ಜೂಲಿಯೆಟ್‌ ಮೇಲೆ ಬೃಂದಾ ಕನಸು


Team Udayavani, Feb 23, 2023, 1:16 PM IST

ಜೂಲಿಯೆಟ್‌ ಮೇಲೆ ಬೃಂದಾ ಕನಸು

ಈಗಾಗಲೇ ಟ್ರೇಲರ್‌, ಹಾಡುಗಳ ಮೂಲಕ ನಿರೀಕ್ಷೆ ಹುಟ್ಟಿಸಿರುವ ಚಿತ್ರ “ಜೂಲಿಯೆಟ್‌-2′. ಚಿತ್ರ ಫೆ.24ರಂದು ತೆರೆಕಾಣುತ್ತಿದೆ. ಬೃಂದಾ ಆಚಾರ್ಯ ಈ ಚಿತ್ರದ ನಾಯಕಿ. ಪ್ರೇಮಂ ಪೂಜ್ಯಂ ಚಿತ್ರದಲ್ಲಿ ನಟಸಿದ್ದ ಬೃಂದಾ ಈಗ “ಜೂಲಿಯೆಟ್‌’ ಮೇಲೆ ನಿರೀಕ್ಷೆ ಇಟ್ಟಿದ್ದಾರೆ. ಅದಕ್ಕೆ ಇಡೀ ಸಿನಿಮಾ ತುಂಬಾ ಅವರೇ ತುಂಬಿಕೊಂಡಿದ್ದಾರೆ.

ಹೌದು, “ಜೂಲಿಯೆಟ್‌-2′ ನಾಯಕಿ ಪ್ರಧಾನ ಚಿತ್ರ. ಇಡೀ ಸಿನಿಮಾ ಬೃಂದಾ ಅವರ ಸುತ್ತವೇ ಸುತ್ತಲಿದೆ. ಈ ಚಿತ್ರಕ್ಕಾಗಿ ಬೃಂದಾ ಸಾಕಷ್ಟು ಶ್ರಮಪಟ್ಟಿದ್ದಾರೆ. ಇದು ಆ್ಯಕ್ಷನ್‌ ಹಿನ್ನೆಲೆಯಲ್ಲಿ ಸಾಗುವ ಸಿನಿಮಾವಾಗಿದ್ದು, ಈ ಚಿತ್ರಕ್ಕಾಗಿ ಮಾರ್ಷಲ್‌ ಆರ್ಟ್ಸ್ ಕಲಿತರಂತೆ. ಜೊತೆಗೆ ಇಡೀ ಸಿನಿಮಾದ ಚಿತ್ರೀಕರಣ ಕರಾವಳಿಯ ಕಾಡೊಂದರಲ್ಲಿ ನಡೆದಿದೆ. ಒಂದು ಕಡೆ ಮಳೆ, ಮತ್ತೂಂದು ಕಡೆ ಜಿಗಣೆ ಕಾಟ, ಇನ್ನೊಂದು ಕಾಲಿಗೆ ಅಂಟಿಕೊಳ್ಳುವ ಕೆಸರು… ಇದರ ಮಧ್ಯೆ ಬೃಂದಾ ಚಿತ್ರೀಕರಣ ಮುಗಿಸಿದ್ದಾರೆ.

ಬಾಲ್ಯದಲ್ಲಿ ತನಗಾದ ಅನ್ಯಾಯದ ವಿರುದ್ಧ ಹೋರಾಡುವ ಹುಡುಗಿಯಾಗಿ ಬೃಂದಾಈ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ.  ಚಿತ್ರಕ್ಕೆ ವಿರಾಟ್‌ ನಿರ್ದೇಶನ “ಪಿ.ಎಲ್‌ ಪ್ರೊಡಕ್ಷನ್‌’ ಲಾಂಛನದಡಿಯಲ್ಲಿ ಲಿಖೀತ್‌.ಆರ್‌. ಕೋಟ್ಯಾನ್‌ ಬಂಡವಾಳ ಹೂಡಿದ್ದಾರೆ. ನ‌ಗರವಾಸಿಯಾದ ಮಗಳು, ತನ್ನ ತಂದೆಯ ಕೊನೆಯ ಆಸೆ ಈಡೇರಿಸಲು ಹುಟ್ಟೂರಿಗೆ ಹೋಗಿ ನೆಲೆಸುತ್ತಾಳೆ. ಅಲ್ಲಿ ಏನೆಲ್ಲಾ ಆಗುತ್ತದೆ ಹಾಗೂ ಹೆಣ್ಣು ಶಾಂತರೂಪಿಯಾದ ಶಾರದೆಯ ರೀತಿ ಇರುತ್ತಾಳೆ.  ಆದರೆ ತನಗೆ ತೊಂದರೆಯಾದಾಗ ಆಕೆ ದುರ್ಗೆಯೂ ಆಗುತ್ತಾಳೆ ಎಂಬುದು ಈ ಚಿತ್ರದ ಕಥಾಹಂದರ.

ಕ್ರೈಮ್‌ ಥ್ರಿಲ್ಲರ್‌ ಜಾನರ್‌ನ ಈ ಚಿತ್ರಕ್ಕೆ ವಿರಾಟ್‌ .ಬಿ.ಗೌಡ ನಿರ್ದೇಶನದ ಜೊತೆಗೆ ಕಥೆ, ಚಿತ್ರಕಥೆಯನ್ನು ಬರೆದಿದ್ದಾರೆ. ಮಂಗಳೂರು, ಬೆಳ್ತಂಗಡಿ ಹಾಗೂ ಅದರ ಸುತ್ತಲಿನ ಅರಣ್ಯ ಪ್ರದೇಶದಲ್ಲಿ ಚಿತ್ರೀಕರಣ ನಡೆಸಲಾಗಿದೆ. ಬೃಂದಾ ಆಚಾರ್ಯ, ಅನೂಪ್‌ ಸಾಗರ್‌, ಖುಷ್‌ ಆಚಾರ್ಯ, ರವಿ, ರಾಧೇಶ್‌ ಶೆಣೈ, ಶ್ರೀಕಾಂತ್‌, ರಾಯ್‌ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಸಚಿನ್‌ ಬಸ್ರೂರ್‌ ಅವರ ಬಿ.ಜಿ.ಎಂ ಹಾಗೂ ಶ್ಯಾಂಟೋ ವಿ ಆಂಟೋ ಅವರ ಛಾಯಾಗ್ರಹಣ ಚಿತ್ರಕ್ಕಿದೆ. ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗಿದೆ.

ಟಾಪ್ ನ್ಯೂಸ್

CM-Panchamsali

Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

ISREL-3

Israel ಗಾಜಾದಲ್ಲಿ ಕಾರ್ಯಾಚರಣೆ ನಿಲ್ಲಿಸದೆ ಒತ್ತೆಯಾಳುಗಳ ಬಿಡುಗಡೆ ಇಲ್ಲ: ಹಮಾಸ್!

1-a-cm-bai

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?

1-dog

Police dog; ರೈತನ ಮನೆಯಿಂದ ಕಳವಾಗಿದ್ದ 1.07 ಕೋಟಿ ರೂ.ಹಣ ಪತ್ತೆಗೆ ನೆರವಾದ ಶ್ವಾನ

Train

Train; ದೀಪಾವಳಿಗೆ ಬೆಂಗಳೂರು- ಕಾರವಾರ ವಿಶೇಷ ರೈಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Producer K Manju Teams Up With Director Smile Sreenu

Sandalwood: ಸ್ಮೈಲ್‌ ಶ್ರೀನು ಚಿತ್ರಕ್ಕೆ ಕೆ.ಮಂಜು ಸಾಥ್

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

director suri

Cini Talk: ಸಿನಿಮಾ ನಿರ್ದೇಶಕ ಬಿಝಿನೆಸ್‌ ಮ್ಯಾನ್‌ ಅಲ್ಲ!: ನಿರ್ದೇಶಕ ಸೂರಿ ಮಾತು

Bagheera movie song out

Bagheera ರುಧಿರ ಗಾನ…; ಶ್ರೀಮುರಳಿ ಸಿನಿಮಾದ ಹಾಡು ಬಂತು

simha roopini kannada movie

Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್‌ ರಾಜ್‌ ನಿರ್ದೇಶನ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

CM-Panchamsali

Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

ISREL-3

Israel ಗಾಜಾದಲ್ಲಿ ಕಾರ್ಯಾಚರಣೆ ನಿಲ್ಲಿಸದೆ ಒತ್ತೆಯಾಳುಗಳ ಬಿಡುಗಡೆ ಇಲ್ಲ: ಹಮಾಸ್!

1-a-cm-bai

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.