ಬಿಬಿಸಿ ಭಾರತದ ಕಾನೂನುಗಳನ್ನು ಸಂಪೂರ್ಣವಾಗಿ ಗೌರವಿಸಬೇಕು: ಎಸ್. ಜೈಶಂಕರ್ ಸ್ಪಷ್ಟನುಡಿ
ಬ್ರಿಟನ್ ವಿದೇಶಾಂಗ ಕಾರ್ಯದರ್ಶಿಯೊಂದಿಗೆ ದ್ವಿಪಕ್ಷೀಯ ಸಭೆ
Team Udayavani, Mar 1, 2023, 7:03 PM IST
ನವದೆಹಲಿ: ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಘಟಕಗಳು ಸಂಬಂಧಿತ ಕಾನೂನುಗಳನ್ನು ಸಂಪೂರ್ಣವಾಗಿ ಅನುಸರಿಸಬೇಕು ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಬುಧವಾರ ಬ್ರಿಟನ್ ವಿದೇಶಾಂಗ ಕಾರ್ಯದರ್ಶಿ ಜೇಮ್ಸ್ ಕ್ಲೆವರ್ಲಿ ಅವರಿಗೆ ತಿಳಿಸಿದ್ದಾರೆ.
ಮಾರ್ಚ್ 1 ಮತ್ತು 2 ರಂದು ನಡೆಯಲಿರುವ ಜಿ20 ವಿದೇಶಾಂಗ ಸಚಿವರ ಮಹತ್ವದ ಸಭೆಯಲ್ಲಿ ಪಾಲ್ಗೊಳ್ಳಲು ಭಾರತಕ್ಕೆ ಬಂದಿರುವ ಜೇಮ್ಸ್ ಕ್ಲೆವರ್ಲಿ ಸಭೆಯಲ್ಲಿ ಬಿಬಿಸಿ ತೆರಿಗೆ ಸಮೀಕ್ಷೆಗಳ ವಿಷಯವನ್ನು ಪ್ರಸ್ತಾಪಿಸಿದಾಗ ಜೈಶಂಕರ್ ಅವರು ಜಾಣತನದಿಂದ ಹಲವಾರು ಕ್ಷೇತ್ರಗಳಲ್ಲಿ ದ್ವಿಮುಖ ಒಪ್ಪಂದವನ್ನು ವಿಸ್ತರಿಸುವ ಮಾರ್ಗಗಳು ಸೇರಿದಂತೆ ಹಲವಾರು ವಿಷಯಗಳ ಕುರಿತು ದ್ವಿಪಕ್ಷೀಯ ಮಾತುಕತೆ ನಡೆಸಿದರು.
ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಘಟಕಗಳು ಸಂಬಂಧಿತ ಕಾನೂನುಗಳು ಮತ್ತು ನಿಬಂಧನೆಗಳನ್ನು ಸಂಪೂರ್ಣವಾಗಿ ಅನುಸರಿಸಬೇಕು ಎಂದು ಅವರಿಗೆ ದೃಢವಾಗಿ ತಿಳಿಸಲಾಗಿದೆ, ”ಎಂದು ಭಾರತ ಸರಕಾರದ ಮೂಲವೊಂದು ತಿಳಿಸಿದೆ.
ಕಳೆದ ತಿಂಗಳು, ಭಾರತೀಯ ತೆರಿಗೆ ಅಧಿಕಾರಿಗಳು ನವದೆಹಲಿ ಮತ್ತು ಮುಂಬೈನಲ್ಲಿರುವ ಬಿಬಿಸಿ ಕಚೇರಿಗಳಲ್ಲಿ ಸಮೀಕ್ಷೆಗಳನ್ನು ನಡೆಸಿದರು.
2002ರ ಗುಜರಾತ್ ದಂಗೆಗಳ ಕುರಿತು ಬ್ರಿಟಿಷ್ ಬ್ರಾಡ್‌ಕಾಸ್ಟರ್ ಬಿಡುಗಡೆ ಮಾಡಿದ ಸಾಕ್ಷ್ಯಚಿತ್ರದ ವಿವಾದದ ಬಳಿಕ ತೆರಿಗೆ ಅಧಿಕಾರಿಗಳು ಈ ಕ್ರಮ ಕೈಗೊಂಡಿದ್ದರು.
ದ್ವಿಪಕ್ಷೀಯ ಸಂಬಂಧಗಳಲ್ಲಿನ ಪ್ರಗತಿಯನ್ನು ಎರಡೂ ಕಡೆಯವರು ಪರಿಶೀಲಿಸಿದ್ದು ಮತ್ತು ಜಾಗತಿಕ ಪರಿಸ್ಥಿತಿ ಮತ್ತು ಜಿ 20 ಕಾರ್ಯಸೂಚಿಯ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು ಎಂದು ಜೈಶಂಕರ್ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
“ಯುಕೆಯ ವಿದೇಶಾಂಗ ಕಾರ್ಯದರ್ಶಿ ಜೇಮ್ಸ್ ಕ್ಲೆವರ್ಲಿ ಅವರೊಂದಿಗೆ ದ್ವಿಪಕ್ಷೀಯ ಸಭೆ ಬೆಳಗ್ಗೆ ಪ್ರಾರಂಭವಾಯಿತು. ನಮ್ಮ ಚರ್ಚೆಯ ನಂತರ ನಮ್ಮ ಸಂಬಂಧದಲ್ಲಿನ ಪ್ರಗತಿಯನ್ನು ಪರಿಶೀಲಿಸಲಾಗಿದೆ. ಯಂಗ್ ಪ್ರೊಫೆಷನಲ್ ಸ್ಕೀಮ್‌ನ ಪ್ರಾರಂಭವನ್ನು ನಿರ್ದಿಷ್ಟವಾಗಿ ಗಮನಿಸಲಾಗಿದೆ, ”ಎಂದು ಅವರು ಹೇಳಿದ್ದಾರೆ.
“ಜಾಗತಿಕ ಪರಿಸ್ಥಿತಿ ಮತ್ತು ಜಿ 20 ಕಾರ್ಯಸೂಚಿಯ ಬಗ್ಗೆಯೂ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲಾಗಿದೆ” ಎಂದು ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.