ಬಿಸಿಯೂಟ ಸಿಬಂದಿ ಗೌರವ ಸಂಭಾವನೆ ಹೆಚ್ಚಳ: ಸಚಿವ ಸುನಿಲ್ ಕುಮಾರ್
Team Udayavani, Feb 24, 2023, 7:42 AM IST
ಬೆಂಗಳೂರು: ಸರಕಾರಿ ಶಾಲೆಗಳಲ್ಲಿ 97,371 ಅಡುಗೆ ಸಿಬಂದಿ ಕರ್ತವ್ಯ ನಿರ್ವಹಿಸುತ್ತಿದ್ದು, ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಅನಂತರ ಅವರ ಗೌರವ ಸಂಭಾವನೆಯನ್ನು ಹೆಚ್ಚಿಸಲಾಗಿದೆ ಎಂದು ಇಂಧನ ಹಾಗೂ ಕನ್ನಡ-ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.
ಶಾಲಾ ಶಿಕ್ಷಣ ಹಾಗೂ ಸಾಕ್ಷರತ ಸಚಿವ ಬಿ.ಸಿ. ನಾಗೇಶ್ ಪರವಾಗಿ ಶಾಸಕ ಸಾ.ರಾ. ಮಹೇಶ್ ಪ್ರಶ್ನೆಗೆ ಉತ್ತರಿಸಿದ ಅವರು, ಮುಖ್ಯ ಅಡುಗೆಯವರಿಗೆ ಮಾಸಿಕ 3,700 ರೂ., ಸಹಾಯಕ ಅಡುಗೆಯವರಿಗೆ 3,600 ರೂ. ಸಂಭಾವನೆ ನೀಡಲಾಗುತ್ತಿದೆ.
2022-23ನೇ ಶೈಕ್ಷಣಿಕ ವರ್ಷದಿಂದ ಅನ್ವಯವಾಗುವಂತೆ ಮಧ್ಯಾಹ್ನ ಉಪಾಹಾರ ಯೋಜನೆಯಡಿ ಕರ್ತವ್ಯ ನಿರ್ವಹಿಸುತ್ತಿರುವ ಅಡುಗೆ ಸಿಬಂದಿ ಗೌರವ ಸಂಭಾವನೆಯನ್ನು 1,000 ರೂ. ಹೆಚ್ಚಳ ಮಾಡಲಾಗಿದೆ. ಕನಿಷ್ಠ ವೇತನ ಜಾರಿ ಮಾಡುವುದಕ್ಕೆ ಸಾಕಷ್ಟು ಇತಿಮಿತಿಗಳಿವೆ. ಈ ಬಗ್ಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುವುದಾಗಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BBK11: ಬಿಗ್ ಬಾಸ್ ಕಾರ್ಯಕ್ರಮದ ನಿರೂಪಕ ಬದಲು: ಸುದೀಪ್ ಜಾಗಕ್ಕೆ ಇವರು ಎಂಟ್ರಿ…
Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ
Revenge Strikes: ಇರಾನ್ ಸೇನಾ ನೆಲಗಳ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ…
Hosapete: ಬಾಲಕನನ್ನು ಅಪಹರಿಸಿ, ಎಚ್.ಎಲ್.ಸಿ. ಕಾಲುವೆಗೆ ಎಸೆದು ಕೊಲೆ: ಆರೋಪಿ ಬಂಧನ
Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.