ಎ.1ರಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಆಸ್ತಿ ತೆರಿಗೆ ಸಂಗ್ರಹ; ವ್ಯಾಪಕ ಆಕ್ರೋಶ
Team Udayavani, Feb 24, 2023, 6:28 AM IST
ಜಮ್ಮು: ಇದೇ ಮೊದಲ ಬಾರಿಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಆಸ್ತಿ ತೆರಿಗೆ ಸಂಗ್ರಹಿಸುವಂಥ ಹೊಸ ಆಸ್ತಿ ನೀತಿ ಜಾರಿಗೆ ಬಂದಿದ್ದು, ಎ.1ರಿಂದಲೇ ತೆರಿಗೆ ಸಂಗ್ರಹಕ್ಕೆ ಜಮ್ಮು-ಕಾಶ್ಮೀರ ಆಡಳಿತ ಮುಂದಾಗಿದೆ. ಆದರೆ ಈ ನಿರ್ಧಾರಕ್ಕೆ ಸ್ಥಳೀಯರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಎ.1ರಿಂದ ಆಸ್ತಿ ತೆರಿಗೆ ಸಂಗ್ರಹ ಆರಂಭಿಸಿದರೆ 2023-24ರ ಹಣಕಾಸು ವರ್ಷದಲ್ಲಿ ಸುಮಾರು 150 ಕೋಟಿ ರೂ. ಸಂಗ್ರಹಿಸುವ ನಿರೀಕ್ಷೆ ಜಮ್ಮು ಮತ್ತು ಕಾಶ್ಮೀರ ಆಡಳಿತದ್ದು. ಮಹಾನಗರಿ ಪಾಲಿಕೆಗಳು ಮತ್ತು ಇತರ ಸ್ಥಳೀಯ ಸಂಸ್ಥೆಗಳು ಆರ್ಥಿಕವಾಗಿ ಸ್ವಾವಲಂಬನೆ ಹೊಂದುವಂತೆ ಮಾಡುವುದೇ ಇದರ ಉದ್ದೇಶ ಎಂದು ಗೃಹ ಮತ್ತು ನಗರಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಎಚ್.ರಾಜೇಶ್ ಪ್ರಸಾದ್ ಹೇಳಿದ್ದಾರೆ.
ವಕೀಲರ ಪ್ರತಿಭಟನೆ
ಕೇಂದ್ರಾಡಳಿತ ಪ್ರದೇಶದಲ್ಲಿ ಆಸ್ತಿತೆರಿಗೆ ಹೇರುವ ನಿರ್ಧಾರ ಖಂಡಿಸಿ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್ ಬಾರ್ ಅಸೋಸಿಯೇಶನ್ನ ವಕೀಲರು ಗುರುವಾರ ಪ್ರತಿಭಟನೆ ನಡೆಸಿದ್ದಾರೆ. ಆಡಳಿತದ ತಪ್ಪು ನಿರ್ಧಾರಗಳಿಂದಾಗಿ ಈಗಾಗಲೇ ಜನರು ಆರ್ಥಿಕ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
AI world: ಕ್ರಿಮಿನಲ್ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.