ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡಿದ ಮೋದಿ-ಬಿಎಸ್‌ವೈ ಫೋಟೋ
Team Udayavani, Feb 28, 2023, 7:45 AM IST
ಬೆಂಗಳೂರು: ಪ್ರಧಾನಿ ಮೋದಿ ಜತೆಗಿರುವ ಫೋಟೋ ಶೇರ್ ಮಾಡಿ ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಬಿಜೆಪಿ ರಾಷ್ಟ್ರೀಯ ಸಂಘಟನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಮಾಡಿರುವ ಜನ್ಮದಿನ ಶುಭಾಶಯ ಬರಹ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುವ ಜತೆಗೆ ಚರ್ಚೆಗೂ ಕಾರಣವಾಗಿದೆ.
ಈ ಭಾವಚಿತ್ರ ಪಿಕ್ಚರ್ ಆಫ್ ದಿ ಡೇ. ಆದರೆ ನಮ್ಮಂಥ ಅನೇಕರಿಗೆ ಇದು ಈ ವ್ಯಾಖ್ಯಾನಕ್ಕೆ ಮೀರಿದ ವಿಚಾರ. ಅನೇಕ ರಾಜಕೀಯ ಪಕ್ಷಗಳು ಕುಟುಂಬ ಕೇಂದ್ರೀಕೃತವಾಗಿರುವುದರಿಂದ ಇಂಥ ಫೋಟೋಗಳನ್ನು ನೋಡುವುದಕ್ಕೆ ಸಾಧ್ಯವಿಲ್ಲ. ಇಬ್ಬರೂ ನಾಯಕರು 70 ವರ್ಷ ಮೇಲ್ಪಟ್ಟವರು. ಬಲಾಡ್ಯ ಕೌಟುಂಬಿಕ ಹಿನ್ನೆಲೆ ಇಲ್ಲದೇ ಬೆಳೆದವರು. ಒಬ್ಬರು ರೈಲ್ವೇ ನಿಲ್ದಾಣದಲ್ಲಿ ಚಹಾ ಮಾರಿದ್ದರೆ, ಇನ್ನೊಬ್ಬರು ಅಕ್ಕಿ ಗಿರಣಿಯಲ್ಲಿ ಕೆಲಸ ಮಾಡಿದವರು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಜತೆಗಿನ ಸಂಪರ್ಕದೊಂದಿಗೆ ಇಬ್ಬರೂ ರಾಜಕೀಯ ಜೀವನ ಆರಂಭಿಸಿದರು.
The warmth among two leaders is what makes BJP, a Party with Difference.
The warmth here is actually a bonding, Ideological, organisational & for a greater cause of Public good.
Today is the birthday of Sri @BSYBJP . Wishing you many more years of successful Public life Sir. pic.twitter.com/Vemr06M2OO— B L Santhosh (@blsanthosh) February 27, 2023
ಕಠಿನ ಪರಿಶ್ರಮ, ಆಯಾಸದ ಪರಿವಿಯೇ ಇಲ್ಲದ ಪ್ರಯಾಣ, ಧ್ಯೇಯ, ಗುರಿಯೆಡೆಗಿನ ಸ್ಪಷ್ಟತೆ, ಸಂಘಟನೆಯಲ್ಲಿ ಬೇರುಮಟ್ಟದ ಭಾಗಿದಾರಿಕೆಯಿಂದ ಒಬ್ಬರು ಈಗ ಜಾಗತಿಕ ನಾಯಕರಾಗಿ ಹೊರಹೊಮ್ಮಿದ್ದರೆ, ಇನ್ನೊಬ್ಬರು ಯಶಸ್ವಿ ಮುಖ್ಯಮಂತ್ರಿಯಾಗಿದ್ದರು. ಇಂದು ಈ ಇಬ್ಬರು ನಾಯಕರು ಕೈ ಕೈ ಹಿಡಿದು ನಡೆಯುತ್ತಿರುವುದು ಪಕ್ಷ, ಸಿದ್ಧಾಂತ ಹಾಗೂ ಸಂಘಟನಾತ್ಮಕವಾದ ಬದ್ಧತೆಯನ್ನು ತೋರುತ್ತದೆ ಎಂದು ಬಿ.ಎಲ್. ಸಂತೋಷ್ ತಮ್ಮ ಬರಹದಲ್ಲಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್‌ನಲ್ಲಿ ಲಾಬಿ ಆರಂಭ
Congress; ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಯತೀಂದ್ರ ಸಿದ್ದರಾಮಯ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Bengaluru: ಮನೆಯ ಮುಂದೆ ಕುಳಿತು ಮೊಬೈಲ್ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!
Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು
Fraud: ಸೈಟ್ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ
Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು
Arrested: ಉಸಿರುಗಟ್ಟಿಸಿ ಪತ್ನಿಯ ಕೊಂದು ಮಗುವಿನ ಜೊತೆಗೆ ಪತಿ ಪರಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.