ಪಟಾಕಿ ತುಂಬಿದ್ದ ಇ-ರಿಕ್ಷಾ ಸ್ಪೋಟ : ಎದೆ ಝಲ್ಲೆನ್ನಿಸುವ ವಿಡಿಯೋ ಸಿಸಿ ಕ್ಯಾಮರಾದಲ್ಲಿ ಸೆರೆ
Team Udayavani, Feb 28, 2023, 3:05 PM IST
ಉತ್ತರ ಪ್ರದೇಶ: ಜಗನ್ನಾಥ ಶೋಭಾ ಯಾತ್ರೆಗೆಂದು ಪಟಾಕಿಗಳನ್ನು ತುಂಬಿದ್ದ ಎಲೆಕ್ಟ್ರಿಕ್ ರಿಕ್ಷಾದ ಮೇಲೆಯೇ ಪಟಾಕಿ ಕಿಡಿ ಬಿದ್ದು ಸ್ಪೋಟಗೊಂಡ ಪರಿಣಾಮ ಓರ್ವ ಮೃತಪಟ್ಟ ಘಟನೆ ಸೋಮವಾರ ಗ್ರೇಟರ್ ನೋಯ್ಡಾದಲ್ಲಿ ನಡೆದಿದೆ. ಪಟಾಕಿ ತುಂಬಿದ್ದ ರಿಕ್ಷಾ ಸ್ಪೋಟಗೊಳ್ಳುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿದ್ದು ಬೆಚ್ಚಿ ಬೀಳಿಸುವಂತಿದೆ.
ಯಾತ್ರೆಯ ಸಂದರ್ಭದಲ್ಲಿ ಸಿಡಿಸಲೆಂದು ತರಲಾಗಿದ್ದ ಪಟಾಕಿಗಳನ್ನು ಇ-ರಿಕ್ಷಾದಲ್ಲಿ ಇಡಲಾಗಿತ್ತು. ಈ ವೇಳೆ ಅದರ ಪಕ್ಕದಲ್ಲೇ ಸಿಡಿಸಲಾಗಿದ್ದ ಪಟಾಕಿಯ ಕಿಡಿ ಇತರೆ ಪಟಾಕಿಗಳನ್ನು ತುಂಬಿದ್ದ ಪೆಟ್ಟಿಗೆಗಳಿದ್ದ ರಿಕ್ಷಾದ ಮೇಲೆ ಬಿದ್ದಿದೆ. ಆ ವೇಳೆಗೆ ಭಾರೀ ಸ್ಪೋಟ ಸಂಭವಿಸಿದ್ದು,ಘಟನೆಯಲ್ಲಿ ಓರ್ವ ಮೃತಪಟ್ಟಿದ್ದಾನೆ ಎಂದು ಪೋಲಿಸರು ಮಾಹಿತಿ ನೀಡಿದ್ದಾರೆ. ಘಟನೆಯ ದೃಶ್ಯಗಳು ಅಲ್ಲೇ ಇದ್ದ ಸಿಸಿ ಕ್ಯಾಮರಾಗಳಲ್ಲಿ ದಾಖಲಾಗಿವೆ.
ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನು ಸ್ಥಳಿಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೋಲಿಸರು ಹೇಳಿದ್ದಾರೆ.
ವೈರಲ್ ಆಗಿರುವ ವಿಡಿಯೋದಲ್ಲಿ ದಾದ್ರಿ ಪ್ರದೇಶದಲ್ಲಿರುವ ಜನನಿಬಿಡ ಮಾರುಕಟ್ಟೆಯಲ್ಲಿ ಕೆಲವಾರು ಮಂದಿ ಅಂಗಡಿಗಳ ಮುಂಭಾಗ ನಿಂತಿರುವುದು ಕಂಡುಬಂದಿದೆ. ಕೆಲವೇ ಕ್ಷಣಗಳಲ್ಲಿ ಸಿಡಿಮದ್ದುಗಳನ್ನು ತುಂಬಿದ್ದ ಇ-ರಿಕ್ಷಾ ಸ್ಪೋಟಗೊಳ್ಳುವ ದೃಶ್ಯ ಎಂಥವನನ್ನೂ ಝಲ್ಲೆನ್ನಿಸುವುದು ಖಂಡಿತ.
ಸ್ಪೋಟ ಸಂಭವಿಸಿದ ತಕ್ಷಣವೇ ಅಲ್ಲಿ ಸೇರಿದ್ದ ಜನ ಅಕ್ಕಪಕ್ಕದ ಅಂಗಡಿಗಳ ಒಳಗೆ ನುಗ್ಗಿದ್ದರಿಂದ ಹೆಚ್ಚಿನ ಪ್ರಾಣಹಾನಿ ಸಂಭವಿಸಿಲ್ಲ ಎಂದು ಪೋಲಿಸರು ಹೇಳಿದ್ದಾರೆ. ಘಟನೆಯಲ್ಲಿ ಪಟಾಕಿ ಸಿಡಿಸುತ್ತಿದ್ದ ಸಲ್ಮಾನ್ ಮತ್ತು ಇ-ರಿಕ್ಷಾದ ಚಾಲಕ ಪಪ್ಪು ಎಂಬವರು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತಾದರೂ, ಮಂಗಳವಾರ ಸಲ್ಮಾನ್ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ ಎಂದು ಗ್ರೇಟರ್ ನೋಯ್ಡಾ ಎಡಿಜಿಪಿ ಟ್ವೀಟ್ ಮಾಡಿದ್ದಾರೆ.
थाना दादरी क्षेत्रांतर्गत कस्बा दादरी में जगन्नाथ शोभा यात्रा के दौरान आतिशबाजी के समान में आग लग गई। इस घटना में 02 व्यक्ति घायल हो गए जिनको इलाज हेतु हॉस्पिटल भेजा गया है, आवश्यक कार्यवाही की जा रही है।
उक्त प्रकरण में एडीसीपी ग्रेटर नोएडा द्वारा दी गयी बाइट। pic.twitter.com/UFYa1NfukL— POLICE COMMISSIONERATE GAUTAM BUDDH NAGAR (@noidapolice) February 27, 2023
ಇದನ್ನೂ ಓದಿ: ಶಾಲೆಗೆ ಹೋಗುತ್ತಿದ್ದ ವಿದ್ಯಾರ್ಥಿಗಳ ಮೇಲೆ ಹರಿದ ಕಾರು: ಮೂವರು ಸ್ಥಳದಲ್ಲೇ ಮೃತ್ಯು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!
Parliament Session: ವಿಪಕ್ಷಗಳ ಕೋಲಾಹಲ ನಡುವೆ ಏಕ ಚುನಾವಣೆ ಮಸೂದೆ ಜೆಪಿಸಿಗೆ
ಜೋಡೋ ಯಾತ್ರೆಯಲ್ಲಿ”ನಗರ ನಕ್ಸಲರು’: ಮಹಾರಾಷ್ಟ್ರ ಸಿಎಂ ಫಡ್ನವೀಸ್
PM Modi: ಇಂದಿನಿಂದ ಮೋದಿ ಕುವೈತ್ ಭೇಟಿ…: 43 ವರ್ಷಗಳ ಬಳಿಕ ಭಾರತದ ಪ್ರಧಾನಿ ಭೇಟಿ
Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Rey Mysterio Sr: ಖ್ಯಾತ ರೆಸ್ಲರ್ ರೇ ಮಿಸ್ಟೀರಿಯೊ ಸೀನಿಯರ್ ಇನ್ನಿಲ್ಲ
Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!
Parliament Session: ವಿಪಕ್ಷಗಳ ಕೋಲಾಹಲ ನಡುವೆ ಏಕ ಚುನಾವಣೆ ಮಸೂದೆ ಜೆಪಿಸಿಗೆ
ಜೋಡೋ ಯಾತ್ರೆಯಲ್ಲಿ”ನಗರ ನಕ್ಸಲರು’: ಮಹಾರಾಷ್ಟ್ರ ಸಿಎಂ ಫಡ್ನವೀಸ್
WPL 2025: ವನಿತಾ ಪ್ರೀಮಿಯರ್ ಲೀಗ್ ದಿನಾಂಕ ಅಂತಿಮ; ಬೆಂಗಳೂರಿನಲ್ಲಿಲ್ಲ ಪಂದ್ಯಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.