![naki](https://www.udayavani.com/wp-content/uploads/2025/02/naki-415x221.png)
![naki](https://www.udayavani.com/wp-content/uploads/2025/02/naki-415x221.png)
Team Udayavani, Mar 2, 2023, 12:40 PM IST
ಪಣಜಿ: ಮಹಿಳೆಯೊಬ್ಬರು ಚಲಿಸುತ್ತಿದ್ದ ರೈಲಿಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟ ಘಟನೆ ಗೋವಾದ ಮಡಗಾಂವ್‍ನ ನಾವೇಲಿ ರೈಲು ಹಳಿಯಲ್ಲಿ ನಡೆದಿದೆ.
ರೈಲಿಗೆ ಢಿಕ್ಕಿ ಹೊಡೆದ ಪರಿಣಾಮ 35 ವರ್ಷದ ಮಹಿಳೆಯ ಕಾಲು ಮುರಿದಿದ್ದು, ಗುರುತು ಪತ್ತೆ ಆಗಿಲ್ಲ ಎಂದು ತಿಳಿದು ಬಂದಿದೆ. ಮಹಿಳೆಯ ಗುರುತು ದೃಢಪಡಿಸಲು ಮೃತದೇಹವನ್ನು ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.
ಘಟನೆ ಬಗ್ಗೆ ಮಾಹಿತಿ ಪಡೆದ ರೈಲ್ವೇ ಪೊಲೀಸರು ಸ್ಥಳಕ್ಕೆ ಬಂದಿದ್ದು, ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಪೊಲೀಸ್ ಉಪನಿರೀಕ್ಷಕ ಪ್ರಿತೇಶ್ ಗೋವೆಕರ್ ಮುಂದಿನ ತನಿಖೆ ನಡೆಸುತ್ತಿದ್ದಾರೆ.
You seem to have an Ad Blocker on.
To continue reading, please turn it off or whitelist Udayavani.