![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Feb 27, 2023, 11:03 AM IST
ಡಾಲಿ ಧನಂಜಯ ನಾಯಕರಾಗಿ ಅಭಿನಯಿಸಿರುವ ಬಹು ನಿರೀಕ್ಷಿತ ಹೊಯ್ಸಳ ಚಿತ್ರದ ಟೈಟಲ್ ಟ್ರ್ಯಾಕ್ ಬಿಡುಗಡೆಯಾಗಿದೆ. ನಕಾಶ್ ಅಜೀಜ್ ಈ ಭರ್ಜರಿ ಮಾಸ್ ಸಾಂಗ್ ಅನ್ನು ಹಾಡಿದ್ದಾರೆ. ರ್ಯಾಪ್‌ಗೆ ಯೋಗಿ ಬಿ ಧ್ವನಿಯಾಗಿದ್ದಾರೆ. ಸಂತೋಷ್ ಆನಂದರಾಮ್ ಈ ಹಾಡನ್ನು ಬರೆದಿದ್ದಾರೆ.
ಇತ್ತೀಚೆಗೆ ನಡೆದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕೆಸಿಸಿ ಪಂದ್ಯದ ವೇಳೆ ಈ ಹಾಡು ಪ್ಲೇ ಆಗಿದೆ. ಕ್ರೀಡಾಂಗಣದಲ್ಲಿದ್ದ ಗಣ್ಯರು ಹಾಗೂ ಪ್ರೇಕ್ಷಕರು ಹಾಡಿಗೆ ಮೆಚ್ಚುಗೆ ಸೂಚಿಸಿದ್ದಾರೆ. ಸಾಮಾಜಿಕ ತಾಣದಲ್ಲೂ ಹಾಡಿಗೆ ಭಾರೀ ಪ್ರಶಂಸೆ ವ್ಯಕ್ತವಾಗುತ್ತಿದೆ. ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ.
ಈ ಚಿತ್ರ ಮಾರ್ಚ್ 30ರಂದು ತೆರೆಗೆ ಬರಲಿದೆ. ವಿಜಯ್ ನಾಗೇಂದ್ರ ನಿರ್ದೇಶನದ ಈ ಚಿತ್ರದಲ್ಲಿ ಧನಂಜಯ, ಜಯದೇವ ಹೊಯ್ಸಳ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಇದನ್ನೂ ಓದಿ:ಬಹುನಿರೀಕ್ಷಿತ ಮಂಗಳೂರು ವೀಕೆಂಡ್ ಸ್ಟ್ರೀಟ್ ಫೆಸ್ಟಿವಲ್ ಆಯೋಜನೆ ವಿಳಂಬ,ಚುನಾವಣೆಯೂ ಅಡ್ಡಿ
ಅಮೃತ ಅಯ್ಯಂಗಾರ್ ಈ ಚಿತ್ರದ ನಾಯಕಿ. ಅಚ್ಯುತ ಕುಮಾರ್, ಪ್ರತಾಪ್ ನಾರಾಯಣ್ ನವೀನ್ ಶಂಕರ್, ಅವಿನಾಶ್ ಕೆ.ಜಿ.ಎಫ್, ರಾಘು ಶಿವಮೊಗ್ಗ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಇನ್ನು, ಧನಂಜಯ್ “ಉತ್ತರಕಾಂಡ’ ಎಂಬ ಸಿನಿಮಾದಲ್ಲೂ ನಟಿಸುತ್ತಿದ್ದು, ಈ ಚಿತ್ರದಲ್ಲಿ ರಮ್ಯಾ ನಾಯಕಿಯಾಗಿ ನಟಿಸುತ್ತಿದ್ದಾರೆ. ಇತ್ತೀಚೆಗೆ ಈ ಚಿತ್ರದ ಪೂಜೆ ನಡೆದಿದೆ. ಕೆ.ಆರ್.ಜಿ ಸಂಸ್ಥೆ ನಿರ್ಮಿಸುತ್ತಿರುವ ಈ ಚಿತ್ರವನ್ನು ರೋಹಿತ್ ಪದಕಿ ರಚಿಸಿ, ನಿರ್ದೇಶಿಸುತ್ತಿದ್ದಾರೆ.
ಅಂದಹಾಗೆ, ಕಳೆದ ವರ್ಷ ಧನಂಜಯ್ ನಾಯಕರಾಗಿದ್ದ ಆರು ಸಿನಿಮಾಗಳು ತೆರೆಕಂಡಿದ್ದವು. ಈ ವರ್ಷ “ಹೊಯ್ಸಳ’ ಮೂಲಕ ತಮ್ಮ ಅಕೌಂಟ್ ಓಪನ್ ಮಾಡುತ್ತಿದ್ದಾರೆ ಧನಂಜಯ್.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.