ಶಿವಪಾಡಿ; ಮಕ್ಕಳಿಗೆ ರಾಧಾ-ಕೃಷ್ಣ, ಊರ್ಮಿಳೆ-ಲಕ್ಷ್ಮಣರ ಪ್ರೇಮ ತಿಳಿಸಿ

"ಶಿವ' ಎನ್ನುವ ಶಬ್ದದ ಅರ್ಥ ಎಲ್ಲವೂ, ಯಾವುದರಲ್ಲಿ ಸೇರಿಕೊಂಡಿದೆಯೋ ಅವನೇ ಶಿವ

Team Udayavani, Feb 23, 2023, 10:00 AM IST

ಶಿವಪಾಡಿ; ಮಕ್ಕಳಿಗೆ ರಾಧಾ-ಕೃಷ್ಣ, ಊರ್ಮಿಳೆ-ಲಕ್ಷ್ಮಣರ ಪ್ರೇಮ ತಿಳಿಸಿ

ಉಡುಪಿ: ಪ್ರಸ್ತುತ ಪೋಷಕರು ಮನೆಯಲ್ಲಿ ತಮ್ಮ ಮಕ್ಕಳಿಗೆ ರಾಧಾ-ಕೃಷ್ಣ, ಸೀತಾ-ರಾಮ ಮತ್ತು ಊರ್ಮಿಳೆ-ಲಕ್ಷ್ಮಣರ ಪವಿತ್ರ ಅಮರ ಪ್ರೇಮವನ್ನು ತಿಳಿಸುವುದರ ಜತೆಗೆ ಭಾರತೀಯ ಸಂಸ್ಕೃತಿಯನ್ನು ತಿಳಿಸಿಕೊಡುವ ಪ್ರಯತ್ನವನ್ನು ಮಾಡಬೇಕಿದೆ. ಇದರಿಂದ ಲವ್‌ ಜೆಹಾದ್‌ನಂತಹ ಪಿಡುಗನ್ನು ತಡೆಗಟ್ಟಬಹುದು ಎಂದು ಕಾರ್ಕಳದ ಉಪನ್ಯಾಸಕಿ, ವಾಗ್ಮಿ ಅಕ್ಷಯಾ ಗೋಖಲೆ ತಿಳಿಸಿದರು.

ಶಿವಪಾಡಿ ಶ್ರೀ ಉಮಾಮಹೇಶ್ವರ ದೇಗುಲದಲ್ಲಿ ಬುಧವಾರ ಆರಂಭಗೊಂಡಿರುವ ಅತಿರುದ್ರ ಮಹಾಯಾಗದ ಧಾರ್ಮಿಕ ಸಭೆಯಲ್ಲಿ ಅವರು ಉಪನ್ಯಾಸ ನೀಡಿದರು. 18 ವರ್ಷ ತುಂಬುತ್ತಿದ್ದಂತೆ ಹಿಂದೂ ಯುವತಿ ಲಕ್ಷ್ಮೀ, ರಜಿಯಾ ಆಗಿ ಮತಾಂತರವಾಗುವುದಕ್ಕೆ ಮೂಲ ಕಾರಣ ಪೋಷಕರು. ಶ್ರದ್ಧಾ 32 ತುಂಡುಗಳಾಗಿ ಫ್ರಿಡ್ಜ್ ನಲ್ಲಿ ಸೇರಿದರೂ ನಮ್ಮ ಯುವತಿಯರು ಲವ್‌ ಜೆಹಾದ್‌ ಬಲೆಗೆ ಸಿಲುಕುತ್ತಿದ್ದಾರೆ ಎಂಬುದಕ್ಕೆ ಕಾರಣ ಏನೆಂದು ಚಿಂತಿಸಬೇಕಾಗಿದೆ.

ಮಕ್ಕಳಿಗೆ ಭಾರತದ ಸಂಸ್ಕೃತಿಯ ಬಗ್ಗೆ ಸ್ಥೂಲವಾದ ಪರಿಚಯವನ್ನು ಹೆತ್ತವರು ತಿಳಿಹೇಳಬೇಕಾಗಿದೆ. ನಾವು ಸರಿಯಿದ್ದರೆ ಯಾರು ಏನು ಮಾಡಲು ಸಾಧ್ಯವಿಲ್ಲ ಎಂಬುದನ್ನು ಸ್ಪಷ್ಟವಾಗಿ ಅರಿವು ಮೂಡಿಸಬೇಕಾದ ಅನಿವಾರ್ಯತೆ ಇದೆ ಎಂದರು.

ಹಿಂದೂ ಧರ್ಮದ ಬಗ್ಗೆ ದೃಢವಾದ ಹೆಮ್ಮೆ ಮತ್ತು ಅಗಾಧವಾದ ಅರಿವನ್ನು ಮಕ್ಕಳಲ್ಲಿ ತುಂಬಬೇಕು. ಭಾರತವನ್ನು ಮಾತೆಯ ರೂಪದಲ್ಲಿ ಪೂಜಿಸುತ್ತೇವೆ. ಪುರುಷ ಮತ್ತು ಪ್ರಕೃತಿ, ಶಿವ ಹಾಗೂ ಶಕ್ತಿ ಒಂದಾದರೆ ಮಾತ್ರ ಸಮಾಜವು ಪರಿಪೂರ್ಣವಾಗಲು ಸಾಧ್ಯ. ಪ್ರಸ್ತುತ ಸಮಾಜದಲ್ಲಿ ಪುರುಷರಿಗಿಂತ ಮಹಿಳೆಯರೇ ಸಂಸ್ಕೃತಿಯಿಂದ ದೂರ ಹೋಗುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.

ಎಲ್ಲವೂ “ಶಿವ’
ಉದ್ಘಾಟಿಸಿದ ಶೃಂಗೇರಿ ಪಾಠಶಾಲೆಯ ಪ್ರಚಾರಕ, ಯಾಗದ ಪ್ರಧಾನ ಅರ್ಚಕ ವಿನಾಯಕ ಉಡುಪ ಮಾತನಾಡಿ, ಭಗವಂತನು ಎಲ್ಲ ರೂಪಗಳಲ್ಲಿಯೂ ಇದ್ದಾನೆ ಎಂದು ಶಾಸ್ತ್ರ ತಿಳಿಸುತ್ತದೆ. “ಶಿವ’ ಎನ್ನುವ ಶಬ್ದದ ಅರ್ಥ ಎಲ್ಲವೂ, ಯಾವುದರಲ್ಲಿ ಸೇರಿಕೊಂಡಿದೆಯೋ ಅವನೇ ಶಿವ. ಈ ಪ್ರಪಂಚದಲ್ಲಿ ಭಗವಂತನ ಅಸ್ತಿತ್ವವನ್ನು ಹೊರತುಪಡಿಸಿ ಬೇರಾವುದಕ್ಕೂ ಸ್ವಾತಂತ್ರ್ಯವಿಲ್ಲ. ವೈದಿಕ ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಂಪರೆಯೇ ದೇಶದ ಘನತೆಯನ್ನು ಎತ್ತಿಹಿಡಿಯುವ
ಸಾಧನವಾಗಿದೆ ಮತ್ತು ವೈಶಿಷ್ಟ್ಯವೂ ಹೌದು ಎಂದು ತಿಳಿಸಿದರು.

ಯಾಗ ಸಮಿತಿ ಅಧ್ಯಕ್ಷರೂ ಆದ ಶಾಸಕ ಕೆ. ರಘುಪತಿ ಭಟ್‌ ಅಧ್ಯಕ್ಷತೆ ವಹಿಸಿದ್ದರು. ಆರೆಸ್ಸೆಸ್‌ ಜಿಲ್ಲಾ ಸಂಘಚಾಲಕ ನಾರಾಯಣ ಶೆಣೈ, ಸಹಕಾರಿ ಧುರೀಣರಾದ ಶಂಭು ಶೆಟ್ಟಿ, ಬೋಳ ಸದಾಶಿವ ಶೆಟ್ಟಿ, ಉದ್ಯಮಿ ಪುರುಷೋತ್ತಮ ಪಿ. ಶೆಟ್ಟಿ, ದ.ಕ. ಜಿಲ್ಲಾ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್‌, ಉಡುಪಿ ತಾಲೂಕು ಬ್ರಾಹ್ಮಣ ಸಂಘದ ಮಂಜುನಾಥ ಉಪಾಧ್ಯ, ಶೃಂಗೇರಿ ಪ್ರಾಂತೀಯ ಧರ್ಮಾಧಿಕಾರಿ ವಾಗೀಶ್‌ ಶಾಸ್ತ್ರೀ, ಪ್ರಮುಖರಾದ ಎಂ. ಮುಕುಂದ ಪ್ರಭು, ಪಾಂಡುರಂಗ ಲಾಗ್ವಾಂಕರ್‌, ಮೊಕ್ತೇಸರರಾದ ದಿನೇಶ್‌ ಪ್ರಭು, ಶುಭಕರ ಸಾಮಂತ್‌, ದೇಗುಲದ ಶಾಶ್ವತ ಟ್ರಸ್ಟಿ ದಿನೇಶ್‌ ಶ್ರೀಧರ ಸಾಮಂತ್‌ ಮೊದಲಾದವರು ಉಪಸ್ಥಿತರಿದ್ದರು.

ದೇವಸ್ಥಾನ ಅಭಿವೃದ್ಧಿ ಟ್ರಸ್ಟ್ ನ ಅಧ್ಯಕ್ಷ ಮಹೇಶ್‌ ಠಾಕೂರ್‌ ಸ್ವಾಗತಿಸಿದರು. ಸಂಘಟನ ಕಾರ್ಯದರ್ಶಿ ಬಾಲಕೃಷ್ಣ ಮದ್ದೋಡಿ ನಿರೂಪಿಸಿ, ಸಾಂಸ್ಕೃತಿಕ ಕಾರ್ಯದರ್ಶಿ ರತ್ನಾಕರ ಇಂದ್ರಾಳಿ ವಂದಿಸಿದರು.

ಟಾಪ್ ನ್ಯೂಸ್

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

owaisi (2)

Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು

farukh abdulla

Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

1-jmm

INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-reeee

Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ

arrested

Parkala; ಅಂಗಡಿಯಲ್ಲಿ ಅಕ್ರಮವಾಗಿ ಪಟಾಕಿ ಮಾರುತ್ತಿದ್ದ ಮಾಲಕ ಅರೆಸ್ಟ್

25-kota

Kota: ಮರೆಯಾಗುತ್ತಿವೆ ಮೇಟಿ ಪೂಜೆ, ರಾಶಿ ಪೂಜೆ

17-katapady

Katapady: ಹಟ್ಟಿಗೊಬ್ಬರ ಖರೀದಿ ಹೆಸರಲ್ಲಿ ಮೋಸ!

14-malpe

Malpe: ನಿರಂತರ ರಜೆ: ಬೀಚ್‌ಗಳಲ್ಲಿ ಪ್ರವಾಸಿಗರ ದಟ್ಟಣೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

attack

Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ

1-reeee

Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.