ಮಸ್ಕಿಯಲ್ಲಿ ಕೇಸರಿ ಕಹಳೆ ಮೊಳಗಿಸಲು ರೆಡಿ

ವಿಜಯ ಸಂಕಲ್ಪ ಯಾತ್ರೆ ಕಾರ್ಯಕ್ರಮಕ್ಕೆ ಭರದ ಸಿದ್ಧತೆ : 30 ಸಾವಿರಕ್ಕೂ ಹೆಚ್ಚು ಜನ ಸೇರಿಸುವ ನಿರೀಕ್ಷೆ

Team Udayavani, Mar 10, 2023, 2:31 PM IST

bjp logo

ಮಸ್ಕಿ: ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ದಿನಗಣನೆ ಹಿನ್ನೆಲೆಯಲ್ಲಿ ಮಸ್ಕಿಯಲ್ಲೂ ರಾಜಕೀಯ ಚಟುವಟಿಕೆ ರಂಗು ಪಡೆದಿವೆ. ರಾಜ್ಯ ಬಿಜೆಪಿ ಕೈಗೊಂಡ ವಿಜಯ ಸಂಕಲ್ಪ ಯಾತ್ರೆ ಮಾ.11ರಂದು ಮಸ್ಕಿಗೆ ಆಗಮಿಸುತ್ತಿದ್ದು, ಬೃಹತ್‌ ಶಕ್ತಿ ಪ್ರದರ್ಶನಕ್ಕೆ ಇಲ್ಲಿನ ಕೇಸರಿ ಪಡೆ ಸಜ್ಜಾಗಿದೆ. 2008ರ ಕ್ಷೇತ್ರ ಮರುವಿಂಗಣೆಯಿಂದಾಗಿ ಅಸ್ತಿತ್ವಕ್ಕೆ ಬಂದ ಮಸ್ಕಿ ಎಸ್ಟಿ ಮೀಸಲು ವಿಧಾನಸಭಾ ಕ್ಷೇತ್ರ ಒಂದು ಉಪಚುನಾವಣೆ ಸೇರಿ ಇದುವರೆಗೆ ಒಟ್ಟು ನಾಲ್ಕು ಚುನಾವಣೆಗಳನ್ನು ಕಂಡಿದೆ. ಈ ಬಾರಿ ಐದನೇ ಚುನಾವಣೆ ಎದುರಿಸಲು ಸಜ್ಜಾಗಿದ್ದು, ಚುನಾವಣೆಗೆ ಸ್ಪರ್ಧೆ ಬಯಸಿದ ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌ನ
ಆಕಾಂಕ್ಷಿಗಳು ಕಾಲಿಗೆ ಚಕ್ರ ಕಟ್ಟಿಕೊಂಡು ಕ್ಷೇತ್ರ ಪರ್ಯಟನೆಯಲ್ಲಿದ್ದಾರೆ. ಈಗ ಒಂದು ಹೆಜ್ಜೆ ಮುಂದೆ ಹೋಗಿರುವ ಬಿಜೆಪಿ ಬೃಹತ್‌ ಶಕ್ತಿ ಪ್ರದರ್ಶನದ ಮೂಲಕ ಚುನಾವಣೆ ರಣಕಹಳೆ ಮೊಳಗಿಸಲು ಸಜ್ಜಾಗಿದೆ.

ಭರದ ಸಿದ್ಧತೆ

ಮಾ.11ರಂದು ಮಾಜಿ ಸಿಎಂಗಳಾದ ಬಿ.ಎಸ್‌. ಯಡಿಯೂರಪ್ಪ, ಜಗದೀಶ ಶೆಟ್ಟರ್‌ ನೇತೃತ್ವದ ತಂಡ ಮಸ್ಕಿ ಪಟ್ಟಣಕ್ಕೆ ಆಗಮಿಸಲಿದೆ. ಕೇಂದ್ರ ಸಚಿ ಭಗವಂತ ಕೂಬಾ, ರಾಜ್ಯ ಸಚಿವರಾದ ಬಿ. ಶ್ರೀರಾಮುಲು, ಆನಂದಸಿಂಗ್‌, ಹಾಲಪ್ಪ ಆಚಾರ ಸೇರಿ ಹಲವು ಮುಖಂಡರ ದಂಡೇ ಮಸ್ಕಿಗೆ ಆಗಮಿಸಲಿದೆ. ಇದಕ್ಕಾಗಿ ಲೀಡರ್‌ಗಳ ಎದುರಲ್ಲೇ ಬೃಹತ್‌ ಶಕ್ತಿ ಪ್ರದರ್ಶನಕ್ಕೆ ಇಲ್ಲಿನ ಬಿಜೆಪಿ ಮುಖಂಡರು ಅಣಿಯಾಗಿದ್ದಾರೆ. ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್‌ ನೇತೃತ್ವದಲ್ಲಿ ಸರಣಿ ಸಭೆ ನಡೆದಿದ್ದು, ಕಾರ್ಯಕ್ರಮಕ್ಕಾಗಿ ಬೃಹತ್‌ ವೇದಿಕೆ ಸಜ್ಜುಗೊಳಿಸಲಾಗಿದೆ. ಪಟ್ಟಣದ ಪೊಲೀಸ್‌ ಠಾಣೆ ಪಕ್ಕದಲ್ಲೇ ಇರುವ ವಿಶಾಲ ಖಾಲಿ ಜಾಗವನ್ನು ಸ್ವತ್ಛಗೊಳಿಸಲಾಗತ್ತಿದೆ. 30 ಸಾವಿರ ಜನಸಂಖ್ಯೆ ಸೇರುವ ಬೃಹತ್‌ ಪೆಂಡಾಲ್‌ ನಿರ್ಮಾಣ ಮಾಡಲಾಗುತ್ತಿದೆ. 30-50 ಜನ ಕೂರುವ ವೇದಿಕೆಯನ್ನೂ ಮಾಡಲಾಗುತ್ತಿದ್ದು, ಜನದಟ್ಟಣೆ ನಿಯಂತ್ರಣಕ್ಕೆ ಅಲ್ಲಲ್ಲಿ ಎಲ್‌ಇಡಿ ಪರದೆ ವ್ಯವಸ್ಥೆ ಮಾಡಲಾಗಿದೆ.

ಜನ ಸೇರಿಸಲು ಕಸರತ್ತು

ವಿಜಯ ಸಂಕಲ್ಪ ಯಾತ್ರೆ ಕಾರ್ಯಕ್ರಮದ ಮೂಲಕ ಮಸ್ಕಿಯಲ್ಲಿ ಬಿಜೆಪಿ ಚುನಾವಣೆ ಪ್ರಚಾರದ ಕಹಳೆ ಮೊಳಗಿಸಲು ರೆಡಿಯಾಗಿದೆ. ಇದಕ್ಕಾಗಿ ಕ್ಷೇತ್ರದ ಪ್ರತಿ ಹಳ್ಳಿಗೂ ಹೊರಟಿರುವ ಬಿಜೆಪಿ ಪಡೆ ಜನರನ್ನು ಸೇರಿಸಲು ಎಲ್ಲಿಲ್ಲದ ಕಸರತ್ತು ನಡೆದಿದೆ. ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್‌, ಅವರ ಪುತ್ರರಾದ ಪ್ರಸನ್ನ ಪಾಟೀಲ್‌, ಚೇತನ್‌ ಪಾಟೀಲ್‌, ಅಳಿಯ ರವಿಗೌಡ, ಮಂಡಲ ಅಧ್ಯಕ್ಷ ಶಿವಪುತ್ರ ಅರಳಹಳ್ಳಿ ಸೇರಿ ಹಲವರು ಹಳ್ಳಿ-ಹಳ್ಳಿಗೂ ತೆರಳಿ ಕಾರ್ಯಕ್ರಮಕ್ಕೆ ಬರುವಂತೆ ಜನರನ್ನು ಆಹ್ವಾನಿಸುತ್ತಿರುವುದು ಕಂಡು ಬರುತ್ತಿದೆ.

ಉಪಚುನಾವಣೆಯೇ ಬೇರೆ, ಸಾರ್ವತ್ರಿಕ ಚುನಾವಣೆಯೇ ಬೇರೆ. ಎರಡು ವರ್ಷದಲ್ಲಿ ಈಗಿನ ಶಾಸಕರ ಆಡಳಿತಕ್ಕೆ ಜನರು  ಬೇಸತ್ತಿದ್ದಾರೆ. ಪುನಃ ಬದಲಾವಣೆ ಬಯಸಿದ್ದಾರೆ. ಇದಕ್ಕೆ ಪೂರಕವಾಗಿ ಬಿಜೆಪಿ ಸರಕಾರದಿಂದ ಕ್ಷೇತ್ರಕ್ಕೆ ಆದ ಲಾಭಗಳ ಕುರಿತು ಜನರ ಮನವರಿಕೆ ಮಾಡಲಾಗುತ್ತಿದೆ. ಮಾ.11ರಂದು
ನಡೆಯುವ ಕಾರ್ಯಕ್ರಮಕ್ಕೆ 30 ಸಾವಿರ ಜನರು ಸೇರುವ ನಿರೀಕ್ಷೆ ಇದೆ.

ಪ್ರತಾಪಗೌಡ ಪಾಟೀಲ್‌ ಮಾಜಿ ಶಾಸಕರು, ಮಸ್ಕಿ

ಸಂದೇಶ ರವಾನೆ

ಕ್ಷೇತ್ರ ಅಸ್ತಿತ್ವಕ್ಕೆ ಬಂದಾಗಿನಿಂದಲೂ ಬರೋಬ್ಬರಿ ಮೂರು ಬಾರಿಯೂ ಪ್ರತಾಪಗೌಡ ಪಾಟೀಲ್‌ರೇ ಶಾಸಕರಾಗಿ ಆಯ್ಕೆಯಾಗಿದ್ದರು. ಆದರೆ 2018ರಲ್ಲಿ ಕಾಂಗ್ರೆಸ್‌ನಿಂದ ಆಯ್ಕೆಯಾಗಿದ್ದ ಪ್ರತಾಪಗೌಡ ಪಾಟೀಲ್‌, ಬಿಜೆಪಿ ಸರಕಾರ ರಚನೆಗೆ ನೆರವಾಗಲು ಆಪರೇಷನ್‌ ಕಮಲಕ್ಕೆ ಬಲಿಯಾಗಿ ರಾಜೀನಾಮೆ ನೀಡಿದ್ದರು. ಇದರ ಫಲವಾಗಿ ನಡೆದ ಉಪಚುನಾವಣೆಯಲ್ಲಿ ಸೋತು ಮಾಜಿಯಾಗಿದ್ದಾರೆ. ಈಗ ಪುನಃ ಸಾರ್ವತ್ರಿಕ ಚುನಾವಣೆಯಲ್ಲಿ ಅದೃಷ್ಠ ಪರೀಕ್ಷೆಗೆ ರೆಡಿಯಾಗಿದ್ದಾರೆ. ಉಪಚುನಾವಣೆಯಲ್ಲಿನ ಸೋಲಿನ ಕಹಿ ಮರೆತು ಪುನಃ ಗೆಲುವಿನ ನಗೆ ಬೀರಲು ಬೇಕಾದ ಎಲ್ಲ ಅಸ್ತ್ರಗಳನ್ನು ಬಳಸಿಕೊಳ್ಳಲು ಆರಂಭಿಸಿದ್ದಾರೆ.

„ಮಲ್ಲಿಕಾರ್ಜುನ ಚಿಲ್ಕರಾಗಿ

ಟಾಪ್ ನ್ಯೂಸ್

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

Kalaburagi: Shigavi result unexpected; We do not agree: C.T. Ravi

Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.