![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Feb 26, 2023, 5:00 AM IST
ಉಪ್ಪಿನಂಗಡಿ: ಇ- ಸಿಗರೇಟ್ ಮಾರಾಟ ಮಾಡುತ್ತಿದ್ದ ಮೊಬೈಲ್ ಅಂಗಡಿಯೊಂದಕ್ಕೆ ಉಪ್ಪಿನಂಗಡಿ ಪೊಲೀಸರು ಶನಿವಾರ ರಾತ್ರಿ ದಾಳಿ ನಡೆಸಿದ್ದಾರೆ.
ಇಲ್ಲಿನ ಹಳೆ ಬಸ್ ನಿಲ್ದಾಣದ ಸಮೀಪದ ಮೊಬೈಲ್ ಅಂಗಡಿಯೊಂದರಲ್ಲಿ ಇ- ಸಿಗರೇಟ್ ಮಾರಲಾಗುತ್ತಿದೆ ಅನ್ನುವ ಖಚಿತ ಮಾಹಿತಿ ಪಡೆದ ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕ ರವಿ ಹಾಗೂ ಉಪ್ಪಿನಂಗಡಿ ಪೊಲೀಸ್ ಠಾಣಾ ಉಪನಿರೀಕ್ಷಕ ರಾಜೇಶ್ ಕೆ.ವಿ. ಅವರ ತಂಡ ಮೊಬೈಲ್ ಅಂಗಡಿಯಿಂದ ಇ- ಸಿಗರೇಟ್‌ಗೆ ಬಳಸಲಾಗುವ ಅಮಲು ಪದಾರ್ಥ, ಸ್ಮೋಕ್ ಮಾಡಲು ಬೇಕಾದ ಟ್ಯೂಬ್‌ಗಳನ್ನು ವಶಕ್ಕೆ ತೆಗೆದುಕೊಂಡಿದೆ. ಇ- ಸಿಗರೇಟ್ ಮಾರಾಟ ಕಾನೂನು ಬಾಹಿರವಾಗಿದ್ದು, ಪೊಲೀಸ್ ತನಿಖೆ
ಪ್ರಗತಿಯಲ್ಲಿದೆ.
You seem to have an Ad Blocker on.
To continue reading, please turn it off or whitelist Udayavani.