ಗ್ರಾಮೀಣ ಭಾಗದ ರೈತರಿಗೆ ಹೈನುಗಾರಿಕೆಯೇ ಆಧಾರಸ್ತಂಭ: ವೀರಭದ್ರ ಶಿವಾಚಾಚಾರ್ಯ ಸ್ವಾಮೀಜಿ
Team Udayavani, Mar 1, 2023, 9:49 PM IST
ಕೊರಟಗೆರೆ: ಗ್ರಾಮೀಣ ಭಾಗದಲ್ಲಿ ಹೈನುಗಾರಿಕೆಯು ಆದಾಯದ ಮೂಲವಾಗಿದ್ದು, ರೈತರಿಗೆ ಆಧಾರಸ್ತಂಭವಾಗಿದೆ. ಹಾಲು ಸರಬರಾಜು ಮಾಡಿ ಇಂದಿಗೂ ಎಷ್ಟೋ ಕುಟುಂಬಗಳು ಜೀವನ ನಿರ್ವಹಣೆ ಮಾಡುತ್ತಿದ್ದಾರೆ ಎಂದು ಸಿದ್ದರಬೆಟ್ಟದ ಶ್ರೀವೀರಭದ್ರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.
ಪಟ್ಟಣದ ಮಾರುತಿ ಕಲ್ಯಾಣ ಮಂಟಪದಲ್ಲಿ ತುಮಕೂರು ಜಿಲ್ಲಾ ರೈತರ ಮತ್ತು ಎಂಪಿಸಿಎಸ್ ನೌಕರರ ಹಾಗೂ ಸಾಮಾನ್ಯ ಕಲ್ಯಾಣ ಟ್ರಸ್ಟ್ ಮಲ್ಲಸಂದ್ರ, ಸಿದ್ದಾರ್ಥ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ, ಕೊರಟಗೆರೆ ತಾಲ್ಲೂಕಿನ ಹಾಲು ಉತ್ಪಾದಕರ ಸಹಕಾರ ಸಂಘಗಳು, ತುಮಕೂರು ಹಾಲು ಒಕ್ಕೂಟ ಮಲ್ಲಸಂದ್ರ ಇವರ ಸಹಯೋಗದೊಂದಿಗೆ ಏರ್ಪಡಿಸಲಾಗಿದ್ದ ರೈತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ನೂತನ ಕಟ್ಟಡಗಳ ಉದ್ಘಾಟನಾ ಸಮಾರಂಭ ಕಾರ್ಯಕ್ರಮದಲ್ಲಿ ದಿವ್ಯಸಾನಿಧ್ಯ ವಹಿಸಿ ಮಾತನಾಡಿದರು.
ಪ್ರಸಕ್ತ ಸಾಲಿನ ಧ್ಯೇಯವು ಹೈನುಗಾರಿಕೆ ವಲಯದಲ್ಲಿ ಸುಸ್ಥಿರತೆ, ಪೌಷ್ಠಿಕಾಂಶ, ಮತ್ತು ಸಾಮಾಜಿಕ ಆರ್ಥಿಕ ಸಬಲೀಕರಣ ಸಾಧಿಸುವುದಾಗಿದೆ. ಹಾಲು ಎಲ್ಲರೂ ಸೇವಿಸುವ, ಸುಲಭವಾಗಿ ಜೀರ್ಣವಾಗುವ ಆಹಾರವಾಗಿದೆ, ವ್ಯಕ್ತಿ ಆರೋಗ್ಯದಿಂದ ಇರಲು ಬೇಕಾಗುವ ಎಲ್ಲಾ ಪೌಷ್ಠಿಕಾಂಶ ಮತ್ತು ಖನಿಜಾಂಶಗಳು ಇದರಲ್ಲಿವೆ ಎಂದರು.
ಎಲೆರಾಂಪುರ ಕುಂಚಿಟಿಗ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ.ಶ್ರೀ ಹನುಮಂತನಾಥ ಸ್ವಾಮೀಜಿ ಮಾತನಾಡಿ, ರೈತರು ಆರ್ಥಿಕವಾಗಿ ಮುಂದುವರಿಯಲು ಹಾಲು ಉತ್ಪಾದನೆ ಬಹಳ ಮುಖ್ಯವಾಗಿದ್ದು, ರೈತರು ಸಹಕಾರ ಸಂಘದ ಮೂಲಕ ವಹಿವಾಟು ಮಾಡಿದ್ದಲ್ಲಿ ಸಂಘ ಹಾಗೂ ಹಾಲು ಉತ್ಪಾದಕರಿಬ್ಬರೂ ಉತ್ತಮ ಲಾಭಾಂಶ ಪಡೆಯಬಹುದು, ಜೊತೆಗೆ ಸಂಘ ಸೇರಿದಂತೆ ಸರ್ಕಾರದಿಂದ ಸಿಗುವಂತಹ ಎಲ್ಲಾ ಸೌಲಭ್ಯಗಳನ್ನು ಪಡೆಯಬಹುದು ಎಂದರು.
ಶಾಸಕ ಡಾ.ಜಿ ಪರಮೇಶ್ವರ ಮಾತನಾಡಿ, ಹಾಲು ಉತ್ಪಾದನೆಯು ಭಾರತ ದೇಶದಲ್ಲಿ ಹೊಸ ಆಂದೋಲನವನ್ನೇ ಸೃಷ್ಠಿಸಿದೆ, ಪ್ರಪಂಚದಲ್ಲೇ ಹೆಚ್ಚಾಗಿ ಹಾಲು ಉತ್ಪಾದಿಸುವ ದೇಶವೆಂದರೆ ಭಾರತ, ಈ ವಿಷಯದಲ್ಲಿ ಬೇರೆ ದೇಶವು ಊಹೆ ಸಹ ಮಾಡಿರಲಿಲ್ಲ.ಹಾಲು ಉತ್ಪಾದನಾ ಸಂಘದ ಸಂಸ್ಥಾಪಕ ಪ್ರೋ.ಕುರಿಯನ್ ರವರು ಭಾರತವು ಬಡತನದಲ್ಲಿದ್ದಂತಹ ವೇಳೆ ಕೇರಳದಿಂದ ಗುಜರಾತ್‌ಗೆ ಹೋಗಿ ಹಾಲು ಉತ್ಪಾದನಾ ಸಂಘಗಳನ್ನು ಕಟ್ಟಿ ಇಡೀ ಪ್ರಪಂಚಕ್ಕೆ ಹಾಲು ಉತ್ಪಾದನೆ ಮತ್ತು ಮಾರಾಟ ಮಾಡುವುದು ಹೇಗೆ ಎಂಬುದನ್ನು ತಿಳಿಸಿದ್ದಾರೆ.
ಲಾಲ್ ಬಹುದ್ದೂರ್ ಶಾಸ್ತ್ರೀ ಪ್ರಧಾನಿಯಾಗಿದ್ದ ವೇಳೆ ಹಾಲು ಉತ್ಪಾದನೆ ಸಂಘವು ಪ್ರಾರಂಭಗೊಂಡು ಅಂದಿನಿಂದ ಇಲ್ಲಿಯವೆರಗೂ ಜನರಿಗೆ ಪರಿಶುದ್ಧ ಹಾಲನ್ನು ಉತ್ಪಾದಿಸಿ ಮಾರಾಟ ಮಾಡುತ್ತ ದೇಶದಲ್ಲಿ ನಂ೧ ಸ್ಥಾನಕ್ಕೆ ಬಂದಿದೆ, ಇದು ಯಾವ ಉದ್ಯೋಗಕ್ಕೂ ಕಡಿಮೆ ಇಲ್ಲ, ಲಕ್ಷಾಂತರ ಜನ ಹಾಲು ಉತ್ಪಾದನೆ, ಮಾರಾಟ, ಶೇಖರಣೆಯನ್ನು ಪ್ರತಿನಿತ್ಯ ಮಾಡುತ್ತಾರೆ. ಮಹಿಳೆಯರು ಕೂಡ ಹೆಚ್ಚಾಗಿ ಸ್ತ್ರೀಶಕ್ತಿ ಸಂಘದಲ್ಲಿ ವಹಿವಾಟು ನಡೆಸುತ್ತಿದ್ದು, ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನಲ್ಲಿ ಹೆಚ್ಚಾಗಿ ಸಂಘಗಳು ಇದೆ, ಸಂಘವು ಸಾಕಷ್ಟು ಅಭಿವೃದ್ಧಿಯನ್ನು ಕಂಡಿದೆ, 2023ಕ್ಕೆ ರಾಜ್ಯದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬರುವುದು ಸಂಪೂರ್ಣ ಖಚಿತ. ನಮ್ಮಸರ್ಕಾರ ಬಂದ ಕೂಡಲೇ ಹಾಲು ಉತ್ಪಾದಕರ ಸಹಕಾರ ಸಂಘಗಳ ಬೇಡಿಕೆಯನ್ನು ತಿಳಿಸಿ ಪ್ರಣಾಳಿಕೆಯಲ್ಲಿ ಮುದ್ರಿಸಿ ಸಮಸ್ಯೆಯನ್ನು ಬಗೆಹರಿಸಿಕೊಡುವುದಾಗಿ ಭರವಸೆ ನೀಡಿದರು.
ಈ ಕಾರ್ಯಕ್ರಮದಲ್ಲಿ ತುಮಕೂರು ಹಾಲು ಒಕ್ಕೂಟದ ಅಧ್ಯಕ್ಷ ಸಿ.ವಿ ಮಹಾಲಿಂಗಯ್ಯ, ಪಿಸಿಓಆರ್‌ಡಿ ಬ್ಯಾಂಕ್‌ನ ಅಧ್ಯಕ್ಷರಾದ ಡಿ.ಕೃಷ್ಣಕುಮಾರ್, ಮಲ್ಲಸಂದ್ರ ಹಾಲು ಉತ್ಪಾದಕರ ಸಂಘದ ನಿರ್ದೇಶಕ ಎಂ.ಕೆ ಪ್ರಕಾಶ್, ವ್ಯವಸ್ಥಾಪಕ ನಿರ್ದೇಶಕ ಡಾ.ಬಿ.ಪಿ ಸುರೇಶ್, ಕೊರಟಗೆರೆ ಹಾಲು ಉತ್ಪಾದಕರ ಸಂಘದ ನಿರ್ದೇಶಕ ಗುಂಡಿನಪಾಳ್ಯ ಈಶ್ವರಯ್ಯ, ಪಾವಗಡ ತಾಲ್ಲೂಕಿನ ಹಾಲು ಒಕ್ಕೂಟದ ಅಧ್ಯಕ್ಷ ಚೆನ್ನಮಲ್ಲಪ್ಪ, ಪಪಂ ಸದಸ್ಯ ಎ.ಡಿ ಬಲರಾಮಯ್ಯ, ಓಬಳರಾಜು, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರಾದ ಅಶ್ವತ್ಥ ನಾರಾಯಣ್ ಅರಕೆರೆ ಶಂಕರ್, ತಾಪಂ ಮಾಜಿ ಅಧ್ಯಕ್ಷ ರಾಮಯ್ಯ, ಅರುಣ್‌ಕುಮಾರ್ ಸೇರಿದಂತೆ ತುಮಕೂರು ಜಿಲ್ಲೆಯ ಎಲ್ಲಾ ತಾಲ್ಲೂಕಿನ ಹಾಲು ಉತ್ಪಾದಕರ ಸಂಘಗಳ ಪದಾಧಿಕಾರಿಗಳು, ರೈತರು ಹಾಜರಿದ್ದರು.
ಕೆಎಂಎಫ್‌ನಿಂದ ಫಲಾನುಭವಿಗಳಿಗೆ ಚೆಕ್ ವಿತರಣೆ
ಕೊರಟಗೆರೆಯಲ್ಲಿ ಹಾಲು ಉತ್ಪಾದಕರ ಸಂಘದಿಂದ ನಡೆದ ರೈತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ನೂತನ ಕಟ್ಟಡಗಳ ಉದ್ಘಾಟನಾ ಸಮಾರಂಭದಲ್ಲಿ ರೈತ ಹಾಗೂ ರಾಸುಗಳ ಫಲಾನುಭವಿ ಕುಟುಂಬಕ್ಕೆ 50 ಲಕ್ಷಕ್ಕೂ ಅಧಿಕ ಮೊತ್ತದ ಚೆಕ್‌ನ್ನು ಶ್ರೀಗಳು ಸೇರಿದಂತೆ ಮಾಜಿ ಡಿಸಿಎಂ ಕಾರ್ಯಕ್ರಮದಲ್ಲಿ ವಿತರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು
Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್: ಸಚಿವ ಡಾ| ಜಿ. ಪರಮೇಶ್ವರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.