ಕೊರಟಗೆರೆ: ಶಿಕ್ಷಕರ ನಿದ್ದೆಗೆಡಿಸಿದ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ

ಇಂದು ಯಾವ ಶಾಲೆಗೆ ಬರಲಿದ್ದಾರೆ ಎಂದು ನಡುಕ...!

Team Udayavani, Feb 26, 2023, 9:47 PM IST

1-A-SDS

ಕೊರಟಗೆರೆ: ನೂತನ ಬಿಇಒ ಅಧಿಕಾರ ಸ್ವೀಕಾರ ಮಾಡಿದ ಕೆಲವೇ ದಿನಗಳಲ್ಲಿ ಶಿಕ್ಷಕರು ಶಾಲೆಗೆ ಬರುವ ಮುಂಚೆಯೇ ಶಾಲೆಯ ಮುಂದೆ ಹಾಜರಾಗುವ ಮೂಲಕ ಶಿಕ್ಷಕ ಸಮೂಹಕ್ಕೆ ಬ್ಲಾಕ್ ಶಿಕ್ಷಣಾಧಿಕಾರಿ ನಟರಾಜು ಸಿ.ವಿ ಶಾಕ್ ನೀಡಿದ್ದಾರೆ.

ಕೊರಟಗೆರೆ ತಾಲೂಕಿನಲ್ಲಿ ಇತ್ತೀಚಿಗೆ ನೂತನವಾಗಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ನಟರಾಜ್ ಹಲವು ಶಾಲೆಗಳಿಗೆ ಅನಿರೀಕ್ಷಿತ ಭೇಟಿ ನೀಡುವ ಮೂಲಕ ಶಿಕ್ಷಕರಿಗೆ ಅಚ್ಚರಿ ಮೂಡಿಸಿದ್ದಾರೆ.

ಇಷ್ಟ ಬಂದಾಗ ಶಾಲೆಗೆ ಬರುವುದು, ಅವಶ್ಯಕತೆ ಬಿದ್ದರೆ ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಶಾಲೆಯಿಂದ ಹೊರ ಹೋಗುವ ಶಿಕ್ಷಕರುಗಳಿಗೆ ಸಿಂಹ ಸ್ವಪ್ನವಾದ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ, ಶಿಕ್ಷಕರು ಶಾಲೆಗೆ ಬರುವ ಮುಂಚೆ ಶಾಲಾ ಕಾಂಪೌಂಡ್ ನಲ್ಲಿ ಕಾಣಿಸಿಕೊಳ್ಳುವುದು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ, ವಿದ್ಯಾರ್ಥಿಗಳ ಮುಂದೆ ಶಿಕ್ಷಕರಂತೆ ಬೋಧಿಸಿ ನೀತಿ ಪಾಠ ಹೇಳುವ ಬಿಇಓ ನಡವಳಿಕೆಯ ಕಂಡು ಶಾಲಾ ಮಕ್ಕಳ ಪೋಷಕರ ಹುಬ್ಬೇರುವಂತೆ ಮಾಡಿದೆ.

ತಾಲೂಕಿನಲ್ಲಿ ಇತ್ತೀಚೆಗೆ ಅನಿರೀಕ್ಷಿತ ಭೇಟಿ ಕೊಡುತ್ತಿರುವ ಬಿಇಒ ನಟರಾಜ್ ಇಂದು ಯಾವ ಶಾಲೆಗೆ ಬರಲಿದ್ದಾರೆ ಎಂದು ಶಿಕ್ಷಕರಿಗೆ ನಡುಕ ಹುಟ್ಟುತ್ತಿದೆ, ಯಾವುದೇ ಮಾಹಿತಿ ಇಲ್ಲದೆ ಬೆಳ್ಳಂಬೆಳ್ಳಗೆ ಶಿಕ್ಷಕರು ಶಾಲೆಗೆ ಬರುವ ಮುಂಚೆಯೇ ಶಾಲೆಯ ಮುಂದೆ ಹಾಜರಾಗುವ ಬಿಇಓ ನಟರಾಜ್ ಶಾಲೆಯ ಪೂರ್ಣ ವಾತಾವರಣವನ್ನು ಕಲೆಹಾಕಿ ಶಿಕ್ಷಕರಿಗೆ ಖಡಕ್ ಎಚ್ಚರಿಕೆ ನೀಡಲು , ಸರ್ಪ್ರೈಸ್ ವಿಸಿಟ್ ನೀಡುವ ಮೂಲಕ ತಾಲೂಕಿನಲ್ಲಿ ಮಿಂಚಿನ ಸಂಚಲನವನ್ನೇ ಮೂಡಿಸಿದ್ದಾರೆ.

ಬಿಇಒ ನಟರಾಜ್ ಶೈಕ್ಷಣಿಕ ಕ್ಷೇತ್ರದಲ್ಲಿ ಒಂದು ಬದಲಾವಣೆ ತರಲು ಒಂದು ವಿಶಿಷ್ಟ ರೀತಿಯಲ್ಲಿ ಪ್ರಯೋಗ ಮಾಡುತ್ತಿದ್ದು, ಕೊರಟಗೆರೆ ತಾಲೂಕಿನಲ್ಲಿ ಹಲವು ಶಾಲೆಗಳಿಗೆ ಇತ್ತೀಚಿಗೆ ಸರ್ಪ್ರೈಸ್ ವಿಸಿಟ್ ನೀಡುವ ಮೂಲಕ ನಿಗದಿತ ಸಮಯಕ್ಕೆ ಹಾಜರಾಗದ ಶಿಕ್ಷಕರುಗಳಿಗೆ ಶಾಕ್ ನೀಡಿದ್ದು, ಜೊತೆಗೆ ಶಾಲೆಯನ್ನು ಮುಕ್ತಾಯ ಸಮಯಕ್ಕಿಂತ ಮುಂಚೆ ಹೊರಹೋಗುವ ಶಿಕ್ಷಕರಿಗೂ ಖಡಕ್ ಎಚ್ಚರಿಕೆ ನೀಡಿದ್ದಾರೆ,

ಇತ್ತೀಚೆಗೆ ಕೊರಟಗೆರೆ ತಾಲೂಕಿನ ಅಗ್ರಹಾರ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಹಾಗೂ ಪ್ರೌಢಶಾಲೆಗೆ ಶಾಲೆಯ ಬೆಲ್ ಹೊಡೆಯುವುದಕ್ಕಿಂತ ಮುಂಚೆಯೇ ಶಾಲೆಯ ಮುಂದೆ ಪ್ರತ್ಯಕ್ಷರಾಗಿದ್ದಾರೆ, ಇನ್ನು ಹಲವು ಶಿಕ್ಷಕರು ಶಾಲೆಗೆ ಆಗಮಿಸುವ ಮುಂಚೆ ಶಾಲೆಯ ಕೊಠಡಿಯಲ್ಲಿ ಕುಳಿತು, ಶಾಲೆಯ ವಾತಾವರಣವನ್ನು ಕೂಲಂಕಷವಾಗಿ ಪರಿಶೀಲನೆ ನಡೆಸಿದ್ದಲ್ಲದೆ, ತಾವೇ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಶಿಕ್ಷಕರಂತೆ ಚಾಕ್ ಪೀಸ್ ಹಿಡಿದು ಅರ್ಧ ತಾಸಿಗೂ ಹೆಚ್ಚು ಕಾಲ ಪಾಠ ಪ್ರವಚನದ ಜೊತೆಗೆ ಶಿಸ್ತು ಬದ್ಧ ಜೀವನ, ಮುಂದಿನ ಕೆಲವೇ ದಿನಗಳಲ್ಲಿ ಬರಲಿರುವ ಪರೀಕ್ಷೆಯಲ್ಲಿ ಯಾವ ರೀತಿ ವಿದ್ಯಾರ್ಥಿಗಳು ಯಶಸ್ವಿಯಾಗಿ ಎದುರಿಸಬೇಕು ಎಂಬುದನ್ನು ಹೇಳಿ ಹುರಿದುಂಬಿಸಿದರು.

ನಂತರ ಶಿಕ್ಷಕರು ಹಾಗೂ ವಿದ್ಯಾರ್ಥಿಗಳೊಂದಿಗೆ ಶಾಲಾ ಪ್ರಾರ್ಥನೆಯಲ್ಲಿ ಭಾಗವಹಿಸಿ ಪ್ರೌಢಶಾಲಾ ಮಕ್ಕಳಿಗೆ ಪ್ರಾರ್ಥನಾ ಸಂದರ್ಭದಲ್ಲಿಯೇ ವಿದ್ಯಾರ್ಥಿ ಜೀವನದ ಮೌಲ್ಯವನ್ನು, ಶಿಸ್ತು ಬದ್ಧ ಜೀವನವನ್ನು ರೂಪಿಸಿಕೊಳ್ಳಲು ನೀತಿ ಪಾಠ ಹೇಳಿದರು,

ನಂತರ ಶಿಕ್ಷಕರುಗಳಿಗೆ 5 ನಿಮಿಷಗಳ ಕಾಲ ಪ್ರತ್ಯೇಕವಾಗಿ ಮೀಟಿಂಗ್ ನಡೆಸಿ ಶಾಲೆಯಲ್ಲಿ ಉತ್ತಮ ಫಲಿತಾಂಶ ಬರಬೇಕು, ಶಾಲೆಯ ವಾತಾವರಣವನ್ನು ತುಂಬಾ ವ್ಯವಸ್ಥಿತವಾಗಿ ನಿರ್ವಹಿಸಲು ಕಿವಿ ಮಾತು ಹೇಳಿದ್ದಲ್ಲದೆ ಯಾವುದೇ ಲೋಪ ಅಥವಾ ಆರೋಪಗಳು ಕೇಳಿ ಬಂದಲ್ಲಿ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸುವುದಾಗಿ ಶಿಕ್ಷಕರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಟಾಪ್ ನ್ಯೂಸ್

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

142

Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

4-kunigal

Kunigal: ಕೆಂಪನಹಳ್ಳಿ ಗ್ರಾಮದಲ್ಲಿ ಸರಣಿ ಕಳ್ಳತನ

14-kunigal

Kunigal: ಟೈರ್ ಸ್ಪೋಟಗೊಂಡು ಕಾರು ಪಲ್ಟಿ: ಐಟಿ ಉದ್ಯೋಗಿ ದುರ್ಮರಣ

K. N. Rajanna: “ಸರ್ಕಾರ ತೆಗಿತೀನಿ ಅನ್ನೋದು ಪ್ರಜಾಪ್ರಭುತ್ವಕ್ಕೆ ಅವಮಾನ’

K. N. Rajanna: “ಸರ್ಕಾರ ತೆಗಿತೀನಿ ಅನ್ನೋದು ಪ್ರಜಾಪ್ರಭುತ್ವಕ್ಕೆ ಅವಮಾನ’

koratagere

Koratagere: ಗೃಹ ಸಚಿವರ ಸ್ವ ಕ್ಷೇತ್ರದಲ್ಲೇ ಮಲ ಹೊತ್ತ 10 ವರ್ಷದ ಬಾಲಕ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

142

Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.