ಯಾರಿಗೆ ಟಿಕೆಟ್‌ ನೀಡಿದರೂ ಶ್ರಮಿಸಲು ಸಿದ್ಧ


Team Udayavani, Mar 2, 2023, 2:59 PM IST

tdy-17

ಬಾಗೇಪಲ್ಲಿ: ವಿಧಾನಸಭೆ ಚುನಾವಣೆಯಲ್ಲಿ ಬಾಗೇಪಲ್ಲಿ ಕ್ಷೇತ್ರದಿಂದ ಸ್ಪರ್ಧೆ ಮಾಡಲು ನಮ್ಮ ಮೂವರಲ್ಲಿ ಯಾರಿಗೆ ಬಿಜೆಪಿ ಟಿಕೆಟ್‌ ನೀಡಿದರೂ ಅವರು ಗೆಲುವಿಗೆ ಶ್ರಮಿಸುತ್ತೇವೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಮಲಿಂಗಪ್ಪ ಘೋಷಣೆ ಮಾಡಿದರು.

ನಮ್ಮ ಮೂವರು ಅಕಾಂಕ್ಷಿಗಳು ಪಕ್ಷದ ಸಂಘಟನೆಗೆಗಾಗಿ ಬಾಗೇಪಲ್ಲಿ, ಗುಡಿಬಂಡೆ ಮತ್ತು ಚೇಳೂರು ತಾಲೂಕುಗಳಲ್ಲಿ ಪಕ್ಷದ ಆದೇಶ ಮೇರೆಗೆ ಶ್ರಮಿಸುತ್ತಿದ್ದು ವಿರೋಧ ಪಕ್ಷಗಳು ಗೊಂದಲ ಸೃಷ್ಟಿ ಮಾಡಲು ಹೊರಟಿದ್ದಾರೆ. ಸಿ.ಮುನಿರಾಜು, ಟಿ.ಕೋನಪ್ಪರೆಡ್ಡಿ ನನ್ನ ನಡುವೆ ಟಿಕೆಟ್‌ಗಾಗಿ ಪೈಪೋಟಿ ಇಲ್ಲ ಯಾರಿಗೆ ಟಿಕೆಟ್‌ ನೀಡಿದರೂ ಪಕ್ಷದ ಗೆಲುವಿಗೆ ಶ್ರಮಿಸುತ್ತೇವೆ. ಚುನಾವಣೆಯಲ್ಲಿ ಬಿಜೆಪಿ ಪಕ್ಷ ಗೆಲುವು ಮುಖ್ಯ ಎಂದರು.

ಶಾಸಕ ಎಸ್‌.ಎನ್‌.ಸುಬ್ಟಾರೆಡ್ಡಿ 10 ವರ್ಷಗಳ ಆಡಳಿತದಲ್ಲಿ ಬಾಗೇಪಲ್ಲಿ, ಗುಡಿಬಂಡೆ, ಚೇಳೂರು ತಾಲೂಕುಗಳಲ್ಲಿ ರಸ್ತೆಗಳ ಸ್ಥಿತಿ ಚಿಂತಾಜನಕವಾಗಿದೆ. ಪರಿಶಿಷ್ಟ ಜಾತಿ/ ಪಂಗಡ ಸಮುದಾಯಗಳಿಗೆ 50 ವರ್ಷಗಳಿಂದ ಸಮರ್ಪಕ ಮೀಸಲಾತಿಯಿಂದ ವಂಚಿತರಾಗಿದ್ದರು. ಸಿಎಂ ಬೊಮ್ಮಾಯಿ ಸರ್ಕಾರ ಮೀಸಲಾತಿ ನೀಡಿದೆ. ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಮಾ. 3ರಂದು ಬೆಂಗಳೂರಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ವಿಜಯ ಸಂಕಲ್ಪಯಾತ್ರೆಗೆ ಚಾಲನೆ ನೀಡಲಿದ್ದಾರೆ. ರಾಜ್ಯದಲ್ಲಿ 4 ತಂಡಗಳನ್ನು ರಚನೆ ಮಾಡಿ ರೋಡ್‌ಶೋ, ಬಹಿರಂಗ ಸಭೆಗಳನ್ನು ನಡೆಸಲಿದೆ. ಪ್ರಸ್ತುತ ಸರ್ಕಾರಿ ನೌಕರರಿಗೆ ಶೇ. 17 ವೇತನ ಹೆಚ್ಚಳ ಮಾಡಲಾಗಿದೆ. ಕೆಂಪೇಗೌಡರ 108 ಅಡಿಗಳ ಪ್ರತಿಮೆಯನ್ನು ಪ್ರಧಾನ ಮೋದಿ ಲೋಕಾರ್ಪಣೆಗೊಳಿಸಿದ್ದು, ಬಾಗೇಪಲ್ಲಿಗೆ ವಿಜಯ ಸಂಕಲ್ಪಯಾತ್ರೆ ಮಾರ್ಚ್‌ 15ರಂದು ಬರಲಿದೆ ಎಂದರು.

ಬೆಂಗಳೂರು ಉಪವರ್ತುಲ ರಸ್ತೆ ಪ್ರಾಧಿಕಾರದ ಅಧ್ಯಕ್ಷ ಸಿ.ಮುನಿರಾಜು ಮಾತನಾಡಿ, ಜಲ ಜೀವನ್‌ ಮಿಷನ್‌ ಯೋಜನೆ ಪ್ರಧಾನಿ ಮೋದಿ ಸರ್ಕಾರ ಜಾರಿಗೆ ತಂದಿದ್ದು ಶಾಸಕ ಎಸ್‌.ಎನ್‌.ಸುಬ್ಟಾರೆಡ್ಡಿ ಅವರು ಹಳ್ಳಿಗಳಲ್ಲಿ ಪ್ರತಿದಿನ ಭೂಮಿ ಪೂಜೆ ನೆರವೇರಿಸಿ ನಾನೇ ಮಾಡಿಸಿದ್ದು ಎಂದು ಹೇಳಿಕೊಳ್ಳುತ್ತಿದ್ದಾರೆ. ಸರ್ಕಾರ ಯಾವುದೇ ಕಾರ್ಯಕ್ರಮ ಜಾರಿಗೆ ಬಂದರೂ ಜನರಿಗೆ ತಪ್ಪು ಮಾಹಿತಿ ರವಾನಿಸುತ್ತಿದ್ದಾರೆ. ಪ್ರಧಾನಿಗಳು ರೈತರಿಗೆ ಪ್ರತಿ ವರ್ಷ 10ಸಾವಿರ ರೂ.ಗಳನ್ನು ಅವರ ಖಾತೆಗಳಿಗೆ ಜಮೆ ಮಾಡುತ್ತಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅನ್ನಭಾಗ್ಯ ಯೋಜನೆಯಲ್ಲಿ ಕಾಂಗ್ರೆಸ್‌ ಮುಖಂಡರು ಸುಳ್ಳು ಹೇಳುತ್ತಿದ್ದಾರೆ. ಕುಟುಂಬದ ಪ್ರತಿ ಸದಸ್ಯನಿಗೆ 12 ಕೆ.ಜಿ. ಅಕ್ಕಿ ನೀಡಲು ನಿರ್ಧರಿಸಿದೆ. ನಾವು ಸಮಾಜ ಸೇವೆ ಮಾಡುತ್ತೇವೆ. ಮತವನ್ನು ಯಾಚಿಸುತ್ತೇವೆ. ಶಾಸಕರು ಸದನದಲ್ಲಿ ಭೂಹಗರಣದ ಬಗ್ಗೆ ಮಾತನಾಡುತ್ತಾರೆ. ಆದರೆ ಈ ಹಗರಣದಲ್ಲಿ ಶಾಸಕರೇ ಶಾಮಿಲಾಗಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಬಾಗೇಪಲ್ಲಿ ವಿಧಾನಸಭೆ ಕ್ಷೇತ್ರದಲ್ಲಿ ಬಹುಮತ ಪಡೆದಿದೆ. ಈ ಚುನಾವಣೆಯಲ್ಲಿ ಬಿಜೆಪಿ ಗೆಲುವು ಶತಸಿದ್ಧ ವಿಧಾನಸಭೆ ಚುನಾವಣೆಯಲ್ಲಿ ನಾನು, ರಾಮಲಿಂಗಪ್ಪ, ಕೋನಪ್ಪರೆಡ್ಡಿ ಅಕಾಂಕ್ಷಿಗಳಾಗಿದ್ದು ಯಾರಿಗೆ ಟಿಕೆಟ್‌ ನೀಡಿದರೂ ಅವರ ಗೆಲುವಿಗೆ ಶ್ರಮಿಸುತ್ತೇವೆ ಎಂದು ಹೇಳಿದರು.

ವಕ್ಕಲಿಗರ ಸಂಘದ ಪ್ರಧಾನ ಕಾರ್ಯದರ್ಶಿ ಟಿ.ಕೋನಪ್ಪರೆಡ್ಡಿ ಮಾತನಾಡಿದರು.

ಮಂಡಲಾಧ್ಯಕ್ಷ ಆರ್‌.ಪ್ರತಾಪ್‌, ಗುಡಿಬಂಡೆ ಅಧ್ಯಕ್ಷ ಗಂಗಿರೆಡ್ಡಿ, ಮಾಜಿ ಮಂಡಲಾಧ್ಯಕ್ಷ ಎಸ್‌.ಟಿ.ಚಂದ್ರಮೋಹನ್‌ ಬಾಬು,ಜಿಲ್ಲಾ ಎಸ್ಸಿ ಮೋರ್ಚಾ ಅಧ್ಯಕ್ಷ ಆರ್‌. ವೆಂಕಟೇಶ್‌, ಪ್ರಧಾನ ಕಾರ್ಯದರ್ಶಿ ಪ್ರಭಾಕರ ರೆಡ್ಡಿ,ಜಿಲ್ಲಾ ರೈತ ಮೋರ್ಚಾ ಕಾರ್ಯದರ್ಶಿ ವೈ. ಎಸ್‌.ಲೋಕೇಶ್‌ ಕುಮಾರ್‌ ಇತರರಿದ್ದರು.

ಟಾಪ್ ನ್ಯೂಸ್

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

1-robo-kidnap

Shanghai: ಎಐ ಆಧಾರಿತ ರೋಬೋಟ್‌ನಿಂದ 12 ರೋಬೋಗಳ ಕಿಡ್ನಾಪ್‌!

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CKB-Crime

Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

1-robo-kidnap

Shanghai: ಎಐ ಆಧಾರಿತ ರೋಬೋಟ್‌ನಿಂದ 12 ರೋಬೋಗಳ ಕಿಡ್ನಾಪ್‌!

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.