ರಸ್ತೆಗೆ ಬಾಗಿದ ಮರದ ಕೊಂಬೆಗಳು
Team Udayavani, Mar 5, 2023, 4:06 PM IST
ಆಲೂರು: ತಾಲೂಕಿನ ಬೈರಾಪುರ ಗ್ರಾಮದಿಂದ ಮಗ್ಗೆ ಗ್ರಾಮ ಹಾಗೂ ಆಲೂರಿನಿಂದ ಕಾಮತಿ ಕೂಡಿಗೆ ಹೋಗುವ ರಸ್ತೆ ಇಕ್ಕೆಲಗಳಲ್ಲಿರುವ ಅಕೆಶ್ಯಾ ಮರಗಳ ಕೊಂಬೆಗಳು ರಸ್ತೆಗೆ ಬಾಗಿಕೊಂಡಿದ್ದು, ವಾಹನ ಹಾಗೂ ಪಾದಚಾರಿ ಸಂಚಾರಕ್ಕೆ ತೊಂದರೆ ಆಗುತ್ತಿದೆ.
ರಸ್ತೆಯಲ್ಲಿ ಓಡಾಡುವ ಸಾರ್ವಜನಿಕ ಪಾದಚಾರಿಗಳು ಮತ್ತು ವಾಹನ ಸವಾರರಿಗೆ ನೆರಳಿನ ಆಸರೆಯಾಗಲಿ ಎನ್ನುವ ಉದ್ದೇಶದಿಂದ 30 ವರ್ಷದ ಹಿಂದೆ ಅರಣ್ಯ ಇಲಾಖೆ ರಸ್ತೆಯ ಎರಡು ಬದಿಗಳಲ್ಲಿ ಹಾಕಿದ್ದ ಅಕೆಶ್ಯಾ ಮರಗಳು ದೊಡ್ಡದಾಗಿ ಹೆಮ್ಮರವಾಗಿ ಬೆಳೆದಿವೆ. ರಸ್ತೆಯ ತಿರುವುಗಳಲ್ಲಿ ಎದುರಿನಿಂದ ಬರುವ ವಾಹನಗಳು ಕಾಣಿಸದಿರುವುದರಿಂದ ಹೆಚ್ಚು ಅಪಘಾತಗಳು ಸಂಭವಿಸುತ್ತಿವೆ. ಇದರ ಜೊತೆಗೆ ಮಳೆ-ಗಾಳಿಗೆ ಮರಗಳು ವಾಹನ ಹಾಗೂ ವಾಹನ ಸವಾರರ ಮೇಲೆ ಬೀಳುವುದರಿಂದ ಅಪಾರ ನಷ್ಟ ಅನುಭವಿಸುತ್ತಿದ್ದಾರೆ.
ಜನಸಾಮಾನ್ಯರಿಗೆ ಕಿರಿಕಿರಿ: ಇದರಿಂದ ರಸ್ತೆಯಲ್ಲಿ ಓಡಾಡುವ ವಾಹನ ಸವಾರರು ಹಾಗೂ ಜನಸಾಮಾನ್ಯರು ಕಿರಿಕಿರಿ ಅನಿಭವಿಸುವಂತಾಗಿದೆ. ಅಕೆಶ್ಯಾ ಮರದ ಬೇರುಗಳು ಆಳವಾಗಿರದೇ ಮೇಲ್ಪದರದಲ್ಲಿ ಅಗಲವಾಗಿ ಬೆಳೆದಿರುವುದರಿಂದ ಸ್ವಲ್ಪ ಗಾಳಿ-ಮಳೆಯಾದರೂ ಮರಗಳು ನೆಲಕ್ಕೆ ಉರುಳುತ್ತವೆ. ಈ ರಸ್ತೆಯಲ್ಲಿ ಓಡಾಡುವ ಜನರು ಹಾಗೂ ವಾಹನಗಳು ಭಯದಿಂದ ಓಡಾಡದಂತಹ ಪರಿಸ್ಥಿತಿ ನಿರ್ಮಾಣ ಆಗುತ್ತಿದೆ.
ಜೀವ ಕೈಯಲ್ಲಿಡಿದು ಓಡಾಡುವಂತಹ ಸ್ಥಿತಿ: ರಸ್ತೆಯಲ್ಲಿ ಓಡಾಡುವ ಸಾವಿರಾರು ವಾಹನ ಹಾಗೂ ವಾಹನ ಸವಾರರು ಜೀವ ಕೈಯಲ್ಲಿಡಿದು ಓಡಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಮುಂಗಾರು ಮಳೆ ಪ್ರಾರಂಭವಾಗುವ ಮೊದಲು ಸಂಚಾರಕ್ಕೆ ಅಡ್ಡಿಯಾಗುವ ಮರಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂಬುದು ಸಾರ್ವಜನಿಕರ ಒತ್ತಾಯವಾಗಿದೆ.
ಸಾರ್ವಜನಿಕರ ಓಡಾಟಕ್ಕೆ ಅನುವು ಮಾಡಿ ಕೊಡಿ : ರಸ್ತೆಯಲ್ಲಿ ಸ್ವಲ್ಪ ಮಳೆ-ಗಾಳಿಯಾದರೂ ಮರಗಳು ನೆಲಕ್ಕೆ ಉರುಳುತ್ತವೆ. ಇದರಿಂದ ಸಾರ್ವಜನಿಕರು ಸಾಕಷ್ಟು ನಷ್ಟ ಅನುಭವಿಸುತ್ತಿದ್ದಾರೆ. ಆದ್ದರಿಂದ ಅರಣ್ಯ ಇಲಾಖೆಯವರು ರಸ್ತೆಗೆ ಬಾಗಿರುವ ಹಾಗೂ ಶಿಥಿಲವಾದ ಮರಗಳನ್ನು ತೆರವುಗೊಳಿಸಿ ವಾಹನ ಸುಗಮ ಸಂಚಾರಕ್ಕೆ ಹಾಗೂ ಪಾದಚಾರಿಗಳಿಗೆ ಓಡಾಡಲು ಅನುವು ಮಾಡಿಕೊಡಬೇಕು ಎಂದು ಗ್ರಾಮ ಪಂಚಾಯಿತಿ ಸದಸ್ಯ ಗಣೇಶ್ ಒತ್ತಾಯಿಸಿದರು.
ಶಿಥಿಲಗೊಂಡ ಹಳೆ ಮರ ತೆರವುಗೊಳಿಸಿ : ರಸ್ತೆಯ ಇಕ್ಕೆಲಗಳಲ್ಲಿರುವ ಕೆಲವು ಮರಗಳು ಶಿಥಿಲಗೊಂಡು ಒಣಗಿ ರಸ್ತೆಯಲ್ಲಿ ಓಡಾಡುವ ಪಾದಚಾರಿಗಳು ಹಾಗೂ ವಾಹನಗಳ ಮೇಲೆ ಬೀಳುವ ಸ್ಥಿತಿಯಲ್ಲಿವೆ. ಕೆಲವು ಮರಗಳು ರಸ್ತೆಗೆ ವಾಲಿಕೊಂಡಿದ್ದರೂ, ಸಂಬಂಧಪಟ್ಟವರು ಅವುಗಳನ್ನು ತೆಗೆಯಲು ಮುಂದಾಗುವುದಿಲ್ಲ. ಅನಾಹುತ ಆಗುವುದಕ್ಕಿಂತ ಮುಂಚೆ ಕ್ರಮ ಕೈಗೊಳ್ಳಬೇಕು ಎಂದು ಸಮಾಜ ಸೇವಕ ಎಂ.ಬಾಲಕೃಷ್ಣ ಆಗ್ರಹಿಸಿದರು.
ಬೈರಾಪುರ ಮಗ್ಗೆ ರಸ್ತೆಯಲ್ಲಿರುವ ಕೆಲವು ಅಕೆಶ್ಯಾ ಮರಗಳು ಅಪಾಯದಲ್ಲಿದ್ದು, ಬಾಗಿರುವ ಹಾಗೂ ಶಿಥಿಲವಾದ ಮರಗಳನ್ನು ತೆರವುಗೊಳಿಸಲು 200 ಮರ ಗುರುತಿಸಿ ನಂಬರ್ ಮಾಡಿ ಅನುಮೋದನೆಗಾಗಿ ಎಸಿಎಫ್ ಹಾಗೂ ಡಿಎಫ್ಒ ಕಚೇರಿಗೆ ಕಳುಹಿಸಲಾಗಿದೆ. ಅನುಮೋದನೆ ಸಿಕ್ಕ ನಂತರ ಅದಷ್ಟು ಬೇಗ ಮರಗಳನ್ನು ತೆರವುಗೊಳಿಸಲಾಗುವುದು. – ಎಚ್.ಕೆ. ಮರಿಸ್ವಾಮಿ, ಆರ್‌ಎಫ್ಒ, ಆಲೂರು ತಾಲೂಕು
-ಟಿ.ಕೆ.ಕುಮಾರಸ್ವಾಮಿ ಟಿ.ತಿಮ್ಮನಹಳ್ಳಿ,
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.