ಹಳಿ ದ್ವಿಗುಣ ಕಾಮಗಾರಿ: ಮಾ. 4ರಂದು ರೈಲು ಸೇವೆಯಲ್ಲಿ ವ್ಯತ್ಯಯ
Team Udayavani, Mar 2, 2023, 6:45 AM IST
ಮಂಗಳೂರು: ನಗರದ ಪಡೀಲ್-ಜೋಕಟ್ಟೆ ನಡುವೆ ಹಳಿ ದ್ವಿಗುಣ ಕಾಮಗಾರಿ ಹಿನ್ನೆಲೆಯಲ್ಲಿ ಮಾ. 4ರಂದು ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯವಾಗಲಿದೆ.
ಸಂಪೂರ್ಣ ರದ್ದು
ಮಂಗಳೂರು ಸೆಂಟ್ರಲ್-ಸುಬ್ರಹ್ಮಣ್ಯ ರೋಡ್ ನಡುವಿನ ನಂ.06489 ಕಾದಿರಿಸದ ಎಕ್ಸ್‌ಪ್ರೆಸ್ ವಿಶೇಷ ರೈಲು ಮತ್ತು ಸುಬ್ರಹ್ಮಣ್ಯ ರೋಡ್- ಮಂಗಳೂರು ಸೆಂಟ್ರಲ್ ನಡುವಿನ ನಂ.06488 ಕಾದಿರಿಸದ ಎಕ್ಸ್‌ಪ್ರೆಸ್ ವಿಶೇಷ ರೈಲು ರದ್ದುಗೊಂಡಿದೆ. ಮಂಗಳೂರು ಸೆಂಟ್ರಲ್- ಕಬಕ ಪುತ್ತೂರು ನಂ.06487 ಕಾದಿರಿಸದ ಎಕ್ಸ್‌ಪ್ರೆಸ್ ವಿಶೇಷ ರೈಲು ಮತ್ತು ಕಬಕ ಪುತ್ತೂರು -ಮಂಗಳೂರು ಸೆಂಟ್ರಲ್ ನಂ. 06486 ಕಾದಿರಿಸದ ಎಕ್ಸ್ ಪ್ರಸ್ ವಿಶೇಷ ರೈಲು ಮಾ. 4ರಂದು ರದ್ದಾಗಿದೆ.
ಭಾಗಶಃ ರದ್ದು
ಮಡಗಾಂವ್ ಜಂಕ್ಷನ್-ಮಂಗಳೂರು ಸೆಂಟ್ರಲ್ ನಡುವೆ ಸಂಚರಿಸುವ ನಂ.10107 ಮೆಮು ಎಕ್ಸ್‌ಪ್ರೆಸ್ ರೈಲು ತೋಕೂರು ಮತ್ತು ಮಂಗಳೂರು ಸೆಂಟ್ರಲ್ ನಡುವೆ ಭಾಗಶಃ ರದ್ದಾಗಲಿದೆ. ಮಂಗಳೂರು ಸೆಂಟ್ರಲ್- ಮಡಗಾಂವ್ ಜಂಕ್ಷನ್ ನಂ.10108 ರೈಲು ಮಂಗಳೂರು ಸೆಂಟ್ರಲ್ ಮತ್ತು ತೋಕೂರು ನಡುವೆ ಭಾಗಶಃ ರದ್ದಾಗಲಿದ್ದು, ರೈಲು ಮಾ.4ರಂದು ಸಂಜೆ 3.40ಕ್ಕೆ ತೋಕೂರಿನಿಂದ ಪ್ರಯಾಣ ಆರಂಭಿಸಲಿದೆ.
ಮಾ.3ರಂದು ಪ್ರಯಾಣ ಆರಂಭ
ಸಿಎಸ್‌ಎಂಟಿ-ಮಂಗಳೂರು ಜಂಕ್ಷನ್ ಎಕ್ಸ್‌ಪ್ರೆಸ್ ನಂ.12133 ರೈಲು ಸುರತ್ಕಲ್-ಮಂಗಳೂರು ಜಂಕ್ಷನ್ ನಡುವೆ ಭಾಗಶಃ ರದ್ದಾಗಲಿದೆ. ಮಾ. 4ರಂದು ಸಂಚರಿಸಲಿರುವ ಮಂಗಳೂರು ಜಂಕ್ಷನ್- ಮುಂಬಯಿ ಸಿಎಸ್‌ಎಂಟಿ ಎಕ್ಸ್‌ಪ್ರೆಸ್ ನಂ. 12134 ರೈಲು ಮಂಗಳೂರು ಜಂಕ್ಷನ್ ಮತ್ತು ಸುರತ್ಕಲ್ ನಡುವೆ ಭಾಗಶಃ ರದ್ದಾಗಲಿದೆ.
ಯಶವಂತಪುರ -ಮಂಗಳೂರು ಜಂಕ್ಷನ್ ಸಾಪ್ತಾಹಿಕ ಎಕ್ಸ್‌ಪ್ರೆಸ್ (ವಯಾ- ಶ್ರವಣಬೆಳಗೊಳ) ನಂ.16539 ಕಬಕ ಪುತ್ತೂರು-ಮಂಗಳೂರು ಜಂಕ್ಷನ್ ನಡುವೆ ಮಾ. 4ರಂದು ಭಾಗಶಃ ರದ್ದಾಗಲಿದೆ.
ಮಾ.3ರಂದು ಹೊರಡಲಿರುವ ವಿಜಯಪುರ -ಮಂಗಳೂರು ಜಂಕ್ಷನ್ ಡೈಲಿ ಎಕ್ಸ್‌ಪ್ರಸ್ ನಂ.07377 ವಿಶೇಷ ರೈಲು ಸುಬ್ರಹ್ಮಣ್ಯ ರೋಡ್ -ಮಂಗಳೂರು ಜಂಕ್ಷನ್ ನಡುವೆ ಭಾಗಶಃ ರದ್ದಾಗಲಿದೆ. ಮಾ. 4ರಂದು ಹೊರಡಲಿರುವ ಮಂಗಳೂರು ಜಂಕ್ಷನ್-ವಿಜಯಪುರ ಡೈಲಿ ಎಕ್ಸ್‌ಪ್ರಸ್ ನಂ.07378 ರೈಲು ಮಂಗಳೂರು ಜಂಕ್ಷನ್-ಸುಬ್ರಹ್ಮಣ್ಯ ರೋಡ್ ನಿಲ್ದಾಣದ ನಡುವೆ ಭಾಗಶಃ ರದ್ದಾಗಲಿದೆ ಎಂದು ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Hyderabad: ಗಂಟಲಿಗೆ ಪೂರಿ ಸಿಲುಕಿ ವಿದ್ಯಾರ್ಥಿ ಸಾವು
Narendra Modi: ನಾನು ಯಾರದ್ದೇ ಅಧಿಕಾರ ವ್ಯಾಪ್ತಿ ಅತಿಕ್ರಮಿಸಿಕೊಂಡಿಲ್ಲ: ಮೋದಿ
US: ಭಾರತದ ಮೇಲೆ ತೆರಿಗೆ ಇಲ್ಲ, ಕೆನಡಾ, ಚೀನಾಕ್ಕಷ್ಟೇ ತೆರಿಗೆ ವಿಧಿಸಿದ ಟ್ರಂಪ್!
Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.