ರಾಶಿ ಫಲ: ತಾಳ್ಮೆಯಿಂದ ವ್ಯವಹರಿಸಿ, ಪರರಿಗೆ ಸಹಾಯ ಮಾಡುವಾಗ ಪೂರ್ವಾಪರ ವಿಚಾರ ಮಾಡಿ
Team Udayavani, Mar 5, 2023, 7:17 AM IST
ಮೇಷ: ಹೆಚ್ಚಿದ ಪರಿಶ್ರಮ. ಹಠ ಮಾಡದೇ ತಾಳ್ಮೆಯಿಂದ ಕಾರ್ಯ ಪ್ರವೃತ್ತರಾಗಿ. ದೂರದ ವ್ಯವಹಾರಗಳಿಂದ ಹೆಚ್ಚಿದ ವರಮಾನ. ಗುರುಹಿರಿಯರ ಮೇಲಾಧಿಕಾರಿಗಳ ಮಾರ್ಗದರ್ಶನ ಪಾಲಿಸುವುದರಿಂದ ಯಶಸ್ಸು ಲಭಿಸೀತು.
ವೃಷಭ: ಉದ್ಯೋಗ ವ್ಯವಹಾರಗಳಲ್ಲಿ ಉದಾರತೆ ತೋರುವುದರಿಂದ ಜನಮನ್ನಣೆ. ನಿರೀಕ್ಷಿತ ಸ್ಥಾನ ಸುಖ. ಯಶಸ್ಸು ಲಭಿಸಿದ ಮನಃತೃಪ್ತಿ. ದಾಂಪತ್ಯದಲ್ಲಿ ಪ್ರೀತಿ, ಅನುರಾಗ ವೃದ್ಧಿ. ದೀರ್ಘ ಪ್ರಯಾಣ ಸಂಭವ.
ಮಿಥುನ: ತಾಳ್ಮೆಯಿಂದ ವ್ಯವಹರಿಸಿ. ಆರೋಗ್ಯ ಗಮನಿಸಿ. ಪರರಿಗೆ ಸಹಾಯ ಮಾಡುವಾಗ ಪೂರ್ವಾಪರ ವಿಚಾರ ಮಾಡಿ. ಪಾಲುದಾರರು ಪರಸ್ಪರ ಪ್ರೋತ್ಸಾಹಿಸಿ ಕಾರ್ಯ ಸಾಧಿಸಿಕೊಳ್ಳಿ. ನಿರೀಕ್ಷಿತ ಧನಾಗಮ. ಧಾರ್ಮಿಕ ಕಾರ್ಯಗಳಿಗೆ ಧನವ್ಯಯ.
ಕರ್ಕ: ಉತ್ತಮ ಸ್ಥಾನಮಾನಕ್ಕಾಗಿ ಪ್ರಯತ್ನ. ಅಧ್ಯಯನದಲ್ಲಿ ತತ್ಪರತೆ. ಕುಟುಂಬಿಕರಲ್ಲಿ ತಾಳ್ಮೆ ಸಹನೆಯಿಂದ ವರ್ತಿಸಿ. ಪರಕಾರ್ಯದಲ್ಲಿ ಆಸಕ್ತಿ. ಹಣಕಾಸಿನ ವಿಚಾರದಲ್ಲಿ ಕೃಪಣತೆ ಮಾಡದಿರಿ. ಸಾಂಸಾರಿಕ ಸುಖ ಮಧ್ಯಮ.
ಸಿಂಹ: ಹಿರಿಯರಿಂದ ಸಂತೋಷ. ಗೃಹ ವಾಹನಾದಿ ವಿಚಾರಗಳಲ್ಲಿ ಮುನ್ನಡೆ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ಆರೋಗ್ಯ ಗಮನಿಸಿ. ಹಣಕಾಸಿನ ವಿಚಾರದಲ್ಲಿ ಆತುರದ ನಿರ್ಣಯದಿಂದ ನಷ್ಟ ಸಂಭವ.
ಕನ್ಯಾ: ಧೈರ್ಯ ಸಾಹಸ ಪರಾಕ್ರಮದಿಂದ ಕೂಡಿದ ಕಾರ್ಯ ವೈಖರಿ. ನಿರೀಕ್ಷೆಗೂ ಮೀರಿದ ಧನಾಗಮನ ಹಾಗೂ ವರಮಾನ. ದೂರದ ಮಿತ್ರರ ಭೇಟಿ. ಕೆಲಸ ಕಾರ್ಯಗಳಲ್ಲಿ ಗೌರವ ಪ್ರಾಪ್ತಿ. ಸಾಂಸಾರಿಕ ಸುಖ ತೃಪ್ತಿಕರ. ಗುರುಹಿರಿಯರ ಆರೋಗ್ಯ ಗಮನಿಸಿ.
ತುಲಾ: ಉದ್ಯೋಗ ವ್ಯವಹಾರದಲ್ಲಿ ಗಣನೀಯ ವೃದ್ಧಿ. ಕೀರ್ತಿ ಸಂಪಾದನೆ. ನಿರೀಕ್ಷೆಗೂ ಮೀರಿದ ಧನಾರ್ಜನೆ. ದೂರ ಪ್ರಯಾಣ ಸಂಭವ. ಆರೋಗ್ಯ ವೃದ್ಧಿ. ಆಸ್ತಿ ವಿಚಾರಗಳಲ್ಲಿ ಪ್ರಗತಿ. ಗುರುಹಿರಿಯರಿಂದ ಮನಃ ಸಂತೋಷ.
ವೃಶ್ಚಿಕ: ಆರೋಗ್ಯ ಗಮನಿಸಿ. ಉದ್ಯೋಗದಲ್ಲಿ ಪ್ರಗತಿ. ಪಾಲುದಾರಿಕಾ ವ್ಯವಹಾರದವರು ಚರ್ಚೆಗಳಿಗೆ ಆಸ್ಪದ ನೀಡದೇ ಇದ್ದರೆ ಅಭಿವೃದ್ಧಿ ಅವಕಾಶಗಳು ದೊರಕುವುದು. ಎಲ್ಲಾ ವಿಚಾರದಲ್ಲೂ ಜಾಗ್ರತೆಯ ನಡೆ ಅಗತ್ಯ.
ಧನು: ಪರಿಶ್ರಮ ಜವಾಬ್ದಾರಿಯಿಂದ ಕೂಡಿದ ಕಾರ್ಯ ವೈಖರಿ. ನಿರೀಕ್ಷಿತ ಗೌರವ ಸ್ಥಾನಮಾನ ಪ್ರಾಪ್ತಿ. ನೂತನ ಮಿತ್ರರ ಸಮಾಗಮ. ದಾಂಪತ್ಯ ಸುಖ ವೃದ್ಧಿ. ಅಧ್ಯಯನ ಪ್ರವೃತ್ತರಿಗೆ ಸರ್ವ ವಿಧದ ಸೌಲಭ್ಯ ಲಭ್ಯ. ಆರೋಗ್ಯ ಉತ್ತಮ.
ಮಕರ: ಆಸ್ತಿ ವಿಚಾರದಲ್ಲಿ ಬದಲಾವಣೆಗಳು ತೋರಿಬಂದಾವು. ಉದ್ಯೋಗ ವ್ಯವಹಾರ ಗಳಲ್ಲಿ ಮೇಲಾಧಿಕಾರಿಗಳ ಸಹಾಯ ಸಹಕಾರದಿಂದ ಪ್ರಗತಿ. ದೀರ್ಘ ಹಾಗೂ ಸಣ್ಣ ಪ್ರಯಾಣ ಸಂಭವ. ಆರ್ಥಿಕ ಸ್ಥಿತಿ ವೃದ್ಧಿದಾಯಕ. ಹಿರಿಯರ ಸೂಕ್ತ ಮಾರ್ಗದರ್ಶನ.
ಕುಂಭ: ಆರೋಗ್ಯ ಉತ್ತಮ. ದೇವತಾನುಗ್ರಹ ದಿಂದ ಕೂಡಿದ ದಿನ. ಎಲ್ಲ ಕೆಲಸ ಕಾರ್ಯಗಳಲ್ಲಿ ಸಫಲತೆ, ಶ್ರೇಯಸ್ಸು ತೋರಿಬರುವುವು. ದೂರದ ವ್ಯವಹಾರದಿಂದ ಧನ ವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ.
ಮೀನ: ಹೆಚ್ಚಿದ ಜವಾಬ್ದಾರಿ. ದೇಹಕ್ಕೆ ಆಯಾಸ ಆಗದಂತೆ ಕರ್ತವ್ಯ ನಿರ್ವಹಿಸಿ, ಆರೋಗ್ಯ ಗಮನಿಸಿಕೊಳ್ಳಿ. ಮಾತಿನಲ್ಲಿ ತಾಳ್ಮೆ ಸಹನೆ ಅಗತ್ಯ. ಆಸ್ತಿ ವಿಚಾರದಲ್ಲಿ ಪಾರದರ್ಶಕತೆಗೆ ಆದ್ಯತೆ ನೀಡಿ. ಮಕ್ಕಳಿಂದ ಸುಖ ಸಂತೋಷ. ದೇವತಾ ಸ್ಥಳ ಸಂದರ್ಶನ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ
Daily horoscope; ಇಂದಿನದು ಅದೃಷ್ಟದ ದಿನ ಎನ್ನಬಹುದು…
Daily Horoscope: ಮನಸ್ಸು ಚಂಚಲವಾಗಲು ಬಿಡದಿರಿ, ಉದ್ಯೋಗದಲ್ಲಿ ಭಿನ್ನ ರೀತಿಯ ಜವಾಬ್ದಾರಿಗಳು
Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ
MUST WATCH
ಹೊಸ ಸೇರ್ಪಡೆ
Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು
BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್ಐಟಿ ಭೇಟಿ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.