ರಾಜ್ಯದಲ್ಲಿ 12 ಸಾವಿರ ಸ್ವಾಮಿ ವಿವೇಕಾನಂದ ಯುವ ಸ್ವಸಹಾಯ ಗುಂಪುಗಳ ರಚನೆಗೆ ಆದೇಶ
Team Udayavani, Mar 10, 2023, 12:10 PM IST
ಬೆಂಗಳೂರು: ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತಲಾ ಎರಡು ಸ್ವಾಮಿ ವಿವೇಕಾನಂದ ಸ್ವಸಹಾಯ ಗುಂಪುಗಳ ರಚನೆಗೆ ಆದೇಶ ಹೊರಡಿಸಲಾಗಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದ್ದಾರೆ.
ರಾಜ್ಯದ ಪ್ರತಿ ಗ್ರಾಮ ಪಂಚಾಯತ್‌ನಲ್ಲಿ ಸ್ವಾಮಿ ವಿವೇಕಾನಂದರ ಹೆಸರಿನಲ್ಲಿ ಯುವ ಸ್ವಸಹಾಯ ಸಂಘ ಸ್ಥಾಪಿಸಿ, ಸ್ವಯಂ ಉದ್ಯೋಗ ಕೈಗೊಳ್ಳುವುದಕ್ಕೆ ನೆರವು ನೀಡಲು ಈಗಾಗಲೇ ಆದೇಶ ಹೊರಡಿಸಲಾಗಿದೆ. ಮೊದಲು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಒಂದು ಗುಂಪಿನಂತೆ 6000 ಗುಂಪುಗಳನ್ನು ರಚಿಸಲು ಆದೇಶಿಸಲಾಗಿತ್ತು. ಸ್ವಾಮಿ ವಿವೇಕಾನಂದ ಯುವ ಸ್ವಸಹಾಯ ಗುಂಪುಗಳ ರಚನೆಗೆ ಉತ್ತಮ ಸ್ಪಂದನೆ ಸಿಕ್ಕಿದ್ದರಿಂದ ಪ್ರತಿ ಪಂಚಾಯತ್ ಗೆ ಎರಡರಂತೆ 12 ಸಾವಿರ ಗುಂಪುಗಳನ್ನು ರಚಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಿಸಿದ್ದರು. ಅದರಂತೆ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.
ಪ್ರತಿ ಗುಂಪಿಗೆ 10 ಸಾವಿರ ರೂಪಾಯಿ ಸುತ್ತುನಿಧಿ, ಒಂದು ಲಕ್ಷ ಸಬ್ಸಿಡಿಯೊಂದಿಗೆ ಐದು ಲಕ್ಷ ರೂಪಾಯಿ ಸಾಲ ಸೌಲಭ್ಯ ಒದಗಿಸಲಾಗುತ್ತಿದೆ. ಸ್ಥಳೀಯ ಬೇಡಿಕೆಯನ್ನಾಧರಿಸಿ ಎಲ್ಲಾ ಸ್ವಸಹಾಯಗಳ ಕಾರ್ಯಚಟುವಟಿಕೆ ಆರಂಭಿಸಿ 12 ಸಾವಿರ ಯುವ ಸಂಘಗಳನ್ನು ನವೋದ್ಯಮಗಳಾಗಿ ಪರಿವರ್ತಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಇದರಿಂದ ರಾಜ್ಯದಲ್ಲಿ 5 ಲಕ್ಷಕ್ಕೂ ಅಧಿಕ ಯುವಕರು ಸ್ವಾವಲಂಬಿಯಾಗಿ ಬದುಕು ಕಟ್ಟಿಕೊಳ್ಳಲು ನೆರವಾಗುತ್ತದೆ. ಈ ಯೋಜನೆಯನ್ನು ನಮ್ಮ ಇಲಾಖೆ ನೇತೃತ್ವದಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳಿಸಿ ಯುವಕರ ಸಬಲೀಕರಣಕ್ಕೆ ಒತ್ತು ನೀಡಲಾಗುತ್ತದೆ. ಮುಂದಿನ ದಿನಗಳಲ್ಲಿ ಪ್ರತಿ ಗ್ರಾಮಕ್ಕೆ ಒಂದರಂತೆ ಸುಮಾರು 28 ಸಾವಿರ ಸ್ವಾಮಿ ವಿವೇಕಾನಂದ ಯುವ ಸ್ವಸಹಾಯ ಗುಂಪುಗಳನ್ನು ರಚಿಸುವ ಗುರಿ ಹೊಂದಲಾಗಿದೆ ಎಂದು ಸಚಿವ ಡಾ.ನಾರಾಯಣಗೌಡ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
MUST WATCH
ಹೊಸ ಸೇರ್ಪಡೆ
Hydarabad: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಏನೇನಿದೆ ಮಾರ್ಗಸೂಚಿಯಲ್ಲಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.