ಧಾರವಾಡದಲ್ಲಿ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಐವರು ಮೃತ್ಯು
Team Udayavani, Feb 23, 2023, 10:37 PM IST
ಧಾರವಾಡ : ನಗರದ ಹೊರ ವಲಯದ ರಾಷ್ಟ್ರೀಯ ಹೆದ್ದಾರಿಯ ತೇಗೂರ ಗ್ರಾಮದ ಬಳಿ ಗುರುವಾರ ರಾತ್ರಿ ಸಂಭವಿಸಿದ ಭೇಕರ ಅಪಘಾತದಲ್ಲಿ ಐವರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬೆಳಗಾವಿಯಿಂದ ಧಾರವಾಡದ ಕಡೆಗೆ ಬರುತ್ತಿದ್ದ ಕಾರು ಲಾರಿಗೆ ಹಿಂಬದಿಯಿಂದ ಗುದ್ದಿ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ.
ಮೃತ ದುರ್ದೈವಿಗಳು ನಾಗಪ್ಪ ಈರಪ್ಪ ಮುದ್ದೊಜಿ(29)ಮಹಂತೇಶ್ ಬಸಪ್ಪ ಮುದ್ದೊಜಿ (40) ಬಸವರಾಜ್ ಶಿವಪುತ್ರಪ್ಪ ನರಗುಂದ(35) ನಿಚ್ಚಣಕಿ ಗ್ರಾಮದ ಶ್ರೀಕುಮಾರ್ ನರಗುಂದ (05) ಪಾದಚಾರಿಯಾಗಿದ್ದ ಹೆಬ್ಬಳಿ ಮೂಲದ ಧಾರವಾಡದಲ್ಲಿದ್ದ ಈರಣ್ಣಾ ಗುರುಸಿದ್ದಪ್ಪ ರಾಮನಗೌಡರ್ (35) ಎಂದು ಪೊಲೀಸರು ತಿಳಿಸಿದ್ದಾರೆ.
ಗಾಯಾಳುಗಳಾದ ಶ್ರವಣ ಕುಮಾರ್ ಬಸವರಾಜ ನರಗುಂದ ವಯಸ್ಸು (07) ಮಡಿವಾಳಪ್ಪ ರಾಜು ಅಳ್ನಾವರ (22) ಅವರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು , ಪ್ರಕಾಶ್ ಗೌಡ( 22), ಮಂಜುನಾಥ (22) ಧಾರವಾಡದ ಜಿಲ್ಲಾ ಆಸ್ಪತ್ರೆ ಒಳರೋಗಿಯಾಗಿ ದಾಖಲಾಗಿದ್ದಾರೆ.
ಗರಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೆಬ್ಬಾಳ್ಕರ್‌ಗೆ ರವಿ ಅಶ್ಲೀಲ ಪದ ಬಳಸಿದ್ದು ನಿಜ: ಯತೀಂದ್ರ ಹೇಳಿಕೆ
MLA ಮುನಿರತ್ನ ವಿರುದ್ಧ ಮತ್ತೊಂದು ಜಾತಿ ನಿಂದನೆ ಪ್ರಕರಣ
BJP; ವಿಜಯೇಂದ್ರ ವಿರುದ್ಧ ಧ್ವನಿ ಎತ್ತಿದ್ದು ಬಿ.ಪಿ. ಹರೀಶ್ ಮಾತ್ರ!
High Court: ಪೌರ ಕಾರ್ಮಿಕರ ಸೇವೆ ಕಾಯಂಗೊಳಿಸಲು ವಿಫಲ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
Kalaburagi: ಬಂಧನಕ್ಕೆ ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ, ಆರೋಪಿಗೆ ಗುಂಡೇಟು