ಮನೀಶ್ ಸಿಸೋಡಿಯಾ ಬಂಧನ; ಮುಂದಿನದು ಕೇಜ್ರಿವಾಲ್ ಎಂದ ಬಿಜೆಪಿ ನಾಯಕ
ಪ್ರಜಾಪ್ರಭುತ್ವಕ್ಕೆ ಕರಾಳ ದಿನ ಎಂದ ಆಪ್
Team Udayavani, Feb 26, 2023, 9:34 PM IST
ನವದೆಹಲಿ : ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಕೇಂದ್ರ ತನಿಖಾ ದಳ (ಸಿಬಿಐ) ಭಾನುವಾರ ಸಂಜೆ ಬಂಧಿಸಿದೆ. ಸದ್ಯಕ್ಕೆ ಅವರನ್ನು ಸಿಬಿಐ ಕೇಂದ್ರ ಕಚೇರಿಯಲ್ಲಿ ಇರಿಸಲಾಗುತ್ತಿದೆ.
ಬಂಧನದ ಬಗ್ಗೆ ಪ್ರತಿಕ್ರಿಯಿಸಿದ ಆಮ್ ಆದ್ಮಿ ಪಕ್ಷ, “ಪ್ರಜಾಪ್ರಭುತ್ವಕ್ಕೆ ಕರಾಳ ದಿನ! ಲಕ್ಷಾಂತರ ಮಕ್ಕಳ ಭವಿಷ್ಯ ರೂಪಿಸುತ್ತಿರುವ ವಿಶ್ವದ ಅತ್ಯುತ್ತಮ ಶಿಕ್ಷಣ ಸಚಿವ ಮನೀಶ್ ಸಿಸೋಡಿಯಾ ಅವರನ್ನು ಬಿಜೆಪಿಯ ಸಿಬಿಐ ನಕಲಿ ಪ್ರಕರಣದಲ್ಲಿ ಬಂಧಿಸಿದೆ. ರಾಜಕೀಯ ವೈಷಮ್ಯದಿಂದ ಬಿಜೆಪಿ ಈ ಬಂಧನ ಮಾಡಿದೆ” ಎಂದು ಆಕ್ರೋಶ ಹೊರ ಹಾಕಿದೆ.
ಅಮಾಯಕನ ಬಂಧನ
ಮನೀಶ್ ಅಮಾಯಕ. ಅವರ ಬಂಧನ ಕೊಳಕು ರಾಜಕೀಯ. ಮನೀಶ್ ಬಂಧನದಿಂದ ಜನರಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಎಲ್ಲರೂ ನೋಡುತ್ತಿದ್ದಾರೆ. ಜನರು ಎಲ್ಲವನ್ನೂ ಅರ್ಥಮಾಡಿಕೊಳ್ಳುತ್ತಿದ್ದಾರೆ. ಇದಕ್ಕೆ ಜನ ಸ್ಪಂದಿಸುತ್ತಾರೆ.ಇದು ನಮ್ಮ ಉತ್ಸಾಹವನ್ನು ಮತ್ತಷ್ಟು ಹೆಚ್ಚಿಸುತ್ತದೆ. ನಮ್ಮ ಹೋರಾಟ ಇನ್ನಷ್ಟು ಬಲಗೊಳ್ಳಲಿದೆ ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.
ಸಂಸದ ಸಂಜಯ್ ಸಿಂಗ್ ಟ್ವೀಟ್ ಮಾಡಿ, ಮನೀಶ್ ಸಿಸೋಡಿಯಾ ಬಂಧನ ಸರ್ವಾಧಿಕಾರದ ಪರಮಾವಧಿ. ಮೋದಿಜೀ, ಒಬ್ಬ ಒಳ್ಳೆಯ ವ್ಯಕ್ತಿ ಮತ್ತು ಅತ್ಯುತ್ತಮ ಶಿಕ್ಷಣ ಮಂತ್ರಿಯನ್ನು ಬಂಧಿಸಿ ನೀವು ಒಳ್ಳೆಯದನ್ನು ಮಾಡಿಲ್ಲ. ದೇವರು ಕೂಡ ನಿಮ್ಮನ್ನು ಕ್ಷಮಿಸುವುದಿಲ್ಲ. ಮುಂದೊಂದು ದಿನ ನಿಮ್ಮ ಸರ್ವಾಧಿಕಾರ ಖಂಡಿತಾ ಕೊನೆಗೊಳ್ಳುತ್ತದೆ ಮೋದಿ ಜೀ” ಎಂದು ಟ್ವೀಟ್ ಮಾಡಿದ್ದಾರೆ.
ಕೇಜ್ರಿವಾಲ್ ಕೂಡ ಜೈಲಿಗೆ ಹೋಗುತ್ತಾರೆ
“ಕೊನೆಗೂ ಮದ್ಯದ ಹಗರಣದಲ್ಲಿ ಮನೀಶ್ ಸಿಸೋಡಿಯಾ ಅವರನ್ನು ಬಂಧಿಸಲಾಗಿದೆ. ಮದ್ಯಪಾನದಿಂದ ಹಾಳಾದ ಕುಟುಂಬಗಳ ತಾಯಂದಿರು ಮತ್ತು ಸಹೋದರಿಯರಿಂದ ಅವರು ಶಾಪಗ್ರಸ್ತರಾಗಿದ್ದರು. ಸತ್ಯೇಂದ್ರ ಜೈನ್ ನಂತರ ಅರವಿಂದ್ ಕೇಜ್ರಿವಾಲ್ ಅವರ ಮತ್ತೊಬ್ಬ ಭ್ರಷ್ಟ ಸಚಿವ ಜೈಲು ಸೇರಿದ್ದಾರೆ. ಅರವಿಂದ್ ಕೇಜ್ರಿವಾಲ್, ಮನೀಶ್ ಸಿಸೋಡಿಯಾ ಮತ್ತು ಸತ್ಯೇಂದ್ರ ಜೈನ್ ಜೈಲಿಗೆ ಹೋಗುತ್ತಾರೆ ಎಂದು ಮೊದಲಿನಿಂದಲೂ ಹೇಳುತ್ತಲೇ ಬಂದಿದ್ದೇನೆ. ಅವರಲ್ಲಿ ಇಬ್ಬರು ಈಗಾಗಲೇ ಇದ್ದಾರೆ. ನಂತರದ ಸ್ಥಾನದಲ್ಲಿ ಕೇಜ್ರಿವಾಲ್ ಇದ್ದಾರೆ ಎಂದು ಬಿಜೆಪಿಯ ಕಪಿಲ್ ಮಿಶ್ರಾ ಹೇಳಿದ್ದಾರೆ.
ವೈದ್ಯಕೀಯ ಪರೀಕ್ಷೆ
ಸಿಸೋಡಿಯಾ ಅವರನ್ನು ಭಾನುವಾರ ಎಂಟು ಗಂಟೆಗಳ ಕಾಲ ಸಿಬಿಐ ವಿಚಾರಣೆ ನಡೆಸಿದ ನಂತರ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಯಿತು. ಅವರನ್ನು ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು.
ಭಾನುವಾರ ರಾತ್ರಿ ಮನೀಶ್ ಸಿಸೋಡಿಯಾ ಅವರ ವೈದ್ಯಕೀಯ ಪರೀಕ್ಷೆ ನಡೆಯಲಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವ ಮೊದಲು ವೈದ್ಯಕೀಯ ತಪಾಸಣೆ ಅಗತ್ಯವಿದೆ. ಸಾಮಾನ್ಯವಾಗಿ, ಒಬ್ಬ ಆರೋಪಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗುತ್ತದೆ, ಆದರೆ ಭದ್ರತಾ ವಿವರಗಳ ದೃಷ್ಟಿಯಿಂದ, ಸಿಬಿಐ ಪ್ರಧಾನ ಕಚೇರಿಯಲ್ಲೇ ತಪಾಸಣೆ ಮಾಡಲು ಸಂಸ್ಥೆ ನಿರ್ಧರಿಸಿದೆ.
ಆಮ್ ಆದ್ಮಿ ಪಕ್ಷದ ಪ್ರಮುಖ ನಾಯಕರಾದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತು ಪಂಜಾಬ್ ಸಿಎಂ ಭಗವಂತ್ ಮಾನ್ ಅವರು ಮನೀಶ್ ಸಿಸೋಡಿಯಾ ಅವರ ನಿವಾಸವನ್ನು ತಲುಪಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.