![Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು](https://www.udayavani.com/wp-content/uploads/2024/12/mumbai4-415x234.jpg)
ನಾನೇ ಲೋಕಾಯುಕ್ತ ಬಂದ್ ಮಾಡಿದ್ದರೆ ಇವತ್ತೇ ರಾಜೀನಾಮೆ ಕೊಡುತ್ತೇನೆ: ಸಿದ್ದರಾಮಯ್ಯ
Team Udayavani, Mar 6, 2023, 12:27 PM IST
![ನಾನೇ ಲೋಕಾಯುಕ್ತ ಬಂದ್ ಮಾಡಿದ್ದರೆ ಇವತ್ತೇ ರಾಜೀನಾಮೆ ಕೊಡುತ್ತೇನೆ: ಸಿದ್ದರಾಮಯ್ಯ](https://www.udayavani.com/wp-content/uploads/2023/03/sidda-1-620x342.jpg)
ಮೈಸೂರು: ನಾನು ಲೋಕಾಯುಕ್ತ ಬಂದ್ ಮಾಡಿಲ್ಲ. ನಾನು ಲೋಕಾಯುಕ್ತ ಬಂದ್ ಮಾಡಿದ್ದರೆ ಇವತ್ತೇ ರಾಜೀನಾಮೆ ಕೊಡುತ್ತೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ನಾವು ಭ್ರಷ್ಟಾಚಾರ ನಿಗ್ರಹಕ್ಕೆ ಎಸಿಬಿ ರಚನೆ ಮಾಡಿದ್ದೆವು. ನಾವು ಲೋಕಾಯುಕ್ತದ ಯಾವ ಅಧಿಕಾರವನ್ನೂ ಕಿತ್ತುಕೊಂಡಿಲ್ಲ. ನಮ್ಮ ಕಾಲದಲ್ಲೂ ಲೋಕಾಯುಕ್ತ ಇದ್ದರು. ಎಲ್ಲಾ ಸತ್ಯ ಗೊತ್ತಿದ್ದರು ಬೊಮ್ಮಾಯಿ ಸುಳ್ಳು ಹೇಳುತ್ತಿದ್ದಾರೆ. ಎಸಿಬಿ ರದ್ದು ಮಾಡುತ್ತೇವೆ ಎಂದು ಬಿಜೆಪಿ ಪ್ರಣಾಳಿಕೆಯಲ್ಲಿ ಹೇಳಿತ್ತು. ಆದರೆ ಎಸಿಬಿ ರದ್ದು ಮಾಡಿದ್ದು ಬಿಜೆಪಿ ಸರ್ಕಾರವಲ್ಲ. ನ್ಯಾಯಾಲಯ ಎಸಿಬಿ ರದ್ದು ಮಾಡಿದ್ದು. ಬಿಜೆಪಿಯವರಿಗೆ ಸುಳ್ಳು ಹೇಳುವುದು ಚಟ. ಸುಳ್ಳೆ ಬಿಜೆಪಿ ಮನೆದೇವ್ರು. ಹೀಗಾಗಿ ಲೋಕಾಯುಕ್ತ ವಿಚಾರದಲ್ಲಿ ಬಿಜೆಪಿಯವರು ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ ಎಂದು ಕುಟುಕಿದರು.
ಮಾಡಾಳ್ ವಿರೂಪಾಕ್ಷಪ್ಪನನ್ನು ಸರ್ಕಾರವೇ ರಕ್ಷಣೆ ಮಾಡುತ್ತಿದೆ. ವಿರೂಪಾಕ್ಷ ಎಲ್ಲಿದ್ದಾನೆಂದು ಸರ್ಕಾರಕ್ಕೆ ಗೊತ್ತಿದೆ. ಅವನು ಅವನ ಮನೆಯಲ್ಲೇ ಓಡಾಡಿಕೊಂಡಿದ್ದಾನೆ. ಅವನನ್ನು ಬಂಧಿಸದೆ ಇವರು ನಾಟಕ ಮಾಡುತ್ತಿದ್ದಾರೆ. ಲುಕ್ಔಟ್ ನೋಟೀಸ್ ಹೆಸರಿನಲ್ಲಿ ಜನರ ಗಮನ ಬೇರೆಡೆ ಸೆಳೆಯುತ್ತಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಲು ಬಂದಾಗಲೇ ಅವನನ್ನು ಯಾಕೆ ಬಂಧಿಸಲಿಲ್ಲ ಎಂದು ಪ್ರಶ್ನಿಸಿದರು.
ದಶಪಥ ಮಾಡಿದ್ದು ನಾವು!
ಸಿದ್ದರಾಮಯ್ಯ ಅವರು ಮೈಸೂರು- ಬೆಂಗಳೂರು ದಶಪಥ ರಸ್ತೆ ಪರಿಶೀಲನೆಗೆ ಮುಂದಾಗಿದ್ದು, ಇದರ ಕ್ರೆಡಿಟ್ ನಮಗೆ ಸಲ್ಲಬೇಕು ಎಂದಿದ್ದಾರೆ.
ಇದನ್ನೂ ಓದಿ:ಟಾಲಿವುಡ್‌ಗೆ ಶ್ರೀದೇವಿ ಪುತ್ರಿ ಜಾಹ್ನವಿ ಎಂಟ್ರಿ: ಹುಟ್ಟು ಹಬ್ಬಕ್ಕೆ ಫಸ್ಟ್ ಲುಕ್ ರಿಲೀಸ್
ಮಾರ್ಚ್ 9 ರಂದು ಬೆಂಗಳೂರು ಮೈಸೂರು ಹೈವೆ ಪರಿಶೀಲನೆ ನಡೆಸುತ್ತೇನೆ. ಆ ರಸ್ತೆಯ ಕ್ರೆಡಿಟ್ ನಮ್ಮ ಸರ್ಕಾರಕ್ಕೆ ಸಲ್ಲಬೇಕು. ಪ್ರತಾಪ ಸಿಂಹನದಾಗಲಿ ಬಿಜೆಪಿ ಸರ್ಕಾರದಾಗಲಿ ಯಾವ ಪಾತ್ರವೂ ಇಲ್ಲ. ಪ್ರತಾಪ ಸಿಂಹ ಲೋಕಸಭಾ ವ್ಯಾಪ್ತಿಗೆ ಕೆಲವೇ ಕಿ.ಮೀ ಮಾತ್ರ ಸೇರುತ್ತದೆ. ಆದರೂ ನಮ್ಮದು ಎಂದು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಮಹದೇವಪ್ಪನಿಗೆ ಈ ರಸ್ತೆಯ ಎಲ್ಲಾ ಮಾಹಿತಿಯೂ ಗೊತ್ತಿದೆ. ಮಹದೇವಪ್ಪ ಮುಂದೆ ನಿಂತು ಈ ರಸ್ತೆ ಮಾಡಿಸಿದ ಎಂದು ಸಿದ್ದರಾಮಯ್ಯ ಹೇಳಿದರು.
ಟಾಪ್ ನ್ಯೂಸ್
![Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು](https://www.udayavani.com/wp-content/uploads/2024/12/mumbai4-415x234.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ](https://www.udayavani.com/wp-content/uploads/2024/12/sid-1-150x87.jpg)
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
![Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ](https://www.udayavani.com/wp-content/uploads/2024/12/chennagiri-150x87.jpg)
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
![BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ](https://www.udayavani.com/wp-content/uploads/2024/12/3-34-150x90.jpg)
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
![BGV-CM-SS](https://www.udayavani.com/wp-content/uploads/2024/12/BGV-CM-SS-150x90.jpg)
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
![Ashok-Vijayendra](https://www.udayavani.com/wp-content/uploads/2024/12/Ashok-Vijayendra-150x90.jpg)
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
MUST WATCH
ಹೊಸ ಸೇರ್ಪಡೆ
![11-](https://www.udayavani.com/wp-content/uploads/2024/12/11-1-5-150x90.jpg)
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
![10-tumkur](https://www.udayavani.com/wp-content/uploads/2024/12/10-tumkur-150x90.jpg)
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
![Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು](https://www.udayavani.com/wp-content/uploads/2024/12/mumbai4-150x84.jpg)
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
![Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ](https://www.udayavani.com/wp-content/uploads/2024/12/chik-150x87.jpg)
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
![9](https://www.udayavani.com/wp-content/uploads/2024/12/9-26-150x80.jpg)
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.