ಭಾರತದ ದೃಷ್ಟಿಕೋನ ಬದಲಿಸುವ ಮೈ ಹೀರೋ!
Team Udayavani, Feb 24, 2023, 2:56 PM IST
“ಮೈ ಹೀರೋ’ – ಹೀಗೊಂದು ಹೆಸರಿನ ಸಿನಿಮಾ ಸೆಟ್ಟೇರಿದೆ. ಇತ್ತೀಚೆಗೆ ನಡೆದ “ಮೈ ಹೀರೋ’ ಸಿನಿಮಾದ ಮುಹೂರ್ತ ಸಮಾರಂಭದಲ್ಲಿ ಹಾಜರಿದ್ದ ಹಿರಿಯ ನಟ ದತ್ತಣ್ಣ, ಮಹಾಲಕ್ಷ್ಮೀ ಸೇರಿದಂತೆ ಚಿತ್ರದ ಪ್ರಮುಖ ಕಲಾವಿದರು ಮತ್ತು ತಂತ್ರಜ್ಞರು ಹಾಜರಿದ್ದು, ಚಿತ್ರೀಕರಣಕ್ಕೆ ಚಾಲನೆ ನೀಡಿದರು. ಮೂಲತಃ ರಂಗಭೂಮಿ ಕಲಾವಿದರಾಗಿರುವ, ಸ್ಯಾನ್ ಫ್ರಾನ್ಸಿಸ್ಕೊ ಫಿಲಂ ಸ್ಕೂಲ್‌ನಲ್ಲಿ ನಿರ್ದೇಶನ ತರಬೇತಿ ಮತ್ತು ಮುಂಬೈನ “ಅನುಪಮ್ ಖೇರ್ ಫಿಲಂ ಇನ್ಸ್ಟಿಟ್ಯೂಟ್’ನಲ್ಲಿ ಅಭಿನಯ ತರಬೇತಿ ಪಡೆದಿರುವ ಯುವ ಪ್ರತಿಭೆ ಅವಿನಾಶ್ ವಿಜಯಕುಮಾರ್ “ಮೈ ಹೀರೋ’ ಸಿನಿಮಾವನ್ನು “ಎ ವಿ ಸ್ಟುಡಿಯೋಸ್’ ಬ್ಯಾನರಿನಲ್ಲಿ ನಿರ್ಮಿಸಿ, ನಿರ್ದೇಶಿಸಿ ತೆರೆಗೆ ತರುತ್ತಿದ್ದಾರೆ.
ಮುಹೂರ್ತದ ಬಳಿಕ ಮಾತನಾಡಿದ ನಿರ್ದೇಶಕ ಅವಿನಾಶ್ ವಿಜಯಕುಮಾರ್, “ಇದೊಂದು ಸಾಮಾಜಿಕ ಸಮಸ್ಯೆಯನ್ನು ಇಟ್ಟುಕೊಂಡು ಮಾಡುತ್ತಿರುವ ಸಿನಿಮಾ. ಅಮೆರಿಕಾದಿಂದ ಭಾರತಕ್ಕೆ ಬಂದ ಅಧಿಕಾರಿಯೊಬ್ಬರಿಗೆ ಇಲ್ಲೊಬ್ಬ ಹುಡುಗನ ಪರಿಚಯವಾಗುತ್ತದೆ. ಇವರಿಬ್ಬರ ನಡುವೆ ಈ ಸಿನಿಮಾದ ಕಥೆ ಸಾಗುತ್ತದೆ. ಕೆಲವು ಸಿನಿಮಾಗಳಲ್ಲಿ ಭಾರತವನ್ನು ಬಡ ರಾಷ್ಟ್ರ ಎಂದು ಬಿಂಬಿಸಲಾಗುತ್ತದೆ. ಆದರೆ ಈ ಸಿನಿಮಾದಲ್ಲಿ ಭಾರತವನ್ನು ಬೇರೆಯದೇ ರೀತಿಯಲ್ಲಿ ತೋರಿಸುತ್ತಿದ್ದೇವೆ. ಸಿನಿಮಾ ನೋಡಿದ ಮೇಲೆ ಪ್ರತಿಯೊಬ್ಬರಿಗೂ ಭಾರತವನ್ನು ನೋಡುವ ದೃಷ್ಟಿಯೂ ಬದಲಾಗಬಹುದು’ ಎಂದರು.
ಇನ್ನು “ಮೈ ಹೀರೋ’ ಸಿನಿಮಾದಲ್ಲಿ ಹಾಲಿವುಡ್ ನಟ ಜಿಲಾಲಿ ರೆಜ್ ಕಲ್ಲಾಹ್ ಹಾಗೂ ಬಾಲನಟ ವೇದಿಕ್ ಕೌಶಿಕ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಹಿರಿಯ ನಟ ದತ್ತಣ್ಣ ಪುರೋಹಿತನಾಗಿ, ಪ್ರಕಾಶ್ ಬೆಳವಾಡಿ ಜಿಲ್ಲಾಧಿಕಾರಿ ಪಾತ್ರದಲ್ಲಿ, ಮತ್ತೂಂದು ಪ್ರಮುಖ ಪಾತ್ರದಲ್ಲಿ ನಿರಂಜನ್ ದೇಶಪಾಂಡೆ ಅಭಿನಯಿಸುತ್ತಿದ್ದಾರೆ. ಚಿಕ್ಕಮಗಳೂರಿನಲ್ಲಿ ಮೊದಲ ಹಂತದ ಚಿತ್ರೀಕರಣ ನಡೆಯಲಿದ್ದು, ಆ ನಂತರ ಮಧ್ಯಪ್ರದೇಶ ಹಾಗೂ ಯುಎಸ್‌ಎ ನಲ್ಲೂ ಚಿತ್ರೀಕರಣ ನಡೆಸುವ ಯೋಜನೆಯಲ್ಲಿದೆ ಚಿತ್ರತಂಡ. ಇಲ್ಲಿನ ತಂತ್ರಜ್ಞರ ಜೊತೆ ಹಾಲಿವುಡ್‌ನ ಕೆಲ ತಂತ್ರಜ್ಞರು ಈ ಸಿನಿಮಾದಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.