ಕಾಂಗ್ರೆಸ್ ನಾಯಕಿ Sonia Gandhi ಆಸ್ಪತ್ರೆಗೆ ದಾಖಲು
ಎರಡು ತಿಂಗಳಲ್ಲಿ ಎರಡನೇ ಬಾರಿ ಆಸ್ಪತ್ರೆಗೆ ದಾಖಲಾದ ಕಾಂಗ್ರೆಸ್ ಮಾಜಿ ಅಧಿನಾಯಕಿ
Team Udayavani, Mar 3, 2023, 2:39 PM IST
ನವದೆಹಲಿ: ಕಾಂಗ್ರೆಸ್ನ ಮಾಜಿ ಅಧಿನಾಯಕಿ ಸೋನಿಯಾ ಗಾಂಧಿ ಅವರು ಉಸಿರಾಟ ಸಂಬಂಧಿ ಸಮಸ್ಯೆಯಿಂದಾಗ ದೆಹಲಿಯ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆಯ ವರದಿಗಳ ಪ್ರಕಾರ ಸೋನಿಯಾ ಅವರು ಆರೋಗ್ಯವಂತರಾಗಿದ್ದಾರೆ ಎಂದು ತಿಳಿದುಬಂದಿದೆ.
76 ವರ್ಷದ ಸೋನಿಯಾ ಗಾಂಧಿ ಕಾಂಗ್ರೆಸ್ ನಾಯಕಿ (Sonia Gandhi) ಅವರ ಆರೋಗ್ಯದಲ್ಲಿ ಏರುಪೇರಾದ ಕಾರಣ ಗುರುವಾರ ಅವರನ್ನು ಆಸ್ಪತ್ರೆಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಆಸ್ಪತ್ರೆಯ ವಕ್ತಾರರು ತಿಳಿಸಿದ್ದಾರೆ.
ಸೋನಿಯಾ ಗಾಂಧಿ ಅವರನ್ನ ಆಸ್ಪತ್ರೆಯ ಹಿರಿಯ ವೈದ್ಯ ಅರೂಪ್ ಬಸು ಮತ್ತು ಅವರ ತಂಡದಿಂದ ಎದೆ ತಪಾಸಣೆ ನಡೆಸಲಾಗುತ್ತಿದೆ ಎಂದು ಸರ್ ಗಂಗಾ ರಾಮ್ ಆಸ್ಪತ್ರೆ ಸೊಸೈಟಿ ಟ್ರಸ್ಟ್ನ ಮುಖ್ಯಸ್ಥರಾದ ಡಿ.ಎಸ್ ರಾಣಾ ತಿಳಿಸಿದ್ದಾರೆ. ಸೋನಿಯಾ ಅವರು ಜ್ವರದಿಂದ ಬಳಲುತ್ತಿದ್ದಾರೆ ಎಂದೂ ಮಾಹಿತಿ ನೀಡಿದ್ದಾರೆ.
ಅವರನ್ನು ತೀವ್ರ ಆರೋಗ್ಯ ತಪಾಸಣೆಗೆ ಒಳಪಡಿಸಲಾಗಿದೆ. ಸದ್ಯಕ್ಕೆ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ತಿಳಿಸಿದೆ. ಕೇವಲ ಒಂದು ವರ್ಷದ ಒಳಗೆ ಸೋನಿಯಾ ಗಾಂಧಿ(Sonia Gandhi) ಕಾಂಗ್ರೆಸ್ ನಾಯಕಿ ಅವರು ಎರಡನೇ ಬಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜನವರಿಯಲ್ಲಿ ಸೋನಿಯಾ ಅವರಿಗೆ ಉಸಿರಾಟದ ತೊಂದರೆ ಕಂಡುಬಂದಿದ್ದರಿಂದ ಅವರನ್ನು ದೆಹಲಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಇದನ್ನೂ ಓದಿ: ಪೆಗಾಸಸ್ ಅವರ ಮನಸ್ಸಿನಲ್ಲಿದೆ… : ರಾಹುಲ್ ಗಾಂಧಿ ಆರೋಪದ ಬಗ್ಗೆ ಅನುರಾಗ್ ಕಿಡಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
Chhattisgarh: ನೀರಿನ ಬಾವೀಲಿ ಪೆಟ್ರೋಲ್: ಸಂಗ್ರಹಕ್ಕೆ ಮುಗಿಬಿದ್ದ ಜನ
MUST WATCH
ಹೊಸ ಸೇರ್ಪಡೆ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Re Release: ದರ್ಶನ್ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್ನತ್ತ ಸಂಗೊಳ್ಳಿ ರಾಯಣ್ಣ
BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್: ಆಸೀಸ್ ಸರಣಿಗೆ ತಂಡ ಸೇರಲಿದ್ದಾರೆ ಶಮಿ
Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.