ಗ್ಯಾಸ್ ಸ್ಫೋಟ: 13 ಜನಕ್ಕೆ ಗಾಯ
Team Udayavani, Mar 4, 2023, 1:20 PM IST
ಬೆಂಗಳೂರು: ರಾಜಾಜಿನಗರದ ಮರಿಯಪ್ಪನಪಾಳ್ಯದಲ್ಲಿ ಅನಿಲ ಸೋರಿಕೆಯಿಂದ ಉಂಟಾದ ಸ್ಫೋಟದಿಂದ 13 ಮಂದಿ ಗಾಯಗೊಂಡಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ.
ಅಜ್ಮಲ್ (46), ನಜೀಮ್ (42), ರಿಯಾನ್ (14), ಅದ್ನಾನ್ (12), ಫಯಾಜ್ (10), ಮೆಹರುನ್ನಿಸಾ (11), ಅಜಾನ್ (5) , ಜೈನಬ್ (8) ಅರ್ಮೀ ಜಾನ್ (52), ಶಬನಾಜ್ (18), ನಸೀಮಾ, (40), ಸಲ್ಮಾ (33) ಹಾಗೂ ರೇಷ್ಮಾ ಬಾನು (48) ಗಾಯಗೊಂಡವರು. 13 ಮಂದಿಯೂ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅಜ್ಮಲ್ ಮನೆಯಲ್ಲಿ ಕಾರ್ಯಕ್ರಮವಿತ್ತು. ಹೀಗಾಗಿ ಗುರುವಾರ ರಾತ್ರಿ ಅಡುಗೆ ಮಾಡಲಾಗಿತ್ತು. ಈ ವೇಳೆ ಸಿಲಿಂಡರ್ ಆಫ್ ಮಾಡುವುದನ್ನು ಮರೆತಿದ್ದರು. ಪರಿಣಾಮ ಗ್ಯಾಸ್ ಸಿಲಿಂಡರ್‌ನಿಂದ ಅನಿಲ ಸೋರಿಕೆಯಾಗಿತ್ತು. ಕುಟುಂಬದ ಸದಸ್ಯರು ಶುಕ್ರವಾರ ಬೆಳಿಗ್ಗೆ ಅಡುಗೆ ಮಾಡುವ ಉದ್ದೇಶದಿಂದ ಸ್ಟೌವ್ ಹಚ್ಚಲು ಮುಂದಾಗಿದ್ದರು. ಆ ವೇಳೆ ಏಕಾಏಕಿ ಸ್ಫೋಟ ಉಂಟಾಗಿದೆ. ಪರಿಣಾಮ ಕಟ್ಟಡದ ಗೋಡೆ, ಮೆಟ್ಟಿಲುಗಳು ಬಿರುಕು ಬಿಟ್ಟಿತ್ತು.
ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ದೌಡಾಯಿಸಿದ್ದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.