![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Mar 6, 2023, 10:44 AM IST
ಮುಂಬಯಿ: ಬಾಲಿವುಡ್ ನಟಿ, ಬಿಜೆಪಿ ನಾಯಕಿ ಖುಷ್ಬು ಸುಂದರ್ ಇತ್ತೀಚೆಗೆ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯರಾಗಿ ನಾಮನಿರ್ದೇಶನಗೊಂಡಿದ್ದಾರೆ. ಬಾಲ್ಯದಲ್ಲಾದ ಕರಾಳ ಘಟನೆಯ ಬಗ್ಗೆ ಮಾಧ್ಯಮವೊಂದರ ಜೊತೆ ನಟಿ ಖುಷ್ಬು ಮಾತನಾಡಿದ್ದಾರೆ.
ನಾನು ಬಾಲ್ಯದಲ್ಲಿರುವಾಗಲೇ ನನ್ನ ತಂದೆಯಿಂದಲೇ ದೌರ್ಜನ್ಯಕ್ಕೆ ಒಳಗಾಗಿದ್ದೆ. ನನ್ನ ತಾಯಿ ಮೇಲೆ ತಂದೆ ಪ್ರತಿನಿತ್ಯ ದೌರ್ಜನ್ಯವೆಸಗುತ್ತಿದ್ದರು. ನನ್ನ ಬಾಲ್ಯ ದೌರ್ಜನ್ಯದ ದಿನಗಳಿಂದ ಕಳೆಯಿತು. ನಾನು 8 ವರ್ಷದವಳಿದ್ದಾಗ ನನ್ನ ತಂದೆಯೇ ನನ್ನ ಮೇಲೆ ಲೈಂಗಿಕವಾಗಿ ದೌರ್ಜನ್ಯವನ್ನು ಎಸೆಗುತ್ತಿದ್ದರು ಎಂದು ಕರಾಳ ದಿನದ ಬಗ್ಗೆ ಮಾತನಾಡಿದ್ದಾರೆ.
ನನ್ನ ಮೇಲೆ ಏನಾಗುತ್ತಿದೆ ಎನ್ನುವುದನ್ನು ಅರ್ಥ ಮಾಡಿಕೊಳ್ಳವುದು ಬಹುಶಃ ನನ್ನ ತಾಯಿಗೂ ಸಾಧ್ಯವಾಗಿಲ್ಲ. ಏಕೆಂದರೆ ನನ್ನ ತಾಯಿ ಆತನ ಪತಿ ಏನೇ ಮಾಡಿದರೂ ಆತನೇ ತನ್ನ ಪರಮ ಧೈವ ಎನ್ನುವ ಮನಸ್ಥಿತಿಯ ವಾತಾವರಣದಲ್ಲಿ ಬೆಳೆದವರು. ನನಗೆ 15 ವರ್ಷವಾದಾಗ ನನ್ನ ತಂದೆಯ ಕ್ರೌರ್ಯತೆ ವಿರುದ್ಧ ನಾನು ಧ್ವನಿ ಎತ್ತಿದೆ. ನನಗೆ 16 ವರ್ಷವೂ ಆಗಿರಲಿಲ್ಲ ತಂದೆ ನಮ್ಮನ್ನು ಬಿಟ್ಟು ಹೋದರು. ಮುಂದಿನ ಊಟ ಎಲ್ಲಿಂದ ಬರುತ್ತದೆ ಎನ್ನುವುದು ಆ ವೇಳೆಗೆ ನಮಗೆ ಗೊತ್ತಿರಲಿಲ್ಲ ಎಂದು ನಟಿ ಹೇಳಿದರು.
ನಟಿ, ನಿರೂಪಕಿ, ನಿರ್ಮಾಪಕಿಯಾಗಿ ಬಣ್ಣದ ಲೋಕದಲ್ಲಿ ಮಿಂಚಿದ ಖುಷ್ಬು 2010 ರಲ್ಲಿ ಡಿಎಂಕೆ ಪಕ್ಷಕ್ಕೆ ಸೇರಿ ರಾಜಕೀಯ ಯಾನವನ್ನು ಆರಂಭಿಸಿದರು. ಆ ಬಳಿಕ ಕಾಂಗ್ರೆಸ್ ಸೇರಿ 2021 ರಲ್ಲಿ ತಮಿಳುನಾಡು ವಿಧಾನ ಸಭೆಯಿಂದ ಬಿಜೆಪಿಯಿಂದ ಸ್ಪರ್ಧಿಸಿ ಸೋತಿದ್ದರು. ಸದ್ಯ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯರಾಗಿ ಕರ್ತವ್ಯ ನಿಭಾಯಿಸುತ್ತಿದ್ದಾರೆ.
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.