ಕೆಲಸದ ಅವಧಿ ಹೆಚ್ಚಳ: ಮಸೂದೆಗೆ ವಿರೋಧ
Team Udayavani, Feb 25, 2023, 6:20 AM IST
ಬೆಂಗಳೂರು: ಕಾರ್ಖಾನೆಗಳಲ್ಲಿ ಕೆಲಸ ಅವಧಿಯನ್ನು ಹೆಚ್ಚಿಸುತ್ತಿರುವುದು ಅತ್ಯಂತ ಅಮಾನವೀಯ, ಅಮಾನುಷವಾಗಿದ್ದು, ಯಾವುದೇ ನಾಗರಿಕ ಸರಕಾರದಲ್ಲಿ ಒಪ್ಪುವಂತಹದ್ದಲ್ಲ. ಆಡಳಿತ ಪಕ್ಷದ ಸದಸ್ಯನಾಗಿ ಇದನ್ನು ನಾನು ಖಡಾಖಂಡಿತವಾಗಿ ವಿರೋಧಿಸುತ್ತೇನೆಂದು ಹೇಳಿ ಬಿಜೆಪಿಯ ಆಯನೂರು ಮಂಜುನಾಥ್ ಸಭಾತ್ಯಾಗ ಮಾಡಿದ್ದು ಆಡಳಿತ ಪಕ್ಷಕ್ಕೆ ಮುಜುಗರ ತಂದಿತು.
ಕಾರ್ಖಾನೆಗಳಲ್ಲಿ ಕೆಲಸದ ಅವಧಿಯನ್ನು 12 ಗಂಟೆಗೆ ಹೆಚ್ಚಿಸುವ ಮತ್ತು ರಾತ್ರಿ ಪಾಳಿಯಲ್ಲಿ ಕೆಲಸ ಮಾಡಲು ಮಹಿಳೆಯರಿಗೆ ಅವಕಾಶ ಮಾಡಿಕೊಡುವ ಕಾರ್ಖಾನೆಗಳ (ಕರ್ನಾಟಕ ತಿದ್ದುಪಡಿ) ಮಸೂದೆ-2023ನ್ನು ವಿರೋಧಿಸಿ ಮಾತನಾಡಿದ ಆವರು, ಬಿಜೆಪಿ ಯಾವತ್ತೂ ಬಡವರ, ಕಾರ್ಮಿಕರ ಪರ. ಮಧ್ಯಮ ವರ್ಗದ ಶ್ರಮಜೀವಿ ಮೋದಿ ಪ್ರಧಾನಿ ಆಗಿ ಭಾರತ ಇಂದು ವಿಶ್ವಭಾರತ ಎನಿಸಿಕೊಂಡಿದೆ. ಹೀಗಿದ್ದಾಗ ಇಂತಹ ಕಾಯ್ದೆಗಳಿಂದ ಬಡವರ ವಿರೋಧಿ, ಕಾರ್ಮಿಕ ವಿರೋಧಿ ಕಾಯ್ದೆಗಳು ಅವರ ಕಾಲದಲ್ಲಿ ಬರಬಾರದು ಎಂದೂ ಎಚ್ಚರಿಕೆಯ ಮಾತುಗಳನ್ನು ಆಡಿದರು.
ಬಿಜೆಪಿಯ ತೇಜಸ್ವಿನಿ ಗೌಡ, ಶಶೀಲ್ ನಮೋಶಿ, ಕಾಂಗ್ರೆಸ್‌ನ ಸಿ.ಎಂ. ಲಿಂಗಪ್ಪ, ಪಿ.ಆರ್. ರಮೇಶ್, ಮೋಹನ್ ಕೊಂಡಜ್ಜಿ, ಜೆಡಿಎಸ್‌ನ ಮರಿತಿಬ್ಬೇಗೌಡ, ಕೆ.ಎ ತಿಪ್ಪೇಸ್ವಾಮಿ, ಟಿ.ಎ. ಶರವಣ ಮಸೂದೆಯನ್ನು ವಿರೋಧಿಸಿದರು. ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಮತ್ತು ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ತಿದ್ದುಪಡಿ ಮಸೂದೆಯನ್ನು ಅಷ್ಟೇ ಬಲವಾಗಿ ಸಮರ್ಥಿಸಿಕೊಂಡರು.
ಅಂಗೀಕಾರ
ಮೇಲ್ಮನೆಯಲ್ಲಿ ಆಡಳಿತ, ವಿಪಕ್ಷಗಳ ತೀವ್ರ ವಿರೋಧ ಮತ್ತು ಸಭಾತ್ಯಾಗ ಹಾಗೂ ಆಡಳಿತ ಪಕ್ಷದ ಸದಸ್ಯ ಆಯ ನೂರು ಮಂಜುನಾಥ ಅವರ ಸದನದ ಬಹಿಷ್ಕಾರದ ಮಧ್ಯೆ ಮಸೂದೆಗೆ ಧ್ವನಿಮತದ ಅಂಗೀಕಾರ ದೊರಕಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಜಮೀರ್ ವಿರುದ್ಧ ಕೈಕಮಾಂಡ್‌ಗೆ 20ಕ್ಕೂ ಹೆಚ್ಚು ಶಾಸಕರಿಂದ ದೂರು
Belagavi: ಎಸ್‌ಡಿಎ ಆತ್ಮಹ*ತ್ಯೆ: ಸಚಿವೆ ಹೆಬ್ಬಾಳ್ಕರ್ ರಾಜೀನಾಮೆಗೆ ಬಿಜೆಪಿ ಪಟ್ಟು
Congress Government: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಮುಹೂರ್ತ ನಿಗದಿ: ವಿಜಯೇಂದ್ರ
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
MUST WATCH
ಹೊಸ ಸೇರ್ಪಡೆ
Milk: ಕರ್ನಾಟಕ ಗಡಿಯ ಹಾಲು ಕೇರಳ ಪಾಲು! ಖರೀದಿ ದರ ಇಲ್ಲಿಗಿಂತ ಕೇರಳದಲ್ಲೇ ಅಧಿಕ
Congress: ಜಮೀರ್ ವಿರುದ್ಧ ಕೈಕಮಾಂಡ್‌ಗೆ 20ಕ್ಕೂ ಹೆಚ್ಚು ಶಾಸಕರಿಂದ ದೂರು
Olympics; 2036ರ ಒಲಿಂಪಿಕ್ಸ್‌ಗೆ ಬಿಡ್: ಭಾರತದಿಂದ ಐಒಸಿಗೆ ಅಧಿಕೃತ ಅರ್ಜಿ
Belagavi: ಎಸ್‌ಡಿಎ ಆತ್ಮಹ*ತ್ಯೆ: ಸಚಿವೆ ಹೆಬ್ಬಾಳ್ಕರ್ ರಾಜೀನಾಮೆಗೆ ಬಿಜೆಪಿ ಪಟ್ಟು
Supreme Court: ಬೇಕಾಬಿಟ್ಟಿ ಖಾಸಗಿ ಆಸ್ತಿ ಸ್ವಾಧೀನ ಸಲ್ಲ;ವಿಶೇಷ ಪ್ರಕರಣದಲ್ಲಷ್ಟೇ ಸ್ವಾಧೀನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.