8ಕ್ಕೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಸಾಧ್ಯತೆ
Team Udayavani, Mar 4, 2023, 2:51 PM IST
ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲೂ ಮನೆ ಮನೆಗೂ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡ್ ವಿತರಿಸುವ ಕಾರ್ಯ ಶೀಘ್ರವಾಗಿ ಪ್ರಾರಂಬಿಸುವುದಾಗಿ ಎಐಸಿಸಿ ಕಾರ್ಯದರ್ಶಿ ಕರ್ನಾಟಕ ರಾಜ್ಯದ ಉಸ್ತುವಾರಿ ಅಭಿಷೇಕ್ ದತ್ ಜಿಲ್ಲಾ ಮುಖಂಡರಿಗೆ ತಾಕೀತು ಮಾಡಿದ್ದು, ಕಾರ್ಡ್‌ವಿತರಣೆ ಹಿನ್ನೆಲೆ ಅಭ್ಯರ್ಥಿ ಘೋಷಣೆ ಸಾಧ್ಯತೆ ದಟ್ಟವಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲಾ ಕಾಂಗ್ರೆಸ್ ಸಭೆ ನಡೆಸಿ ಮಾತನಾಡಿದ ಅವರು, ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಪ್ರಚಾರ ಕಾರ್ಯ ಪ್ರಾರಂಬಿಸಿ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ಮನೆಯ ಯಜಮಾನಿಗೆ ಗƒಹಲಕ್ಷ್ಮೀ ಯೋಜನೆ ಮೂಲಕ ಪ್ರತಿ ತಿಂಗಳು 2 ಸಾವಿರ, ಪ್ರತಿಮನೆಗೆ 200 ಯೂನಿಟ್ ಉಚಿತ ವಿದ್ಯುತ್ ಹಾಗೂ ಒಬ್ಬರಿಗೆ 10 ಕೆ.ಜಿ. ಅಕ್ಕಿ ಉಚಿತವಾಗಿ ನೀಡುವ ಗ್ಯಾರಂಟಿ ಕಾರ್ಡ್ ಮನೆಮನೆಗೂ ತಲುಪಿಸುವ ಕಾರ್ಯಕ್ಕೆ ಕೂಡಲೇ ಮುಂದಾಗಬೇಕು ಎಂದು ಜಿಲ್ಲಾ ಮುಖಂಡರಿಗೆ ಎಐಸಿಸಿ ಕಾರ್ಯದರ್ಶಿ ರಾಜ್ಯ ಉಸ್ತುವಾರಿ ಸೂಚನೆ ನೀಡಿದರು.
ಈ ವೇಳೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಉದಯಶಂಕರ್, ಮಂಚೇನಹಳ್ಳಿ ಬ್ಲಾಕ್ ಅಧ್ಯಕ್ಷ ರಾಮಕೃಷ್ಣ, ಜಂಗಮಕೋಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಎಂ.ಮುನಿಯಪ್ಪ, ಜಿಪಂ ಮಾಜಿ ಸದಸ್ಯ ಪ್ರಕಾಶ್, ಎಪಿಎಂಸಿ ಮಾಜಿ ನಿರ್ದೇಶಕ ಮೇಲೂರು ಮುರಳಿ, ದೊಗರನಾಯಕನಹಳ್ಳಿ ವೆಂಕಟೇಶ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಮೋಹನ್‌ರೆಡ್ಡಿ, ಶಿಡ್ಲಘಟ್ಟ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ, ಮುಖಂಡರಾದ ಹನುಮಂತಪ್ಪ, ಕಳವಾರ ಶ್ರೀಧರ್, ಕಿಸಾನ್ ಘಟಕದ ಅಧ್ಯಕ್ಷ ರಾಮಕೃಷ್ಣಪ್ಪ, ಕೊಂಡೇನಹಳ್ಳಿ ಚಂದ್ರಪ್ಪ ಇತರರಿದ್ದರು.
ಯಾರೇ ಅಭ್ಯರ್ಥಿಯಾದರೂ ಗೆಲುವಿಗೆ ಶ್ರಮಿಸಲು ಸಿದ್ಧ : ಕ್ಷೇತ್ರದ ಕಾಂಗ್ರೆಸ್ ಪಕ್ಷದ ಮುಖಂಡರಲ್ಲಿ ಭಿನ್ನಮತಗಳಿವೆ. ಕ್ಷೇತ್ರದಲ್ಲಿ ಟಿಕೆಟ್ ಕೇಳಿರುವ ಐದು ಜನರನ್ನು ಹೊರತುಪಡಿಸಿ ಹೊರಗಡೆಯಿಂದ ಕರೆತಂದ ಅಭ್ಯರ್ಥಿ ಕಡೆ ಒಲವು ತೋರಿಸುತ್ತಿರುವ ಕೆಲವರು ಒಡಕುಂಟು ಮಾಡುತ್ತಿದ್ದಾರೆ. ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಕೆಪಿಸಿಸಿ ಸದಸ್ಯ ಪುರದಗಡ್ಡೆ ಮುನೇಗೌಡ, ಹಾಗೇನು ನಮ್ಮ ಉದ್ದೇಶವಿಲ್ಲ. ಸ್ಥಳೀಯ ಅಭ್ಯರ್ಥಿಗಳ ಜತೆಗೆ ಅವರೊಬ್ಬರು ಇರಲಿ ಎನ್ನುವುದು ನಮ್ಮ ಉದ್ದೇಶವಾಗಿತ್ತು. ಏನೇ ಆದರೂ ಹೈಕಮಾಂಡ್ ಯಾರನ್ನು ಅಭ್ಯರ್ಥಿ ಮಾಡುತ್ತಾರೆ. ಅವರ ಪರ ಕೆಲಸ ಮಾಡುವುದು ನಿಜ ಪ್ರತ್ಯೇಕವಾಗಿ ನಾವು ಯಾರೂ ಸಭೆ ಮಾಡುವುದಾಗಲಿ ಇಂತಹವರೆ ಅಭ್ಯರ್ಥಿ ಆಗಬೇಕು ಎನ್ನುವ ಒತ್ತಾಯವನ್ನಾಗಲಿ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದರು.
ಮನೆ ಮನೆಗೆ ಗ್ಯಾರಂಟಿ ಕಾರ್ಡ್ ತಲುಪಿಸುವ ಕಾರ್ಯವನ್ನು ನಾಳೆಯಿಂದಲೆ(ಶನಿವಾರ) ಪ್ರಾರಂಬಿಸಲಾಗುವುದು. ಇದರ ಜತೆಗೆ ಬಹಿರಂಗ ಪ್ರಚಾರಕ್ಕೆ ನಗರಸಭೆಯಿಂದ ಅನುಮತಿ ಕೇಳಿದ್ದೇವೆ. ಗ್ರಾಮೀಣ ಬಾಗದಲ್ಲೂ ಪ್ರಚಾರ ಕೈಗೊಳ್ಳಲಾಗುವುದು. ಇನ್ನು ಇದೆ ತಿಂಗಳ 8 ರಂದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಘೋಷಣೆ ಮಾಡುವ ಸಂಭವವಿದೆ. -ಕಣಜೇನಹಳ್ಳಿ ಜಯರಾಮ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಹೊಸ ಸೇರ್ಪಡೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.