ಬನಾನಾ ಹರಕೆ, ಡಬ್ಬಿಂಗ್‌ ಗಾನಾಬಜಾನಾ!

Team Udayavani, Feb 27, 2023, 11:11 AM IST

Thumb-5

ರಾಯಚೂರು: ಚುನಾವಣೆ ಎಂದರೆ ಎಷ್ಟು ಗಂಭೀರ ವಿಷಯವೋ ಅಷ್ಟೇ ಸ್ವಾರಸ್ಯಕರ-ವಿನೋದ ಭರಿತ ಸಂಗತಿಗೂ ಸಾಕ್ಷಿಯಾಗುತ್ತದೆ. ಇದಕ್ಕೊಂದು ಸೇರ್ಪಡೆ ಬಾಳೆಹಣ್ಣಿನ ಹರಕೆ ಟ್ರೆಂಡ್‌!

ಸಾಮಾನ್ಯವಾಗಿ ಏಪ್ರಿಲ್‌-ಮೇ ತಿಂಗಳು ಜಾತ್ರೆ ಸಮಯ ಎಂದೇ ಕರೆಯಲಾಗುತ್ತದೆ. ಇಂಥ ಜಾತ್ರೆಗಳಲ್ಲಿ ಅಭಿಮಾನಿಗಳು ತಮ್ಮ ನೆಚ್ಚಿನ ನಾಯಕನ ಗೆಲುವಿಗಾಗಿ ಬಾಳೆಹಣ್ಣಿನ ಮೇಲೆ ಹೆಸರು ಬರೆದು ರಥಕ್ಕೆ ಎಸೆ ಯುವ ಹೊಸ ಪದ್ಧತಿ ಶುರುವಾಗಿದೆ. ಇದು ಎಲ್ಲೋ ಒಂದೆರಡು ಕಡೆ ನಡೆಯುತ್ತಿರುವ ಸಂಗತಿ ಯಲ್ಲ. ಪ್ರತಿ ಊರಲ್ಲೂ ಈ ರೀತಿಯ ಹರಕೆ ಸಾಮಾನ್ಯವಾಗುತ್ತಿದೆ. ಅಷ್ಟು ಮಾತ್ರವಲ್ಲ ಅದನ್ನು ಫೋಟೋ ತೆಗೆದು, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತಾರೆ. ನಮ್ಮ ಮುಂದಿನ ಎಂಎಲ್‌ಎ ಇವರೇ’ ಎಂದು ಹೆಸರು ಬರೆಯುವುದು ಉಚ್ಛಾಯಗಳಿಗೆ, ರಥಗಳಿಗೆ ಎಸೆದು ಹರಕೆ ತೀರಿಸುವುದೇ ಎಲ್ಲ ಪಕ್ಷಗಳ ಕಾರ್ಯಕರ್ತರಿಗೆ ಕಾಯಕವಾಗಿ ಬಿಟ್ಟಿದೆ.

ಡಬ್ಬಿಂಗ್‌ ಗಾನಬಜಾನಾ: ಚುನಾವಣೆ ಸಮೀಪಿಸುತ್ತಿ ದ್ದಂತೆ ಎಲ್ಲೆಡೆ ರಾಜಕೀಯ ಚಟುವಟಿಕೆಗಳೂ ಬಿರುಸು ಪಡೆದಿವೆ. ಸದ್ಯಕ್ಕಂತೂ ಅಭ್ಯರ್ಥಿಗಳ ಪ್ರಚಾರದ್ದೇ ಹಾವಳಿ. ಅದರಲ್ಲೂ ಸಾಮಾಜಿಕ ಜಾಲತಾಣಗಳಲ್ಲಿ ದಿನಕ್ಕೊಂದು ಹೊಸ ಖಾತೆಗಳು ತೆರೆದು ಹತ್ತಾರು ಪೋಸ್ಟರ್‌ಗಳನ್ನು ಹಾಕಲಾಗುತ್ತಿದೆ. ಅದರಲ್ಲೂ ಡಬ್ಬಿಂಗ್‌ ಹಾಡುಗಳ ಹಾವಳಿ ಕೂಡ ಹೆಚ್ಚಾಗುತ್ತಿದೆ. ಕೆಲವೊಂದು ಸಿನಿಮಾ ಹಾಡುಗಳನ್ನೇ ತಮ್ಮ ನಾಯಕನ ಬಣ್ಣನೆಗೆ ಬಳಸಿಕೊಳ್ಳುತ್ತಿದ್ದು, ಇಂದ್ರ ಚಂದ್ರ ಎಂದೆಲ್ಲ ಹಾಡಿ ಹೊಗಳುವುದು, ಅವರಿಲ್ಲದೇ ಹೋದರೆ ಕ್ಷೇತ್ರದ ಜನ ಅನಾಥರಾಗುತ್ತಾರೆ ಎಂಬಂಥ ಸೆಂಟಿಮೆಂಟ್‌ ಡೈಲಾಗ್‌ಗಳನ್ನು ಅಳವಡಿಸಿ ಜನರ ಮನ ಪರಿವರ್ತನೆಗೆ ಯತ್ನಿಸಲಾಗುತ್ತಿದೆ.

ಇನ್ನು ವಾಟ್ಸ್‌ಆ್ಯಪ್‌, ಫೇಸ್‌ಬುಕ್‌, ಇನ್‌ಸ್ಟಾಗ್ರಾಂ ಸೇರಿದಂತೆ ವಿವಿಧ ಪೇಜ್‌ಗಳಲ್ಲಿ, ಸ್ಟೇಟಸ್‌ ಹಾಕಿ ಪ್ರಚಾರ ನಡೆಸಲಾಗುತ್ತಿದೆ. ಇನ್ನೂ ಕೆಲ ಅಭ್ಯರ್ಥಿಗಳು ಮತದಾರರಿಗೆ ಕರೆ ಮಾಡಿಸಿ ಬೆಂಬಲ ಯಾಚಿಸುತ್ತಿದ್ದಾರೆ. ಕೆಲ ಯುವಕ- ಯುವತಿಯರನ್ನು ಇದೇ ಕೆಲಸಕ್ಕೆ ನಿಯೋಜಿಸಿದ್ದು, ನಿತ್ಯ ಕರೆ ಮಾಡುವುದೇ ಅವರ ಕಾಯಕವಾಗಿದೆ.

– ಸಿದ್ಧಯ್ಯಸ್ವಾಮಿ ಕುಕನೂರು

ಟಾಪ್ ನ್ಯೂಸ್

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-raichur

Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

1-wewqewq

Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

1

Sullia: ರಬ್ಬರ್‌ ಸ್ಮೋಕ್‌ ಹೌಸ್‌ಗೆ ಬೆಂಕಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.