ಕೃಷಿ ಸಾಲ ಸಂಪೂರ್ಣ ಮನ್ನಾ ಮಾಡಿ

Team Udayavani, Mar 1, 2023, 6:19 AM IST

ಕೃಷಿ ಸಾಲ ಸಂಪೂರ್ಣ ಮನ್ನಾ ಮಾಡಿ

ಕುರುಬೂರು ಶಾಂತಕುಮಾರ್‌
ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ
ಪ್ರತೀ ಸಾರ್ವತ್ರಿಕ ಚುನಾವಣೆ ಬಂದಾಗ ಪಕ್ಷಗಳು ವಿವಿಧ ಭರವಸೆಗಳನ್ನು ಹೊತ್ತ ಪ್ರಣಾಳಿಕೆಯನ್ನು ಬಿಡುಗಡೆ ಮಾಡುತ್ತವೆ. ಆದರೆ ಅಧಿಕಾರಕ್ಕೆ ಬಂದ ಮೇಲೆ ಅವುಗಳ ಅನುಷ್ಠಾನವನ್ನು ಮರೆತು ಬಿಡುತ್ತವೆ.

ಆದ್ದರಿಂದ ಚುನಾವಣ ಪೂರ್ವ ದಲ್ಲಿ ಹೊರಡಿಸುವ ಪ್ರಣಾಳಿಕೆಯನ್ನು ಅಧಿಕಾರಕ್ಕೆ ಬಂದ ಬಳಿಕ ಕಡ್ಡಾಯ ವಾಗಿ ಜಾರಿಗೊಳಿಸುವ ಕಾನೂನನ್ನು ಮೊದಲು ಜಾರಿಗೆ ತರಬೇಕು ಎಂಬುದು ನನ್ನ ಆಗ್ರಹ. ಪಕ್ಷಗಳ ಪ್ರಣಾಳಿಕೆಯನ್ನು ಕಡ್ಡಾಯವಾಗಿ ಜಾರಿಗೊಳಿಸುವ ಪ್ರಸ್ತಾವ ಪ್ರಣಾಳಿಕೆಯಲ್ಲಿ ಇರಬೇಕು.

ಉಳಿದಂತೆ ರಾಜ್ಯದ ರೈತರು ಹತ್ತು ಹಲವು ಸಮಸ್ಯೆಗಳಿಂದ ಕಂಗೆಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ರೈತರಿಗೆ ಭದ್ರತೆ ನೀಡುವ, ಆದಾಯ ಹೆಚ್ಚಿಸುವ ಯೋಜನೆಗಳನ್ನು ಪ್ರಣಾಳಿಕೆಯಲ್ಲಿ ಪಕ್ಷಗಳು ಪ್ರಕಟಿಸಬೇಕೆಂಬ ಆಗ್ರಹವಿದೆ. ಈ ನಿಟ್ಟಿನಲ್ಲಿ ರೈತರಿಗೆ ಕನಿಷ್ಠ ಆದಾಯ ಖಾತರಿ ಭದ್ರತೆ ಒದಗಿಸುವುದು ಅತೀ ಪ್ರಮುಖ ಬೇಡಿಕೆಯಾಗಿದೆ.

ಹಗಲು ವೇಳೆಯಲ್ಲಿ ಕೃಷಿ ಪಂಪ್‌ಸೆಟ್‌ಗಳಿಗೆ 10 ಗಂಟೆಗಳ ನಿರಂತರ ವಿದ್ಯುತ್‌ ಪೂರೈಸುವ ಭರವಸೆಯನ್ನು ರೈತರಿಗೆ ನೀಡಬೇಕು.

ರೈತರ ಸಂಪೂರ್ಣ ಕೃಷಿ ಸಾಲ ಮನ್ನಾ ಆಗಬೇಕು. ಕೃಷಿ ಸಾಲ ನೀತಿ ಬದಲಾಗಬೇಕು. ಸಹಕಾರಿ ಸಂಘಗಳು, ರಾಷ್ಟ್ರೀಕೃತ ಬ್ಯಾಂಕ್‌ಗಳೆಂಬ ತಾರತಮ್ಯವಿಲ್ಲದೆ ಮಿತಿಯಿ ಲ್ಲದೆ ಎಲ್ಲ ಸಾಲ ಮನ್ನಾ ಮಾಡುವ ಖಾತರಿ ನೀಡಬೇಕು.

ಎಲ್ಲ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಶಾಸನ ಜಾರಿ ಮಾಡುವ ಭರವಸೆ ನೀಡಬೇಕು. ಡಾ| ಸ್ವಾಮಿನಾಥನ್‌ ವರದಿಯಂತೆ ಕನಿಷ್ಠ ಬೆಂಬಲ ಬೆಲೆ ನಿಗದಿಯಾಗಬೇಕು

ಫ‌ಸಲ್‌ ಭೀಮಾ ಬೆಳೆ ವಿಮೆ ಯೋಜನೆ ತಿದ್ದುಪಡಿ ತಂದು ಎಲ್ಲ ಬೆಳೆಗಳಿಗೂ ಅನ್ವಯ ಮಾಡಬೇಕು.

ರೈತರ ಕೃಷಿ ಭೂಮಿಯನ್ನು ಅಭಿವೃದ್ಧಿ ಹೆಸರಿನಲ್ಲಿ ಸ್ವಾಧೀನ ಪಡಿಸಿಕೊಳ್ಳುವುದನ್ನು ನಿಲ್ಲಿಸಬೇಕು. ಭೂ ಸ್ವಾಧೀನ ಪಡಿಸಿಕೊ ಳ್ಳುವುದು ಅನಿವಾರ್ಯವಾದ ಸಂದರ್ಭಗಳಲ್ಲಿ ರೈತರ ಅನುಮತಿ ಪಡೆಯಬೇಕು.

ಕೃಷಿ ಭೂಮಿ ಸಂಪತ್ತು, ನೈಸರ್ಗಿಕ ಸಂಪತ್ತು, ನೀರಿನ ಸದ್ಬಳಕೆ ಕುರಿತು ಗಂಭೀರ ಚಿಂತನೆ ನಡೆಸುವ ಭರವಸೆ ಬೇಕು. ಗ್ರಾಮೀಣ ಯುವಕರ ವಲಸೆ ತಪ್ಪಿಸಿ ಕೃಷಿಯಲ್ಲಿ ತೊಡಗಿಸಿಕೊಳ್ಳಲು, ಕೃಷಿ ಪೂರಕ ಯೋಜನೆಗಳನ್ನು ಕೈಗೆತ್ತಿಕೊಳ್ಳುವ ಭರವಸೆ ಬೇಕು.

ಕೃಷಿ ಉತ್ಪನ್ನ, ಹಾಗೂ ಕೃಷಿ ಉಪಕರಣಗಳ ಮೇಲೆ ವಿಧಿಸಿರುವ ಜಿಎಸ್‌ಟಿ ರದ್ದುಗೊಳಿಸಬೇಕು. ಕೃಷಿ ಕ್ಷೇತ್ರದಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆಗೆ ನಿಷೇಧವೇರಬೇಕು. ವಿದೇಶಿ ಕಂಪೆನಿಗಳ ಚಿಲ್ಲರೆ ಮಾರಾಟ ವ್ಯವಸ್ಥೆಗೆ ನಿಷೇಧವಿರಬೇಕು.

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.