ಉಪ್ಪಿನಂಗಡಿ: ಇ- ಸಿಗರೇಟ್ ವಶ
Team Udayavani, Feb 27, 2023, 5:55 AM IST
ಉಪ್ಪಿನಂಗಡಿ: ಇಲ್ಲಿನ ಮೊಬೈಲ್ ಅಂಗಡಿಗೆ ಶನಿವಾರ ರಾತ್ರಿ ದಾಳಿ ನಡೆಸಿದ ಉಪ್ಪಿನಂಗಡಿ ಪೊಲೀಸರು ಅನಧಿಕೃತವಾಗಿ ಮಾರಲಾಗುತ್ತಿದ್ದ ಇ- ಸಿಗರೇಟ್ ಅನ್ನು ವಶಕ್ಕೆ ಪಡೆದುಕೊಂಡಿದ್ದು, ಅದರ ಮಾಲಕ ನರಿಮೊಗರು ಗ್ರಾಮದ ಮುಕ್ವೆಯ ಶೇಖ್ ಶಾಹಿದ್ (27) ಎಂಬಾತನ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದಾರಲ್ಲದೆ, ಸುಮಾರು 26 ಸಾವಿರ ರೂ. ಮೌಲ್ಯದ ಒಟ್ಟು 52 ಇ- ಸಿಗರೇಟ್‌ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕ ರವಿ ಬಿ.ಎಸ್. ಅವರ ನೇತೃತ್ವದಲ್ಲಿ ದಾಳಿ ನಡೆಸಿದ ಪೊಲೀಸರು ಅಂಗಡಿಯಲ್ಲಿ ಮಾರಾಟ ಮಾಡಲು ಇರಿಸಿಕೊಂಡಿದ್ದ ವಿವಿಧ ಫ್ಲೇವರ್‌ನ ಒಟ್ಟು 52 ನಿಷೇಧಿತ ಇ-ಸಿಗರೇಟ್‌ಗಳನ್ನು ವಶಪಡಿಸಿಕೊಂಡಿದ್ದಾರೆ.
ಪರವಾನಿಗೆ ನವೀಕರಣವಾಗಿಲ್ಲ ಈ ಅಂಗಡಿಯು ಕಾಂಪ್ಲೆಕ್ಸ್‌ನ ಹಿಂಬದಿಯಲ್ಲಿ ಜನ ನಿಬಿಡತೆಯಿಲ್ಲದ ಜಾಗದಲ್ಲಿ ಇದ್ದು, ಮೇಲ್ನೋಟಕ್ಕೆ ಮೊಬೈಲ್ ಮಾರಾಟ ಮಳಿಗೆಯಂತೆ ಕಾಣುತ್ತದೆ. ಆದರೆ ಈ ಅಂಗಡಿ ಮೊಬೈಲ್ ಮಾರಾಟದ ಪರವಾನಿಗೆಯನ್ನೂ ನವೀಕರಿಸಿರಲಿಲ್ಲ ಎಂಬ ಅಂಶ ತನಿಖೆ ವೇಳೆ ತಿಳಿದು ಬಂದಿದೆ. ಉಪ್ಪಿನಂಗಡಿಯಲ್ಲಿ ಕೆಲವೊಂದು ಅಂಗಡಿಗಳು ಪರವಾನಿಗೆಯನ್ನು ನವೀಕರಿಸದೇ ಅಕ್ರಮ ವ್ಯವಹಾರಗಳಲ್ಲಿ ತೊಡಗಿಸಿಕೊಂಡಿವೆ ಎಂಬ ಆರೋಪಗಳು ಸಾರ್ವಜನಿಕ ವಲಯದಿಂದ ಕೇಳಿ ಬರುತ್ತಿದ್ದು, ಗ್ರಾ.ಪಂ. ಈ ಬಗ್ಗೆ ಪರಿಶೀಲನೆ ನಡೆಸಿ, ಸೂಕ್ತ ಕ್ರಮ ಕೈಗೊಳ್ಳಬೇಕೆಂಬ ಆಗ್ರಹ ಕೇಳಿ ಬರುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.