ಮೊಸರು, ತುಪ್ಪ, ಪೌಡರ್ ಉತ್ಪಾದನೆಗೆ ಹಾಲು ಇಲ್ಲ
Team Udayavani, Mar 8, 2023, 1:19 PM IST
ಬೆಂಗಳೂರು: ಬೆಂಗಳೂರು ಹಾಲು ಉತ್ಪಾದಕರ ಒಕ್ಕೂಟ (ಬಮೂಲ್)ದಲ್ಲಿ ದಿನೇ ದಿನೆ ಹಾಲು ಉತ್ಪಾದನೆಯಲ್ಲಿ ಇಳಿಕೆ ಕಂಡು ಬಂದಿದೆ. ಆ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಚೀಸ್, ತುಪ್ಪ, ಪೌಡರ್, ಪನ್ನೀರು ಮತ್ತಿತರರ ಹಾಲಿನ ಉತ್ಪನ್ನಗಳ ತಯಾರಿಕೆಗೆ ಕೊರತೆ ಉಂಟಾಗುವ ಆತಂಕ ಎದುರಾಗಿದೆ.
ಕಳೆದ ವರ್ಷ ಮಾರ್ಚ್‌ನಲ್ಲಿ ನಿತ್ಯ 15 ಲಕ್ಷ ಲೀಟರ್ ಹಾಲು ಪೂರೈಕೆ ಆಗುತ್ತಿತ್ತು. ಆದರೆ ಈ ವರ್ಷ ಈ ಪ್ರಮಾಣ 3 ಲಕ್ಷ ಲೀಟರ್‌ಗೆ ಇಳಿಕೆಯಾಗಿದೆ. ಪರಿಸ್ಥಿತಿ ಹೀಗೆ ಮುಂದುವರಿದರೆ 11 ರಿಂದ 12 ಲಕ್ಷ ರೂ. ಲೀಟರ್‌ಗೆ ಇಳಿಕೆ ಆಗುವ ಸಾಧ್ಯತೆ ಇದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹಾಲು, ಮೊಸರು ಸೇರಿದಂತೆ ಪ್ರತಿದಿನ 12.5 ಲಕ್ಷ ಲೀಟರ್ ಹಾಲಿನ ಬೇಡಿಕೆ ಇದೆ. ಆದರೆ ಸದ್ಯದ ಪರಿಸ್ಥಿತಿಯಲ್ಲಿ 13 ಲಕ್ಷ ಲೀಟರ್ ಹಾಲು ಪೂರೈಸಲಾಗುತ್ತಿದೆ. ಉಳಿದ ಕೇವಲ 50 ಸಾವಿರ ಲೀಟರ್ ಹಾಲನ್ನು ಚೀಸ್, ತುಪ್ಪ ಹಾಲಿ ಪೌಡರ್ ಮತ್ತಿತರರ ಹಾಲಿನ ಪದಾರ್ಥಗಳಿಗೆ ತಯಾರಿಕೆಗೆ ಬಳಸಲಾಗುತ್ತಿದೆ. ಬೆಂಗಳೂರಿಗೆ ಒಟ್ಟಾರೆ 15 ಲಕ್ಷ ಲೀಟರ್ ಹಾಲಿನ ಬೇಡಿಕೆ ಇದೆ. ಆದರೆ ಅಷ್ಟು ಪ್ರಮಾಣದ ಹಾಲನ್ನು ಉತ್ಪಾದಿಸಲು ಆಗುತ್ತಿಲ್ಲ ಎಂದು ಬಮೂಲ್ ಅಧಿಕಾರಿಗಳು ಮಾಹಿತಿ ನೀಡುತ್ತಾರೆ.
ಜೂನ್‌ನಲ್ಲಿ 18 ಲಕ್ಷ ಲೀಟರ್: 2022ರ ಜೂನ್-ಜುಲೈನಲ್ಲಿ ಬಮೂಲ್ 18 ಲಕ್ಷ ಲೀಟರ್ ಹಾಲು ಉತ್ಪಾದಿಸುತ್ತಿತ್ತು. ಡಿಸೆಂಬರ್ ಅಂತ್ಯದ ವೇಳೆಗೆ ಅದು 15 ಲಕ್ಷ ಲೀಟರ್‌ಗೆ ತಲುಪಿತ್ತು. ಕಳೆದ ಜನವರಿಯಲ್ಲಿ 14 ಲಕ್ಷ ಲೀಟರ್ ಹಾಲು ಪೂರೈಕೆ ಆಗಿತ್ತು. ಫೆಬ್ರವರಿ 13 ಲಕ್ಷ ರೂ.ಗೆ ಇಳಿಕೆ ಕಂಡು ಬಂದಿದೆ. ಪರಿಸ್ಥಿತಿ ಹೀಗೆ ಮುಂದುವರಿದರೆ ಬೇಸಿಗೆ ಕಾಲ ಪೂರ್ತಿ ಹಾಲಿ ಉತ್ಪಾದನೆಯಲ್ಲಿ ಇಳಿಕೆ ಆಗಬುಹುದು ಎಂದು ಬೆಮೂಲ್ ಅಧಿಕಾರಿಗಳು ಹೇಳುತ್ತಾರೆ. ಬೆಂಗಳೂರು ಹಾಲು ಉತ್ಪಾದಕರ ಒಕ್ಕೂಟ ವ್ಯಾಪ್ತಿಯಲ್ಲಿ 1.5 ಲಕ್ಷ ಹಾಲು ಉತ್ಪಾದಕರು ಇದ್ದಾರೆ. ಇದರಲ್ಲಿ ಮಹಿಳೆಯರು ಸೇರಿದ್ದಾರೆ. ರೈತರು ಹೈನುಗಾರಿಕೆಯನ್ನು ತ್ಯಜಿಸುವ ಪ್ರವೃತ್ತಿ ಹೆಚ್ಚಾಗುತ್ತಿರುವುದರಿಂದ ಹಾಲಿನ ಉತ್ಪಾದನೆ ಕಡಿಮೆಯಾಗಲಿದೆ. ಪರಿಸ್ಥಿತಿ ಹೀಗೆ ಮುಂದುವರಿದರೆ ಮುಂದಿನ ದಿನಗಳಲ್ಲಿ ಹಾಲಿನ ಪೂರೈಕೆಯಲ್ಲಿ ಕೊರತೆ ಎದುರಾಗುವ ಆತಂಕವಿದೆ ಎನ್ನುತ್ತಾರೆ.
ಹಾಲು ಉತ್ಪಾದನೆಯಲ್ಲಿ ಇಳಿಕೆ ಏಕೆ? : ಹಸುಗಳ ಆಹಾರ ಪದಾರ್ಥ, ಹಸಿ ಹುಲ್ಲಿನ ದರ ಏರಿಕೆಯಾಗಿದೆ. ಭಾರೀ ಮಳೆ ಹಿನ್ನೆಲೆಯಲ್ಲಿ ಈ ಹಿಂದೆ ರಾಗಿ ಹುಲ್ಲು ನಾಶವಾಗಿದ್ದು ಅದು ಕೂಡ ದೊರೆಯುತ್ತಿಲ್ಲ. ಹೀಗಾಗಿ ರೈತರಿಗೆ ಹಸು ಸಾಕುವುದು ದುಬಾರಿಯಾಗಿದೆ. ಬೆಂಗಳೂರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೆಲವು ರೈತರು ಹಸುಗಳನ್ನು ಮಾರಾಟ ಮಾಡುವ ಪರಿಸ್ಥಿತಿ ಉಂಟಾಗಿದೆ ಎಂದು ಬಮೂಲ್ ಅಧ್ಯಕ್ಷ ನರಸಿಂಹ ಮೂರ್ತಿ ಹೇಳುತ್ತಾರೆ. ನೆರೆಯ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದ ರೈತರಿಗೆ ಕಡಿಮೆ ಬೆಲೆ ಪಾವತಿಸಲಾಗುತ್ತಿದೆ. ಆಂಧ್ರಪ್ರದೇಶ, ತಮಿಳುನಾಡು ಸೇರಿದಂತೆ ನೆರೆ ರಾಜ್ಯಗಳು ರೈತರಿಗೆ 40 ರೂ.ಗಳನ್ನು ರೈತರಿಗೆ ನೀಡುತ್ತಿವೆ. ಆದರೆ, ರಾಜ್ಯ ಸರ್ಕಾರ 30 ರೂ. ಪಾವತಿಸುತ್ತಿದೆ. ಇದು ರೈತರ ವೆಚ್ಚವನ್ನು ಭರಿಸುವುದಿಲ್ಲ.
ಹೀಗಾಗಿ ಪ್ರತಿ ತಿಂಗಳು 15-20 ರೈತರು ನಮಗೆ ಹಾಲು ಮಾರಾಟ ಮಾಡುವುದನ್ನು ನಿಲ್ಲಿಸುತ್ತಿದ್ದಾರೆ ಎಂದು ತಿಳಿಸುತ್ತಾರೆ.
ಹೆಚ್ಚುತ್ತಿರುವ ಪಶು ಆಹಾರದ ಬೆಲೆ ನಿಭಾಯಿಸಲು ಸಾಧ್ಯವಾಗದೆ ಅನೇಕ ರೈತರು ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು ಮತ್ತು ಮಹಾರಾಷ್ಟ್ರದ ತಮ್ಮ ಸಹವರ್ತಿಗಳಿಗೆ ಜಾನುವಾರುಗಳನ್ನು ಮಾರಾಟ ಮಾಡುತ್ತಿದ್ದಾರೆ. ಆ ಹಿನ್ನೆಲೆಯಲ್ಲಿ ಬಮೂಲ್‌ನಲ್ಲಿ ಹಾಲು ಉತ್ಪಾದನೆ ಕಡಿಮೆ ಆಗಿದೆ. ಮಳೆಗಾಲದವರೆಗೂ ಇದೇ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆ ಇದೆ. -ನರಸಿಂಹಮೂರ್ತಿ, ಬಮೂಲ್ ಅಧ್ಯಕ್ಷ
-ದೇವೇಶ ಸೂರಗುಪ್ಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್ʼ ಸರ್‌ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ
Subrahmanya: ಕುಕ್ಕೆ ಜಾತ್ರೆ ನೋಡಲು ಬರುತ್ತವೆ ದೇವರ ಮೀನುಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.