ದೇಶದಲ್ಲಿ ಜಿಎಸ್‌ಟಿ ಸಂಗ್ರಹ 1.49 ಲಕ್ಷ ಕೋಟಿ

2022ರ ಫೆಬ್ರವರಿಗೆ ಹೋಲಿಸಿದರೆ ಈ ವರ್ಷದಲ್ಲಿ ಶೇ.12 ಏರಿಕೆ

Team Udayavani, Mar 2, 2023, 7:35 AM IST

ದೇಶದಲ್ಲಿ ಜಿಎಸ್‌ಟಿ ಸಂಗ್ರಹ 1.49 ಲಕ್ಷ ಕೋಟಿ

ಹೊಸದಿಲ್ಲಿ: ದೇಶದಲ್ಲಿ ಜಿಎಸ್‌ಟಿ ಸಂಗ್ರಹ ಪ್ರಮಾಣ ಏರಿಕೆಯ ಹಾದಿಯಲ್ಲಿಯೇ ಮುಂದುವರಿದಿದೆ. ಫೆಬ್ರವರಿಗೆ ಸಂಬಂಧಿಸಿದಂತೆ 1,49, 577 ಕೋಟಿ ರೂ. ಜಿಎಸ್‌ಟಿ ಸಂಗ್ರಹಿಸಲಾಗಿದೆ. 2022ರ ಫೆಬ್ರವರಿಗೆ ಹೋಲಿಕೆ ಮಾಡಿದರೆ ಶೇ.12 ಹೆಚ್ಚಾಗಿದೆ ಎಂದು ಕೇಂದ್ರ ವಿತ್ತ ಸಚಿವಾಲಯದ ಹೇಳಿಕೆಯಲ್ಲಿ ತಿಳಿಸಲಾಗಿದೆ.

ದೇಶದಲ್ಲಿ ಆರ್ಥಿಕ ಚಟುವಟಿಕೆಗಳು ಮತ್ತಷ್ಟು ಧನಾತ್ಮವಾಗಿ ಇದ್ದ ಕಾರಣ, ಗ್ರಾಹಕರು ಹೆಚ್ಚಿನ ಪ್ರಮಾಣದಲ್ಲಿ ಖರ್ಚು ಮಾಡಿದ್ದರಿಂದ ಈ ಬೆಳವಣಿಗೆಯಾಗಿದೆ. ಸೆಸ್‌ ಸಂಗ್ರಹದಿಂದಲೇ 11,931 ಕೋಟಿ ರೂ.ಜಮೆಯಾಗಿದೆ. ದೇಶದಲ್ಲಿ ಜಿಎಸ್‌ಟಿ ಜಾರಿಗೆ ಬಂದ ಬಳಿಕ ಸೆಸ್‌ನಿಂದ ಇದೇ ಮೊದಲ ಬಾರಿಗೆ ಇಷ್ಟು ದೊಡ್ಡ ಮೊತ್ತ ಸಂಗ್ರಹಿಸಲಾಗಿದೆ.

ಜನವರಿಯಲ್ಲಿ 1.57 ಲಕ್ಷ ಕೋಟಿ ರೂ., 2022ರ ಎಪ್ರಿಲ್‌ನಲ್ಲಿ 1.68 ಲಕ್ಷ ಕೋಟಿ ರೂ. ಸಂಗ್ರಹಿಸಲಾಗಿತ್ತು.

ದೇಶದ ಅರ್ಥ ವ್ಯವಸ್ಥೆಗೆ ಇದೊಂದು ಧನಾತ್ಮಕ ಸಂಕೇತವೆಂದು ಹಲವಾರು ಮಂದಿಗೆ ತೆರಿಗೆ ಕ್ಷೇತ್ರದ ವಿಶ್ಲೇಷಕರು ಸಂತಸ ವ್ಯಕ್ತಪಡಿಸಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ಹೆಚ್ಚುತ್ತಿರುವ ಸ್ವಾವಲಂಬನೆಯೂ ಅದಕ್ಕೆ ನೆರವಾಗಿದೆ ಎಂದು ಅವರ ಅಭಿಪ್ರಾಯವಾಗಿದೆ.

ಪ್ರಸಕ್ತ ವರ್ಷ ಅರ್ಥ ವ್ಯವಸ್ಥೆಗೆ
ಶೇ.5.5ರ ಬೆಳವಣಿಗೆ: ಮೂಡಿಸ್‌
ಹೊಸದಿಲ್ಲಿ/ಮುಂಬಯಿ: ಪ್ರಸಕ್ತ ವರ್ಷಕ್ಕೆ ಸಂಬಂಧಿಸಿದಂತೆ ಭಾರತ ಶೇ.5.5ರ ದರದಲ್ಲಿ ಬೆಳವಣಿಗೆ ಸಾಧಿಸಲಿದೆ. ಹೀಗೆಂದು ಮೂಡಿಸ್‌ ಇನ್ವೆಸ್ಟರ್‌ ಸರ್ವಿಸ್‌ ಧನಾತ್ಮಕ ಭವಿಷ್ಯ ನುಡಿದಿದೆ. ಹಿಂದಿನ ಸಮೀಕ್ಷೆ ಪ್ರಕಾರ ದೇಶ ಶೇ.4.8ರ ದರದಲ್ಲಿ ಅಭಿವೃದ್ಧಿ ಕಾಣಲಿದೆ ಎಂದು ಅಭಿ ಪ್ರಾಯಪಡಲಾಗಿತ್ತು.

ಬಜೆಟ್‌ನಲ್ಲಿ ಮೂಲ ಸೌಕರ್ಯ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ, ತೃಪ್ತಿದಾಯಕವಾಗಿರುವ ಅರ್ಥ ವ್ಯವಸ್ಥೆಯ ಬೆಳವಣಿಗೆಯ ಹಿನ್ನೆಲೆಯಲ್ಲಿ ಈ ಬೆಳವಣಿಗೆಯಾಗಲಿದೆ ಎಂದು ಮೂಡಿಸ್‌ ತನ್ನ ವರದಿಯಲ್ಲಿ ಅಭಿಪ್ರಾಯಪಟ್ಟಿದೆ. ಇದಲ್ಲದೆ, ಅಮೆರಿಕ, ಕೆನಡಾ ಸೇರಿದಂತೆ ಹಲವು ಜಿ20 ರಾಷ್ಟ್ರಗಳಲ್ಲಿಯೂ ಕೂಡ ಅರ್ಥ ವ್ಯವಸ್ಥೆ ಉತ್ತಮ ರೀತಿಯಲ್ಲಿ ಬೆಳವಣಿಗೆ ಕಾಣಲಿದೆ ಎಂದು ಹೇಳಿದೆ. ಮತ್ತೊಂದೆಡೆ, ದೇಶದಲ್ಲಿನ ಉತ್ಪಾದನಾ ಕ್ಷೇತ್ರ ಸೂಚ್ಯಂಕ (ಪಿಎಂಐ) ಫೆಬ್ರವರಿಗೆ ಸಂಬಂಧಿಸಿದಂತೆ ಸ್ಥಿರತೆ ಕಾಯ್ದುಕೊಂಡಿದೆ. ಜನವರಿಯಲ್ಲಿ 55.4ರಷ್ಟು ಇದ್ದ ಸೂಚ್ಯಂಕ ಕಳೆದ ತಿಂಗಳು 55.3ರಲ್ಲಿ ನಿಂತಿದೆ.

ಟಾಪ್ ನ್ಯೂಸ್

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

2-

ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

kejriwal-2

Delhi; ಸ್ತ್ರೀಯರಿಗೆ ಸಹಾಯಧನ: ಮನೆಯಲ್ಲೇ ನೋಂದಣಿ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

1-kuu

ಕಾರ್ಗಿಲ್‌ ದಾಳಿ ಮಾಹಿತಿ ಕೊಟ್ಟ ಕುರಿಗಾಹಿ ಸಾವು: ಸೇನೆ ನಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.