![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Feb 27, 2023, 5:25 AM IST
ಬಳ್ಳಾರಿ: ಮಾಜಿ ಸಿಎಂ ಯಡಿಯೂರಪ್ಪನವರು ಇದೊಂದು ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಬೇಕು. ಒಂದು ವೇಳೆ ಬಳ್ಳಾರಿ ನಗರ ಕ್ಷೇತ್ರದಿಂದ ಸ್ಪರ್ಧಿಸಿದರೂ ಒಂದು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಅವರನ್ನು ಗೆಲ್ಲಿಸುವೆ ಎಂದು ಶಾಸಕ ಜಿ. ಸೋಮಶೇಖರ ರೆಡ್ಡಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಈಗಾಗಲೇ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದಾರೆ. ಆದರೆ ಅವರ ರಾಜಕೀಯ ಅನುಭವ ಈ ರಾಜ್ಯದ ಅಭಿವೃದ್ಧಿಗೆ ಇನ್ನಷ್ಟು ಬೇಕು. ಅವರನ್ನು ಸದನದಲ್ಲಿ ನೋಡದಿದ್ದಲ್ಲಿ ಬೇಸರವಾಗಲಿದೆ. ಅವರೊಬ್ಬ ಧೀಮಂತ ನಾಯಕ. ಸದನದಲ್ಲಿ ಅವರು ಎದ್ದು ನಿಂತು ಮಾತನಾಡಿದರೆ ಅದರ ವಿಶೇಷತೆಯೇ ಬೇರೆ ಎಂದು ಬಣ್ಣಿಸಿದರು.
ಇತ್ತೀಚೆಗೆ ಸಂಡೂರಿಗೆ ಆಗಮಿಸಿದ್ದ ಯಡಿಯೂರಪ್ಪರನ್ನು ಭೇಟಿ ಮಾಡಿದಾಗ ಇದೊಂದು ಬಾರಿ ಸ್ಪರ್ಧಿಸುವಂತೆ ಮನವಿ ಮಾಡಿದ್ದೆ. ಒಂದು ವೇಳೆ ಅವರು ಬಳ್ಳಾರಿ ನಗರ ಕ್ಷೇತ್ರದಿಂದ ಸ್ಪರ್ಧಿಸಿದರೂ ಕ್ಷೇತ್ರ ಬಿಟ್ಟುಕೊಡಲು ಸಿದ್ಧನಿದ್ದು, ಒಂದು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸುವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಯಡಿಯೂರಪ್ಪನವರ ಸಲಹೆ, ಮಾರ್ಗದರ್ಶನ ಇಡೀ ಬಿಜೆಪಿಗೇ ಬೇಕು ಎಂದರು.
Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ
Kampli: ಕಣವಿ ತಿಮ್ಮಾಪುರದಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ತೆಲುಗು ಶಾಸನ ಪತ್ತೆ
BJP: ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಎಲ್ಲರನ್ನೂ ಒಂದುಗೂಡಿಸುವೆ: ಬಿ.ಶ್ರೀರಾಮುಲು
Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ
Siruguppa: ತಹಶೀಲ್ದಾರ್ ಗೆ ಬೆದರಿಕೆ ಪ್ರಕರಣ, ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.