ ಆಗಮಿಸಿದ್ದ ವ್ಯಕ್ತಿಯೋರ್ವ ಅಧಿಕಾರಿಗಳ ಎದುರೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬುಧವಾರ ಬಿ.ಸಿ.ರೋಡಿನಲ್ಲಿ ನಡೆದಿದೆ.
ಮಹಾರಾಷ್ಟ್ರ ಮೂಲದ ವ್ಯಕ್ತಿ ಪ್ರಕಾಶ್ ಚೌಗಲೆ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯಾಗಿದ್ದು, ಪ್ರಸ್ತುತ ಅವರು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರು ಬಿ.ಸಿ.ರೋಡು ನಿವಾಸಿ ಮಹಿಳೆಯನ್ನು ಪ್ರೀತಿಸಿ ವಿವಾಹವಾಗಿದ್ದು, ಬಳಿಕ ಇವರಿಬ್ಬರ ಮಧ್ಯೆ ಭಿನ್ನಾಭಿಪ್ರಾಯ ಉಂಟಾಗಿ ವಿವಾಹ ವಿಚ್ಛೇದನದ ಹಂತಕ್ಕೆ ತಲುಪಿತ್ತು.
ಇದೇ ವಿಚಾರವಾಗಿ ಮಹಿಳೆಯ ದೂರಿನ ಆಧಾರದಲ್ಲಿ ಬಂಟ್ವಾಳ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದ ವೇಳೆ ಆತ ಬಾಟಲಿಯಲ್ಲಿ ತಂದಿದ್ದ ವಿಷವನ್ನು ಏಕಾಏಕಿ ಕುಡಿದಿದ್ದಾನೆ. ಇದರಿಂದ ಆತಂಕಗೊಂಡ ಅಧಿಕಾರಿಗಳು ತತ್ ಕ್ಷಣ ಆತನನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆತ ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡು ಬಂದಿದ್ದ ಎನ್ನಲಾಗಿದ್ದು, ವಿಷದ ಬಾಟಲ್ ಜತೆಗೆ ಡೆತ್ ನೋಟ್ ಕೂಡ ಬರೆದುಕೊಂಡು ಬಂದಿದ್ದ ಎನ್ನಲಾಗಿದೆ. ಸಿಡಿಪಿಒ ಅಧಿಕಾರಿಗಳ ಮಾಹಿತಿಯಂತೆ ಬಂಟ್ವಾಳ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Fraud Case: ಗೂಗಲ್ ಪೇ ಮಾಡಿದೆ ಎಂದು ಹೇಳಿ ಮೋಸ
Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ
Puttur: ಸ್ಕೂಲ್ ಬಸ್ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
MUST WATCH
ಹೊಸ ಸೇರ್ಪಡೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.