ಸ್ವಾಮೀಜಿಗಳು ವಿಧಾನಸೌಧದಲ್ಲಿ ಕಾಣಿಸಿಕೊಳ್ಳುವುದು ಸರಿಯಲ್ಲ: ಹೊರಟ್ಟಿ
Team Udayavani, Feb 26, 2023, 6:45 AM IST
ಧಾರವಾಡ: ಸ್ವಾಮೀಜಿಗಳು ಸಮಾಜಕ್ಕೆ ಮಾದರಿ. ಅವರು ಮಠ ಬಿಟ್ಟು ವಿಧಾನಸೌಧದಲ್ಲಿ ಕಾಣಿಸಿಕೊಳ್ಳುವುದು ಸರಿಯಲ್ಲ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ನಾನು ನೋಡಿದಂತೆ ಬಹುತೇಕ ಸ್ವಾಮೀಜಿಗಳು ವಿಧಾನಸೌಧದಲ್ಲಿಯೇ ಇರುತ್ತಾರೆ. ಇದು ಸರಿಯಾದ ಬೆಳವಣಿಗೆಯಲ್ಲ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಸ್ವಾಮೀಜಿಗಳು ರಾಜಕಾರಣಕ್ಕೆ ಬರಲಿ ಎಂದು ಯಾವ ಅರ್ಥದಲ್ಲಿ ಹೇಳಿದ್ದಾರೆ ಗೊತ್ತಿಲ್ಲ. ಚುನಾವಣೆಯಲ್ಲಿ ಮತ ಚಲಾವಣೆ ಮಾಡುವವರು ಬುದ್ಧಿವಂತರಾಗುವವರೆಗೂ ಒಳ್ಳೆಯ ಸರಕಾರ ಬರಲು ಸಾಧ್ಯವಿಲ್ಲ. ಇಂದಿನ ದಿನಗಳಲ್ಲಿ ರಾಜಕಾರಣ ಬಹಳ ಕಲುಷಿತವಾಗಿದೆ. ಪ್ರಜಾಪ್ರಭುತ್ವದಲ್ಲಿ ತಮ್ಮ ಹಕ್ಕು ಚಲಾಯಿಸುವ ಅನೇಕರಿಗೆ ಕರ್ತವ್ಯದ ಬಗ್ಗೆ ಅರಿವು ಇಲ್ಲವಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು.
ಯಡಿಯೂರಪ್ಪ ಪಕ್ಷಾತೀತ ನಾಯಕ. ಹೋರಾಟದಿಂದಲೇ ಬೆಳೆದು ನಾಲ್ಕು ಸಾರಿ ಸಿಎಂ ಆಗಿ ಸಾಕಷ್ಟು ಅನುಭವ ಹೊಂದಿದ್ದಾರೆ. ಇತ್ತೀಚಿನ ಅಧಿವೇಶನದಲ್ಲಿ ಬರೀ ತಿಕ್ಕಾಟ ನಡೆದಿವೆ ಹೊರತು ಅಭಿವೃದ್ಧಿ ಬಗ್ಗೆ ಯಾವ ಪಕ್ಷದವರೂ ಮಾತನಾಡುತ್ತಿಲ್ಲ. ಒಬ್ಬರ ಮೇಲೆ ಒಬ್ಬರು ಟೀಕೆ ಮಾಡುವುದನ್ನು ಬಿಟ್ಟು ಜನ ಕಲ್ಯಾಣ, ರಾಜ್ಯದ ಅಭಿವೃದ್ಧಿಗಾಗಿ ಆರೋಗ್ಯಕರ ಚರ್ಚೆ ನಡೆಸಲು ಪ್ರಯತ್ನಿಸಬೇಕು ಎಂದರು.
ಮುನ್ನೆಲೆಗೆ ಬರುವುದು ಸಾಮಾನ್ಯ
ಮಹದಾಯಿ ವಿಚಾರ ಚುನಾವಣೆ ಸಮಯದಲ್ಲಿ ಮುನ್ನೆಲೆಗೆ ಬರುವುದು ಸಾಮಾನ್ಯ. ಕೇಂದ್ರ ಸರಕಾರ ಅನುಮತಿ ನೀಡಿದ ಬೆನ್ನಲ್ಲೆ ಗೋವಾ ಆಕ್ಷೇಪ ತೆಗೆದು ಕೋರ್ಟ್ ಮೆಟ್ಟಿಲೇರುತ್ತದೆ. ವಿನಾಕಾರಣ ಕಾನೂನು ತೊಡಕು ಉಂಟು ಮಾಡುವ ಕೆಲಸ ಮಾಡುತ್ತಿದೆ. ಆದರೆ ಈ ಬಾರಿ ನೀರು ಬರುವ ಭರವಸೆ ಇದೆ. ಈ ಬಗ್ಗೆ ಜಲಸನ್ಮೂಲ ಸಚಿವರೊಂದಿಗೆ ಚರ್ಚೆ ಮಾಡಿದ್ದೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.