ಮಾ.2: ಹೊರೆಕಾಣಿಕೆ ಮೆರವಣಿಗೆ, ಮಾ. 5: ಪೂರ್ಣಾಹುತಿ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅತಿರುದ್ರ ಮಹಾಯಾಗ

Team Udayavani, Mar 1, 2023, 1:10 AM IST

ಮಾ.2: ಹೊರೆಕಾಣಿಕೆ ಮೆರವಣಿಗೆ, ಮಾ. 5: ಪೂರ್ಣಾಹುತಿ

ಮಣಿಪಾಲ: ಶಿವಪಾಡಿ ದೇಗುಲದಲ್ಲಿ ಶ್ರೀ ಉಮಾಮಹೇಶ್ವರ ದೇಗುಲದ ಅಭಿವೃದ್ಧಿ ಟ್ರಸ್ಟ್‌ ಮತ್ತು ಅತಿರುದ್ರ ಮಹಾಯಾಗ ಸಮಿತಿಯ ಆಶ್ರಯದಲ್ಲಿ ಶೃಂಗೇರಿ ಶಾರದಾ ಪೀಠಾಧೀಶರಾದ ಶ್ರೀ ಭಾರತೀತೀರ್ಥ ಮಹಾಸ್ವಾಮಿಗಳ ಆಶೀರ್ವಾದ ಹಾಗೂ ನೇತೃತ್ವದೊಂದಿಗೆ ಉಡುಪಿಯಲ್ಲಿ ಪ್ರಥಮ ಬಾರಿಗೆ ಫೆ. 22ರಿಂದ ನಡೆಯುತ್ತಿರುವ ಅತಿರುದ್ರ ಮಹಾಯಾಗವು ಮಾ. 5ರ ತನಕ ವಿವಿಧ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯುತ್ತಿದೆ.

ಮಾ. 2ರಂದು ಶತಚಂಡಿಕಾ ಯಾಗ ನಡೆಯ ಲಿದೆ. ಮಾ. 2, 3, 4ರಂದು ವಾರಾಣಸಿಯ ಗಂಗಾರತಿಯ ಮಾದರಿಯಲ್ಲಿ ಅತಿರುದ್ರ ಯಾಗ ಮಂಟಪದಲ್ಲಿ ವಾರಾಣಸಿಯಿಂದ ಆಗಮಿಸಿದ 8 ಮಂದಿಯ ತಂಡದಿಂದ ವಿಶೇಷ ಶಿವಾರತಿ ಪ್ರತಿದಿನ ಸಂಜೆ 6.30ಕ್ಕೆ ನಡೆಯಲಿದೆ.

ಮಾ. 2ರಂದು ಅಪರಾಹ್ನ 3ಕ್ಕೆ ಮಣಿಪಾಲ ಸಿಂಡಿಕೇಟ್‌ ಸರ್ಕಲ್‌ನಿಂದ ಬೃಹತ್‌ ಹೊರೆಕಾಣಿಕೆ ಮೆರವಣಿಗೆಯು ಹೊರಡಲಿದ್ದು ಮಣಿಪಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗಿ ಶಿವಪಾಡಿ ದೇವಸ್ಥನದ ಮಾರ್ಗವಾಗಿ ದೇವಸ್ಥಾನವನ್ನು ತಲುಪುವುದು. ಈ ಮೆರವಣಿಗೆಯಲ್ಲಿ ಮಹಿಳೆಯರಿಂದ ಕಲಶ, ಚೆಂಡೆ ವಾದನ, ಭಜನೆ ತಂಡಗಳು, ವಿವಿಧ ವೇಷಭೂಷಣ, ಸ್ತಬ್ಧ ಚಿತ್ರಗಳು, ಕೀಲು ಕುದುರೆ, ಬ್ಯಾಂಡ್‌ ವಾದ್ಯ ಸಹಿತ ಇನ್ನಿತರ ತಂಡಗಳು ಭಾಗವಹಿಸಲಿವೆ.

ಮಾ. 4ರ ಸಂಜೆ ದೇಗುಲಕ್ಕೆ ಶೃಂಗೇರಿ ಶಾರದಾ ಪೀಠಾಧೀಶ್ವರ ಶ್ರೀ ವಿಧುಶೇಖರಭಾರತೀ ಸ್ವಾಮೀಜಿ ಅವರನ್ನು ವಿಶೇಷ ಮೆರವಣಿಗೆಯಲ್ಲಿ ಕರೆತರಲಾಗುವುದು. ಸಂಜೆ 5.30ಕ್ಕೆ ಸ್ವಾಮೀಜಿಯವರು ಅನುಗ್ರಹ ಭಾಷಣ ಮಾಡಲಿದ್ದಾರೆ. ಅನಂತರ ಸ್ವಾಮೀಜಿಯವರಿಂದ ಶ್ರೀ ಚಂದ್ರಮೌಳೀಶ್ವರ ಸ್ವಾಮಿಗೆ ಪೂಜೆ ನೆರವೇರಲಿದೆ. ಮಾ. 5ರಂದು ಯಾಗ ಮಂಟಪದಲ್ಲಿ ಬೆಳಗ್ಗೆ 6.30ರಿಂದ ಏಕಾದಶ ಕುಂಡಗಳಲ್ಲಿ ಅತಿರುದ್ರ ಮಹಾಯಾಗ, 11.30ಕ್ಕೆ ಪೂರ್ಣಾಹುತಿ, ಮಧ್ಯಾಹ್ನ ಸ್ವಾಮೀಜಿಯವರಿಂದ ದೇವರಿಗೆ ಕಲಶಾಭಿಷೇಕ, ಪಲ್ಲಪೂಜೆ, ಮಹಾ ಅನ್ನಸಂತರ್ಪಣೆ ನೆರವೇರಲಿದೆ.

ಸೀತಾ ರಸೋಯಿ ಪಾಕಶಾಲೆ

ಇಲ್ಲಿ ಪರಿಣಿತ ಬಾಣಸಿಗರಿಂದ ಅಡುಗೆಯನ್ನು ಸಿದ್ಧಪಡಿಸಲಾಗುತ್ತಿದೆ. ಬೆಳಗ್ಗೆ ಉಪಾಹಾರ, ಮಧ್ಯಾಹ್ನ ಅನ್ನಪ್ರಸಾದ, ಸಂಜೆ ಲಘು ಉಪಾಹಾರ ಹಾಗೂ ರಾತ್ರಿ ಅನ್ನಪ್ರಸಾದವನ್ನು ಬಡಿಸಲಾಗುತ್ತಿದೆ.

ಅನ್ನಪ್ರಸಾದ

ಪ್ರತಿನಿತ್ಯ ದೇಗುಲಕ್ಕೆ ದೂರದೂರುಗಳಿಂದ ಭಕ್ತರ ಸಂಖ್ಯೆ ವೃದ್ಧಿಸುತ್ತಿದ್ದು, ದಿನವೊಂದಕ್ಕೆ ಸುಮಾರು 8ರಿಂದ 10 ಸಾವಿರ ಮಂದಿ ಭಕ್ತರು ಅನ್ನಪ್ರಸಾದ ಸ್ವೀಕರಿಸಿದರೆ, 2ರಿಂದ 3 ಸಾವಿರ ಮಂದಿ ಭಕ್ತರು ಉಪಾಹಾರ ಸೇವಿಸುತ್ತಿದ್ದಾರೆ. ಪೂರ್ಣಾಹುತಿಯ ಹಿಂದಿನ ದಿನ (ಮಾ. 4) ಮತ್ತು ಪೂರ್ಣಾಹುತಿಯ ದಿನ (ಮಾ. 5) ಸುಮಾರು 50 ಸಾವಿರ ಮಂದಿ ಅನ್ನಪ್ರಸಾದ ಸ್ವೀಕರಿಸುವ ನಿರೀಕ್ಷೆಯಿದೆ.

ನಗರಾಲಂಕಾರ

ಮಣಿಪಾಲ ಸಿಂಡಿಕೇಟ್‌ ಸರ್ಕಲ್‌ನಿಂದ ಕೆಳಪರ್ಕಳದ ವಾಟರ್‌ ಟ್ಯಾಂಕ್‌ನ ವರೆಗೆ ಮತ್ತು ಈಶ್ವರನಗರದಿಂದ ದೇಗುಲದ ವರೆಗೆ ಸುಮಾರು 3 ಕಿ.ಮೀ. ದೂರ ವರೆಗಿನ ರಸ್ತೆಯನ್ನು ಆಕರ್ಷಕವಾಗಿ ವಿದ್ಯುದ್ದೀಪಗಳಿಂದ ಅಲಂಕರಿಸಲಾಗಿದೆ. ರಾತ್ರಿ ವೇಳೆ ನೋಡುಗರಿಗೆ ಕಣ್ಣಿಗೆ ಹಬ್ಬವೋ ಎಂಬಂತೆ ಭಾಸವಾಗುತ್ತಿದೆ. ರಸ್ತೆಯ ಉದ್ದಗಲಕ್ಕೂ ಕೇಸರಿ ಬಣ್ಣದ ಪತಾಕೆಗಳು, ಬ್ಯಾನರ್‌ಗಳು, ಗಮನ ಸೆಳೆಯುವ ಸ್ವಾಗತ ಕಮಾನುಗಳಿಂದ ಶೃಂಗರಿಸಲಾಗಿದೆ. ಭಕ್ತರಿಗೆ ಕಾರ್ಯಕ್ರಮ ವೀಕ್ಷಣೆಗೆ ಅನುಕೂಲವಾಗುವಂತೆ ಈಶ್ವರನಗರದಲ್ಲಿ 32 ಅಡಿಯ ಬೃಹತ್‌ ಎಲ್‌ಇಡಿ ವಾಲ್‌ ಅಳವಡಿಸಲಾಗಿದೆ.

ಪಾರ್ಕಿಂಗ್‌ ವ್ಯವಸ್ಥೆ

ಸುಮಾರು 2 ಸಾವಿರ ವಾಹನಗಳ ಪಾರ್ಕಿಂಗ್‌ಗೆ ವಿವಿಧ ಕಡೆಗಳಲ್ಲಿ ವ್ಯವಸ್ಥೆ ಮಾಡಲಾಗಿದೆ. ಬೈಕ್‌ ಮತ್ತು ಕಾರು ನಿಲುಗಡೆಗೆ ಪ್ರತ್ಯೇಕ ಸ್ಥಳಾವಕಾಶ ಇದೆ. ಭಕ್ತರಿಗೆ ತೊಂದರೆಯಾಗದಂತೆ ಅಲ್ಲಲ್ಲಿ ಸ್ವಯಂ ಸೇವಕರನ್ನು ನಿಯೋಜಿಸಲಾಗಿದೆ ಎಂದು ಉಮಾ ಮಹೇಶ್ವರ ದೇವಸ್ಥಾನ ಅಭಿವೃದ್ಧಿ ಟ್ರಸ್ಟ್‌ನ ಅಧ್ಯಕ್ಷ ಮಹೇಶ್‌ ಠಾಕೂರ್‌ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

road-mishap

Udupi: ಪಿಕಪ್‌ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಗಾಯ

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

4

Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್‌ ಬಾಟಲಿ ಸದ್ದು  

Untitled-1

Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.