ಕುಷ್ಟಗಿ: ಸ್ಪರ್ಧಾತ್ಮಕ ಪರೀಕ್ಷೆ; ಪರೀಕ್ಷಾರ್ಥಿಗಳಿಗೆ ಪ್ರತ್ಯೇಕ ಬಸ್ ಸೌಲಭ್ಯ
Team Udayavani, Feb 25, 2023, 11:34 AM IST
ಕುಷ್ಟಗಿ: ಕಲಬುರಗಿ, ಬೀದರ್ ನಲ್ಲಿ ಫೆ. 25 ರಂದು ಆಯೋಜನೆಯಾಗಿದ್ದ ಕೆಪಿಎಸ್ ಸಿ ಸ್ಪರ್ಧಾತ್ಮಕ ಪರೀಕ್ಷೆಗೆ ಬಸ್ ಸೌಲಭ್ಯ ಇಲ್ಲದೇ ಕಂಗಾಲಾದ ಪರೀಕ್ಷಾರ್ಥಿಗಳಿಗೆ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ ಪ್ರತ್ಯೇಕ ಬಸ್ ಸೌಲಭ್ಯ ಕಲ್ಪಿಸಿದ್ದಾರೆ.
50 ವಿದ್ಯಾರ್ಥಿಗಳು ಕೆಪಿಎಸ್ಸಿ ಪರೀಕ್ಷೆಗೆ ಕಲಬುರಗಿ, ಬೀದರ್‌ಗೆ ಪ್ರತ್ಯೇಕವಾಗಿ ಹೋಗಬೇಕಿತ್ತು. ಆ ವೇಳೆ ಬಸ್ ಇಲ್ಲದಿರುವ ಹಿನ್ನೆಲೆ ಪ್ರತ್ಯೇಕ ಬಸ್ ವ್ಯವಸ್ಥೆ ಕಲ್ಪಿಸಲು ಪರೀಕ್ಷಾರ್ಥಿಗಳು ಡಿಪೋ ಮ್ಯಾನೇಜರ್ ಜಡೇಶ ಅವರಲ್ಲಿ ಮನವಿ ಮಾಡಿದ್ದು, ಇದಕ್ಕೆ ಘಟಕದ ವ್ಯವಸ್ಥಾಪಕ ಅಸಹಾಯಕತೆ ವ್ಯಕ್ತಪಡಿಸಿದ್ದರು.
ಶಾಸಕರಿಗೆ ವಾಸ್ತವ ಸ್ಥಿತಿ ಗಮನಕ್ಕೆ ತಂದಿದ್ದು, ಕೂಡಲೇ ಘಟಕದ ವ್ಯವಸ್ಥಾಪಕ ಜಡೇಶ ಅವರನ್ನು ಸಂಪರ್ಕಿಸಿ ಬೀದರ್, ಕಲಬುರಗಿಗೆ ಪ್ರತ್ಯೇಕವಾಗಿ ಎರಡು ಬಸ್ ಗಳನ್ನು ಬಿಡಲು ಸೂಚಿಸಿದ್ದರಿಂದ ಆತಂಕಗೊಂಡಿದ್ದ ಪರೀಕ್ಷಾರ್ಥಿಗಳು ನಿರಾಳರಾಗಿ ಕಲಬುರಗಿಗೆ 30 ಪರೀಕ್ಷಾರ್ಥಿಗಳು, ಬೀದರಗೆ 20 ಪರೀಕ್ಷಾರ್ಥಿಗಳು ಹೆಚ್ಚುವರಿ ಬಸ್ ನಲ್ಲಿ ಪ್ರಯಾಣ ಬೆಳೆಸಿದರು.
ಈ ಕುರಿತು ಘಟಕ ವ್ಯವಸ್ಥಾಪಕ ಜಡೇಶ ಪ್ರತಿಕ್ರಿಯಿಸಿ, ಚಿಕ್ಕೋಡಿ ಹಾಗೂ ರಾಯಚೂರ ಮಾರ್ಗದ ಬಸ್ ಗಳನ್ನು ವಿಚಲನಗೊಳಿಸಿ ಬೀದರ್ ಹಾಗೂ ಕಲಬುರಗಿಗೆ ಬಸ್ ಬಿಡಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!
Tragedy: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲೂ ಬಾಣಂತಿ, ಶಿಶು ಸಾವು: ಕುಟುಂಬಸ್ಥರ ಆಕ್ರೋಶ
Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು
ಕೊಪ್ಪಳದಲ್ಲಿ ಕ್ಯಾನ್ಸರ್ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್ ಪತ್ತೆ!
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.