ಭಯ ಪಡಬೇಡಿ: ದಾಳಿ ವರದಿಗಳ ನಡುವೆ ವಲಸೆ ಕಾರ್ಮಿಕರಿಗೆ ತಮಿಳುನಾಡು ರಾಜ್ಯಪಾಲರ ಭರವಸೆ
Team Udayavani, Mar 5, 2023, 2:15 PM IST
ಚೆನ್ನೈ: ತಮಿಳುನಾಡು ರಾಜ್ಯದಲ್ಲಿ ವಲಸೆ ಕಾರ್ಮಿಕರ ಮೇಲೆ ಮಾರಣಾಂತಿಕ ದಾಳಿಯ ಬಗ್ಗೆ ತಪ್ಪು ವರದಿಗಳ ಮಧ್ಯೆ, ತಮಿಳುನಾಡು ರಾಜ್ಯಪಾಲ ಆರ್.ಎನ್. ರವಿ ಅವರು ರಾಜ್ಯದ ವಲಸೆ ಕಾರ್ಮಿಕರಿಗೆ ಭಯಪಡಬೇಡಿ, ಸ್ಥಳೀಯ ಜನರು ಒಳ್ಳೆಯವರು ಮತ್ತು ಸ್ನೇಹಪರರು ಎಂದು ಹೇಳಿದ್ದಾರೆ.
ಕಾರ್ಮಿಕರು ಭಯಪಡುವ ಅಗತ್ಯವಿಲ್ಲ ಎಂದು ರಾಜಭವನವು ತಮಿಳು, ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಪೋಸ್ಟ್ ಮಾಡಿದ ಟ್ವೀಟ್‌ಗಳಲ್ಲಿ ತಿಳಿಸಿದೆ.
ತಮಿಳುನಾಡಿನಲ್ಲಿರುವ ಉತ್ತರ ಭಾರತೀಯ ಕಾರ್ಮಿಕರು ಭಯಭೀತರಾಗಬೇಡಿ. ಯಾವುದೇ ಅಭದ್ರತೆಯನ್ನು ಅನುಭವಿಸಬೇಡಿ. ತಮಿಳುನಾಡಿನ ಜನರು ತುಂಬಾ ಒಳ್ಳೆಯವರು ಮತ್ತು ಸ್ನೇಹಪರರಾಗಿದ್ದಾರೆ. ನಿಮಗೆ ಭದ್ರತೆ ಒದಗಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ರಾಜಭವನ ತನ್ನ ಅಧಿಕೃತ ಟ್ವಿಟರ್ ಹ್ಯಾಂಡಲ್ ನಲ್ಲಿ ತಿಳಿಸಿದೆ.
ರಾಜ್ಯದ ಎಲ್ಲಾ ವಲಸೆ ಕಾರ್ಮಿಕರು ಸುರಕ್ಷಿತವಾಗಿದ್ದಾರೆ. ವದಂತಿಗಳನ್ನು ಹರಡಿದ್ದಕ್ಕಾಗಿ ಹಿಂದಿ ಪತ್ರಿಕೆಯ ಇಬ್ಬರು ಪತ್ರಕರ್ತರ ವಿರುದ್ಧ ಪೊಲೀಸರು ಪ್ರಕರಣಗಳನ್ನು ದಾಖಲಿಸಿದ್ದಾರೆ ಎಂದು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಶನಿವಾರ ಹೇಳಿದ್ದರು.
Governor urged the North Indian labourers in Tamil Nadu not to panic and feel insecure, as the people of Tamil Nadu are very nice and friendly, and the state government is committed to provide them security.@PMOIndia @HMOIndia @PIB_India @pibchennai @ANI @PTI_News
— RAJ BHAVAN, TAMIL NADU (@rajbhavan_tn) March 5, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…
Fog: ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನ, ರೈಲು ಸಂಚಾರದ ಮೇಲೆ ಪರಿಣಾಮ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.