ವಿಜ್ಞಾನ ಕ್ಷೇತ್ರಕ್ಕೆ ರಾಮನ್ ಕೊಡುಗೆ ಅಪಾರ; ರಾಜಶೇಖರ ಪುರಾಣಿಕ
Team Udayavani, Mar 2, 2023, 4:33 PM IST
ಬಾಗಲಕೋಟೆ: ಸರ್ ಸಿ.ವ್ಹಿ. ರಾಮನ್ ಪರಿಣಾಮ ಸಂಶೋಧನೆ ನಮ್ಮ ರಾಷ್ಟ್ರದಲ್ಲಿ ಅಷ್ಟೆ ಅಲ್ಲದೇ ಜಗತ್ತೆ ಬೆರಗಾಗಿ ಸ್ವೀಕರಿಸಿದೆ. ಆದರೆ, ಇಂದು ಮನುಷ್ಯ ವಿಜ್ಞಾನ ಮತ್ತು ತಂತ್ರಜ್ಞಾನವನ್ನು ಅತಿಯಾಗಿ ಬಳಸಿಕೊಂಡು ಪ್ರಕೃತಿಯನ್ನು ವ್ಯವಹಾರಿಕ ದೃಷ್ಟಿಕೋನದಿಂದ ನೋಡುತ್ತಿದ್ದಾನೆ. ಇದು ಅಪಾಯಕಾರಿ ಬೆಳವಣಿಗೆ ಬಾಗಲಕೋಟೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ರಾಜಶೇಖರ ಪುರಾಣಿಕ ಹೇಳಿದರು.
ನಗರದ ಬಿವಿವಿ ಸಂಘದ ಅಕ್ಕಮಹಾದೇವಿ ಮಹಿಳಾ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಕಾಲೇಜಿನ ಐಕ್ಯೂಎಸಿ, ಸ್ನಾತಕೋತ್ತರ ಸಸ್ಯಶಾಸ್ತ್ರ ವಿಭಾಗ ಹಾಗೂ ವಿಜ್ಞಾನ ಸಂಘದ ಸಹಯೋಗದಲ್ಲಿ ಬುಧವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕಾಲೇಜು ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷ ಗುರುಬಸವ ಸೂಳಿಭಾವಿ ಮಾತನಾಡಿ, ಜಗತ್ತಿನ ವಿಜ್ಞಾನ ಲೋಕದ ಸಂಶೋಧನೆಗೆ ಭಾರತದ ಕೊಡುಗೆ ಅಪಾರವಾಗಿದೆ. ಅದರಲ್ಲಿ ಸರ್ ಸಿ.ವಿ. ರಾಮನ್ ಅವರು ಒಬ್ಬರು. ವಿಜ್ಞಾನ ವಿದ್ಯಾರ್ಥಿಗಳು ಸಂಶೋಧನಾ ಮನೋಭಾವನೆ ಬೆಳೆಸಿಕೊಂಡು ವಿಜ್ಞಾನದಲ್ಲಿ ಅಡಗಿದ ವಿಸ್ಮಯ ಗುರುತಿಸಬೇಕು ಎಂದರು.
ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ರಸಪ್ರಶ್ನೆ ಸ್ಪರ್ಧೆಯಲ್ಲಿ ತುಂಗಳ ಪದವಿಪೂರ್ವ ಕಾಲೇಜು ಪ್ರಥಮ ಸ್ಥಾನ ಪಡೆದುಕೊಂಡಿದ್ದು, ವಿದ್ಯಗಿರಿಯ ಬಸವೇಶ್ವರ ಸ್ವತಂತ್ರ ಪದವಿಪೂರ್ವ ಕಾಲೇಜು ದ್ವಿತೀಯ ಸ್ಥಾನ ಪಡೆದುಕೊಂಡಿತು. ಕಾರ್ಯಕ್ರಮದಲ್ಲಿ ವಿಜ್ಞಾನ ವಸ್ತು ಪ್ರದರ್ಶನ ಹಮ್ಮಿಕೊಳ್ಳಲಾಗಿತ್ತು.
ಎನ್.ಎಸ್. ದೊಡ್ಡಮನಿ ಪ್ರಾರ್ಥಿಸಿದರು. ಕಾಲೇಜಿನ ಪ್ರಾಚಾರ್ಯ ಎಸ್.ಜೆ ಒಡೆಯರ ಸ್ವಾಗತಿಸಿದರು. ಡಾ|ಅವಿತಾ ಮಾರಿಹಾಳ ಪರಿಚಯಿಸಿದರು. ವಂದನಾ ಕಡಪಟ್ಟಿ ಕಾರ್ಯಕ್ರಮ ನಿರೂಪಿಸಿದರು. ವಿ.ಬಿ. ಪೊಲೀಸಪಾಟೀಲ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.