ಮಾ.1ರಂದು ಬಿಜೆಪಿ ವಿಜಯ ಸಂಕಲ್ಪ ರಥಯಾತ್ರೆ: ಶಾಸಕ
Team Udayavani, Feb 28, 2023, 1:20 PM IST
ಕೊಳ್ಳೇಗಾಲ: ನಗರದ ಎಂಜಿಎಸ್‌ವಿ ಕಾಲೇಜು ಮೈದಾನದಲ್ಲಿ ಮಾ.1ರಂದು ರಾಷ್ಟ್ರೀಯ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ನೇತೃತ್ವದ ವಿಜಯ ಸಂಕಲ್ಪ ರಥಯಾತ್ರೆ ಸಮಾವೇಶ ಜರುಗಲಿದೆ ಎಂದು ಶಾಸಕ ಎನ್.ಮಹೇಶ್ ಸೋಮವಾರ ಹೇಳಿದರು.
ಆಗಮನ: ನಗರದ ಬಿಜೆಪಿ ಕಾರ್ಯಾಲಯದ ಆವರಣದಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮಾ.1ರಂದು 3 ಗಂಟೆಗೆ ಎಂಜಿಎಸ್‌ವಿ ಕಾಲೇಜು ಮೈದಾನದಲ್ಲಿ ವಿಜಯ ಸಂಕಲ್ಪ ರಥಯಾತ್ರೆ ಸಮಾವೇಶ ಜರುಗಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಸಚಿವರಾದ ಶ್ರೀರಾಮುಲು, ಗೋವಿಂದ ಕಾರಜೋಳ, ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ, ಲೋಕೋಪ ಯೋಗಿ ಸಚಿವ ಸಿಸಿ ಪಾಟೀಲ್, ರಾಜ್ಯಾಧ್ಯಕ್ಷ ನಳೀನ್‌ಕುಮಾರ್ ಕಟೀಲ್, ಮುಖಂಡ ರವಿಕುಮಾರ್ ಆಗಮಿಸಲಿದ್ದಾರೆಂದರು.
ಕಾರ್ಯಕ್ರಮ ಯಶಸ್ವಿಗೊಳಿಸಿ: ವಿಜಯ ಸಂಕಲ್ಪ ರಥಯಾತ್ರೆಯನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಚಾಲನೆ ನೀಡಲಿದ್ದಾರೆ. ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಸಮಾವೇಶದ ಬಳಿಕ ನಗರದ ಎಂಜಿಎಸ್‌ವಿ ಮೈದಾನದಲ್ಲಿ ಸಮಾವೇಶ ನಡೆಯಲಿದ್ದು ಸಭೆಗೆ 25 ಸಾವಿರ ಜನ ಸೇರಲಿದ್ದಾರೆ. ಪಕ್ಷದ ಕಾರ್ಯಕರ್ತರು, ಮುಖಂ ಡರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.
ಪ್ರವಾಸ: ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆ 224 ಕ್ಷೇತ್ರದಲ್ಲಿ ರಥಯಾತ್ರೆ ಸಂಚರಿಸಲಿದೆ. ಪ್ರತಿ ಕ್ಷೇತ್ರದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಾಧನೆ ಬಗ್ಗೆ ಮುಖ್ಯಮಂತ್ರಿಗಳು ಮಾತನಾಡಲಿದ್ದಾರೆ. 4 ತಂಡಗಳಾಗಿ ಸಂಕಲ್ಪ ಯಾತ್ರೆ ಸಂಚರಿಸಿ ರಾಜ್ಯವ್ಯಾಪಿ ಪ್ರವಾಸ ಮಾಡಲಿದೆ ಎಂದರು. ಮಾಜಿ ಶಾಸಕ ಜಿ.ಎನ್.ನಂಜುಂಡಸ್ವಾಮಿ ಅಸಮಾಧಾನದ ಬಗ್ಗೆ ಪ್ರಶ್ನಿಸಿದಾಗ ಉತ್ತರಿಸಿದ ಶಾಸಕರು, ಈ ಬಗ್ಗೆ ನಾನು ಏನನ್ನೂ ಹೇಳುವುದಿಲ್ಲ ಎಂದು ಮೌನ ಮುರಿದರು.
ಯಳಂದೂರಿನ ವಿವಿಧ ಕಟ್ಟಡಗಳ ಗೋಡೆಗಳಲ್ಲಿ ಶಾಸಕರ ಭಾವಚಿತ್ರವುಳ್ಳ ಪೋಸ್ಟರ್‌ಗಳಿಗೆ ಸಗಣಿ ಬಳಿಯುತ್ತಿದ್ದಾರೆ. ಇದರಿಂದ ಚುನಾವಣೆಯಲ್ಲಿ ಹಿನ್ನಡೆಯಾಗುವುದಿಲ್ಲವೇ ಎಂಬ ಪ್ರಶ್ನೆಗೆ, ನನ್ನ ಭಾವಚಿತ್ರಕ್ಕೆ ಸಗಣಿ ಬಳಿಯುವುದರಿಂದ ನನಗೆ ಏನು ಆಗುವುದಿಲ್ಲ. ಆದರೆ ಬಳಿಯುವವರ ಕೈ ಮಲಿನವಾಗುತ್ತದೆ ಎಂದು ಹಾಸ್ಯ ಚಟಾಕಿ ಹಾರಿಸಿದರು.
ನಗರ ಮಂಡಲದ ಅಧ್ಯಕ್ಷ ರಮೇಶ್, ಜಿಲ್ಲಾ ವಕ್ತಾರ ಬಸವರಾಜು, ನಗರಸಭಾ ಸದಸ್ಯರಾದ ಕವಿತಾ, ಮುಖಂಡರಾದ ರಾಚಯ್ಯ, ರವಿಕುಮಾರ್, ಜಗದೀಶ್, ಬಸವರಾಜು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Maharashtra Election: ಬೂತ್ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ
Koppala ಗವಿಮಠ ಜಾತ್ರೆಗೆ ನಟ ಅಮಿತಾಬ್ ಬಚ್ಚನ್?
Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.