![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 2, 2023, 11:24 AM IST
ಗುರುಗ್ರಾಮ್: ಮಹಿಳೆಯೊಬ್ಬರ ಕಾರಿಗೆ ಢಿಕ್ಕಿ ಹೊಡೆದು, ಆಕೆಯ ಜೊತೆ ಅಸಭ್ಯವಾಗಿ ವರ್ತಿಸಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಬುಧವಾರ (ಮಾರ್ಚ್ 1 ರಂದು ) ನಡೆದಿದೆ.
ದೆಹಲಿಯ ವಸಂತ್ ಕುಂಜ್ ಮೂಲದ ಅನ್ಸಲ್ ದೀಕ್ಷಿತ್(24) ಬಂಧಿತ ಆರೋಪಿ.
ಘಟನೆ ಹಿನ್ನೆಲೆ: ಖಾಸಗಿ ಬ್ಯಾಂಕ್ ವೊಂದರಲ್ಲಿ ಕೆಲಸ ಮಾಡುವ ಮಹಿಳೆ, ಕೆಲಸ ಮುಗಿದ ಬಳಿಕ ತನ್ನ ಡ್ರೈವರ್ ನೊಂದಿಗೆ ಕಾರಲ್ಲಿ ಮನೆಗೆ ಬರುತ್ತಿದ್ದರು. ಈ ವೇಳೆ ವಜೀರಾಬಾದ್ ಟ್ರಾಫಿಕ್ ಸಿಗ್ನಲ್ ಬಳಿ ಎಸ್ ಯುವಿ ಕಾರಿನಲ್ಲಿ ಬಂದ ಅನ್ಸಲ್ ದೀಕ್ಷಿತ್ ಮಹಿಳೆಯ ಕಾರಿಗೆ ಢಿಕ್ಕಿ ಹೊಡೆದಿದ್ದಾನೆ. ಆ ಬಳಿಕ ಮಹಿಳೆಯ ಕಾರು ಚಾಲಕನೊಂದಿಗೆ ವಾಗ್ವಾದಕ್ಕೆ ಇಳಿದಿದ್ದಾನೆ.
ಇದಾದ ಬಳಿಕ ಕಾರಿನಲ್ಲಿದ್ದ ಮಹಿಳೆಯ ಜೊತೆ ಅಸಭ್ಯವಾಗಿ ವರ್ತಿಸಿ, ಕೆಟ್ಟ ಮಾತುಗಳಿಂದ ನಿಂದಿಸಿ, ಆಕೆಗೆ ಜೀವ ಬೆದರಿಕೆಯನ್ನು ಹಾಕಿದ್ದಾನೆ.
ಈ ಬಗ್ಗೆ ಪೊಲೀಸರಿಗೆ ದೂರು ಕೊಟ್ಟ ಬಳಿಕ ಕಾರನ್ನು ಜಪ್ತಿ ಮಾಡಿ, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.